Homeಕರ್ನಾಟಕಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ: ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ತಿರುಗೇಟು

ಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ: ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ತಿರುಗೇಟು

- Advertisement -
- Advertisement -

ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮೂಲಕ ಬಿಎಲ್ ಸಂತೋಷ್ ಅವರಿಗೆ ಸವಾಲು ಹಾಕಿದ್ದಾರೆ. ”ಬಿಎಲ್ ಸಂತೋಷ್ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದಿದ್ದರು.

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ”ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ” ಎಂದು ಹೇಳಿದರು.

”ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ದೊಡ್ಡ ಸುದ್ದಿ ಮಾಡುತ್ತಿದೆ. ಬಿಜೆಪಿ ಒಪ್ಪಿಗೆ ಕೊಟ್ಟರೆ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್ ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ಹಿಂದೆ ಅಥವಾ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇರಲ್ಲ” ಎಂದಿದ್ದಾರೆ.

”17 ಜನ ಶಾಸಕರು ಸಮಾಧಾನ ಇಲ್ಲವೆಂದು ನಮ್ಮ ಪಕ್ಷಕ್ಕೆ ಬಂದರು. ರಾಯರೆಡ್ಡಿ ಅವರು ಯಾರೋ ಪಕ್ಷ ಕಟ್ಟಿದ್ದರು, ಯಾರೋ ಅಧಿಕಾರಕ್ಕೆ ಬಂದರು ಅಂದಿದ್ದಾರೆ. ಮುನಿಯಪ್ಪನವರು ಎಲ್ಲಾ ಹಿರಿಯರು ರಾಜೀನಾಮೆ ಕೊಡಬೇಕು ಎಂದಿದ್ದಾರೆ. ಹೀಗಾದ್ರೆ ಸರಕಾರ ಉಳಿಯುತ್ತದಾ. ಎಂ.ಬಿ.ಪಾಟೀಲ್ ಅವರು ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎನ್ನುತ್ತಾರೆ. ಸರಕಾರದ ಬಗ್ಗೆ ಕೆಲವು ಶಾಸಕರ ಅಸಮಾಧಾನವಿದೆ ಎನ್ನುತ್ತಾರೆ. ಡಿಕೆಶಿ ಹೌದು ಅಸಮಾಧಾನ ಇದೆ ನಾವು ಸರಿ ಮಾಡಿಕೊಳ್ಳುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತಿಗೆ ಒಂದಕ್ಕೊಂದು ಅರ್ಥವೇ ಇಲ್ಲ” ಎಂದರು.

”ಪ್ರಿಯಾಂಕ ಖರ್ಗೆಗೆ ಅಭಿವೃದ್ಧಿ ಮಾಡಲು ಆಗುತ್ತಿಲ್ಲ . ಅಭಿವೃದ್ಧಿ ಮಾಡಲಾಗದಿದ್ದರೆ ಯಾಕಿದ್ದೀರಿ? ರಾಜೀನಾಮೆ ಕೊಟ್ಟು ಹೋಗಿ. ಒಂದೇ ಒಂದು ಇಲಾಖೆಗೆ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಇದನ್ನು ಸರಕಾರ ಎಂದು ಕರೆಯಬೇಕೆ?” ಎಂದು ಪ್ರಶ್ನಿಸಿದರು.

”ಕಳೆದ ಸರಕಾರದಲ್ಲಿ ನಡೆದ ಕಾಮಗಾರಿಗೆ ಇನ್ನೂ ಹಣ ಬಿಡುಗಡೆ ಆಗಿಲ್ಲ. ಕೆಲಸ ಪೂರ್ಣವಾಗಿದೆ ಆದರೂ ಹಣ ಬಿಡುಗಡೆಯಾಗಿಲ್ಲ. ಈ ಸರಕಾರ ಪೂರ್ಣ ಭ್ರಷ್ಟಾಚಾರದಿಂದ ಕೂಡಿದೆ. ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದು ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ” ಎಂದರು.

”ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಯಾವಾಗ ಮಾಡಬೇಕು ಎಂಬುದು ನಮಗೆ ಗೊತ್ತಿದೆ. ನಾವು ಮಾಡಿಕೊಳ್ಳುತ್ತೇವೆ. ನಿಮ್ಮ ಪಕ್ಷಕ್ಕೆ ಎರಡು ವರ್ಷ ಎಐಸಿಸಿಗೆ ಅಧ್ಯಕ್ಷರೇ ಇರಲಿಲ್ಲ. ಇನ್ನು ಸರಕಾರ ಬಂದು ಮೂರು ತಿಂಗಳಾಗಿದೆ. ವಿಪಕ್ಷ ನಾಯಕ, ಅಧ್ಯಕ್ಷರಾಗಿ ಮಾಡುತ್ತೇವೆ. ನಮ್ಮ ಎಲ್ಲಾ ಶಾಸಕರು ವಿಪಕ್ಷದ ನಾಯಕರೇ, ಯಾರು ಯಾರಿಗೂ ಕಡಿಮೆಯಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...