Homeಕರ್ನಾಟಕಆಪರೇಷನ್‌ ಕಮಲ ನಡೆಸಿದ್ದು ಅಮಿತ್‌ ಶಾ ಎಂದು ಬಿ.ಎಸ್‌ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ: ಸಿದ್ದು ಆರೋಪ

ಆಪರೇಷನ್‌ ಕಮಲ ನಡೆಸಿದ್ದು ಅಮಿತ್‌ ಶಾ ಎಂದು ಬಿ.ಎಸ್‌ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ: ಸಿದ್ದು ಆರೋಪ

ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುತ್ತಿದ್ದ ಯಡಿಯೂರಪ್ಪನವರು ಈಗ ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸರ್ಕಾರದ ನೂರು ದಿನಗಳನ್ನು ಒಂದು ಅದ್ಭುತ ಆಡಿಯೋ ಪ್ರಸಾರದ ಮೂಲಕ ಆಚರಿಸಿದ್ದಾರೆ. ಈ ಮೂಲಕ ತಾವು ನಡೆಸಿದ್ದ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ರಾಜ್ಯದ ಜನ ಅವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುತ್ತಿದ್ದ ಯಡಿಯೂರಪ್ಪನವರು ಈಗ ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ಇಂತಹ ಗೃಹಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ? ನಮ್ಮ‌ ಪಕ್ಷದ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಮುಂಬೈನ ಹೊಟೇಲ್‌ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ ಅಮಿತ್ ಶಾ ಅವರು ಆಪರೇಷನ್ ಕಮಲ ಎಂಬ ಅಸಂವಿಧಾನಿಕ ಕಾರ್ಯಾಚರಣೆಯ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು.

ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದ ಕಾರಣ ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಇದನ್ನು ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ. ನಮ್ಮ‌ ಪಕ್ಷದ ಪರವಾಗಿ ರಾಜ್ಯಪಾಲರನ್ನು ಭೇಟಿಮಾಡಿ, ಯಡಿಯೂರಪ್ಪನವರ ರಾಜೀನಾಮೆ ಪಡೆಯುವಂತೆ ಮನವಿ ಪತ್ರ ನೀಡಲಿದ್ದೇವೆ. ರಾಷ್ಟ್ರಪತಿಯವರನ್ನೂ ಭೇಟಿ ಮಾಡಿ, ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...