Homeಮುಖಪುಟತೆಲಂಗಾಣದಲ್ಲಿ ಮುಂದುವರಿದ 'ಆಪರೇಷನ್ ಹಸ್ತ'; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಮುಂದುವರಿದ ‘ಆಪರೇಷನ್ ಹಸ್ತ’; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್‌ಎಸ್‌ಗೆ ಭಾರಿ ಹಿನ್ನಡೆಯಾಗಿದ್ದು, ಗುರುವಾರ ತಡರಾತ್ರಿ ರಾಜ್ಯದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಪಕ್ಷದ ಆರು ಜನ ಎಂಎಲ್‌ಸಿಗಳು ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತ್ ರಾಷ್ಟ್ರ ಸಮಿತಿಯು ಆರು ಶಾಸಕರು ಸೇರಿದಂತೆ ಹಲವಾರು ನಾಯಕರು ಪಕ್ಷವನ್ನು ತೊರೆದಿದ್ದು, ಆಪರೇಷನ್ ಹಸ್ತದಿಂದ ಪಕ್ಷದ ನಾಯಕರು ಆಘಾತಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಆರು ಎಂಎಲ್‌ಸಿಗಳೆಂದರೆ, ದಂಡೆ ವಿಠಲ್, ಭಾನು ಪ್ರಸಾದ್ ರಾವ್, ಎಂಎಸ್ ಪ್ರಭಾಕರ್, ಬೊಗ್ಗರಪು ದಯಾನಂದ್, ಯೆಗ್ಗೆ ಮಲ್ಲೇಶಂ ಮತ್ತು ಬಸ್ವರಾಜು ಸರಯ್ಯ ಎಂದು ಮೂಲಗಳು ತಿಳಿಸಿವೆ.

ಟಿಪಿಸಿಸಿ ಅಧ್ಯಕ್ಷರೂ ಆಗಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸದಲ್ಲಿ ಬಿಆರ್‌ಎಸ್ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ತೆಲಂಗಾಣದಲ್ಲಿ ಎಐಸಿಸಿ ಪಕ್ಷದ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

ತೆಲಂಗಾಣ ಲೆಜಿಸ್ಲೇಟ್ ಕೌನ್ಸಿಲ್ ವೆಬ್‌ಸೈಟ್ ಪ್ರಕಾರ, ಬಿಆರ್‌ಎಸ್ 25 ಮತ್ತು ಕಾಂಗ್ರೆಸ್ ನಾಲ್ಕು ಸದಸ್ಯರನ್ನು ಹೊಂದಿದೆ. ನಾಲ್ಕು ನಾಮನಿರ್ದೇಶಿತ ಎಂಎಲ್‌ಸಿಗಳು, ಎಐಎಂಐಎಂನಿಂದ ಇಬ್ಬರು ಸದಸ್ಯರು, ಬಿಜೆಪಿ, ಪಿಆರ್‌ಟಿಯುನಿಂದ ತಲಾ ಒಬ್ಬರು ಮತ್ತು ಸ್ವತಂತ್ರ ಒಬ್ಬರು, 40 ಸದಸ್ಯರ ಸದನದಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ರೇವಂತ್ ರೆಡ್ಡಿ ಎರಡು ದಿನಗಳ ಪ್ರವಾಸದಿಂದ ಗುರುವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ಕೂಡಲೇ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಹೊಸ ಪಕ್ಷಾಂತರದಿಂದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಲ 10ಕ್ಕೆ ಏರಲಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ನಂತರ ಆರು ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಆಡಳಿತ ಪಕ್ಷದತ್ತ ಮುಖ ಮಾಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಆರ್‌ಎಸ್ 39 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತ್ತು.

ಆದಾಗ್ಯೂ, ಸಿಕಂದರಾಬಾದ್ ಕಂಟೋನ್ಮೆಂಟ್‌ನ ಬಿಆರ್‌ಎಸ್ ಶಾಸಕಿ ಜಿ ಲಾಸ್ಯ ನಂದಿತಾ ಈ ವರ್ಷದ ಆರಂಭದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸಿಕಂದರಾಬಾದ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಅದರ ಬಲವನ್ನು 65 ಕ್ಕೆ ಹೆಚ್ಚಿಸಲು ಕಾರಣವಾಯಿತು.

‘ಇದು ಯಾವ ರೀತಿಯ ನ್ಯಾಯ ಪತ್ರ..’; ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಕೆಟಿಆರ್

ಸಾಲುಸಾಲು ಬಿಆರ್‌ಎಸ್ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಪಕ್ಷದ ಮುಖಂಡ ಕೆಟಿ ರಾಮ್‌ ರಾವ್, ಇದು ಯಾವ ರೀತಿಯ ನ್ಯಾಯ ಪತ್ರ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಆರ್‌ಎಸ್ ಸಂಸದ ಕೇಶವ ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಪಕ್ಷಾಂತರ ಮಾಡಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಬಿಆರ್‌ಎಸ್ ಶಾಸಕರ ಬಗ್ಗೆ ಎನು ಹೇಳುತ್ತೀರಾ? ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಅರ್ಧ ಡಜನ್ ಇತರ ಬಿಆರ್‌ಎಸ್ ಶಾಸಕರ ಬಗ್ಗೆ ಏನು ಹೇಳುತ್ತೀರಾ? ರಾಹುಲ್ ಗಾಂಧಿಯವರೆ, ನೀವು ಸಂವಿಧಾನವನ್ನು ಎತ್ತಿ ಹಿಡಿಯಲು ಹೊರಟಿರುವುದು ಹೀಗೆಯೇ” ಎಂದು ಪ್ರಶ್ನಿಸಿದ್ದಾರೆ.

“ನೀವು ಬಿಆರ್‌ಎಸ್ ಶಾಸಕರನ್ನು ರಾಜೀನಾಮೆ ನೀಡಲು ಸಾಧ್ಯವಾಗದಿದ್ದರೆ, ಕಾಂಗ್ರೆಸ್ ಪ್ರಣಾಳಿಕೆಯಂತೆ 10 ತಿದ್ದುಪಡಿಗಳನ್ನು ನಿಗದಿಪಡಿಸಲು ನೀವು ಬದ್ಧರಾಗಿದ್ದೀರಿ ಎಂದು ರಾಷ್ಟ್ರವು ಹೇಗೆ ನಂಬುತ್ತದೆ? ಯೇ ಕೈಸಾ ನ್ಯಾಯ ಪತ್ರ ಹೈಂ? (ಇದು ಯಾವ ರೀತಿಯ ನ್ಯಾಯ ಪತ್ರ) ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅಮೃತಪಾಲ್, ರಶೀದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...