Homeಮುಖಪುಟಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

- Advertisement -
- Advertisement -

ಬಿಹಾರದಲ್ಲಿ ಎನ್‌ಡಿಎ ಜೊತೆಗಿನ ಮೈತ್ರಿ ಮುರಿದು ಮಹಾಘಟಬಂಧನ್‌ ಸೇರಿ ಸರ್ಕಾರ ರಚಿಸಿದ್ದ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ರವರಿಗೆ ಮಣಿಪುರ ರಾಜ್ಯದ ರಾಜಕೀಯ ಬೆಳವಣಿಗೆಗಳು ನಿರಾಶೆ ತಂದಿವೆ. ತಮ್ಮದೇ ಪಕ್ಷದ ಐವರು ಶಾಸಕರು ಪಕ್ಷ ತೊರೆದು ಬಿಜೆಪಿ ಜೊತೆಗೆ ವಿಲೀನವಾಗಿದ್ದಾರೆ.

ಮಣಿಪುರದಲ್ಲಿ ಜೆಡಿಯು ಪಕ್ಷವು 6 ಶಾಸಕರನ್ನು ಹೊಂದಿತ್ತು. ಆದರೆ ಅದರಲ್ಲಿ 5 ಶಾಸಕರು ಬಿಜೆಪಿ ಜೊತೆ ವಿಲೀನವಾಗಿರುವುದರಿಂದ ಶಾಸಕರ ಬಲ 1ಕ್ಕೆ ಕುಸಿದಿದೆ. 5 ಶಾಸಕರು ಒಟ್ಟಿಗೆ ಪಕ್ಷಾಂತರ ಮಾಡಿರುವುದರಿಂದ, ಒಟ್ಟು ಶಾಸಕರಲ್ಲಿ ಮೂರನೇ ಎರಡಕ್ಕಿಂತ ಹೆಚ್ಚುಇರುವುದರಿಂದ ಆ ಪಕ್ಷಾಂತರ ಮಾನ್ಯವಾಗಿದೆ ಎಂದು ಮಣಿಪುರ ಅಸೆಂಬ್ಲಿ ಸ್ಪೀಕರ್ ತಿಳಿಸಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಜೆಡಿಯು ಪಕ್ಷಕ್ಕೆ ಬೀಳುತ್ತಿರುವ ಎರಡನೇ ಹೊಡೆತ ಇದಾಗಿದೆ. ಪಕ್ಕದ ಅರುಣಾಚಲ ಪ್ರದೇಶದಲ್ಲಿ ಜೆಡಿಯು ಪಕ್ಷದಿಂದ 7 ಶಾಸಕರು ಆಯ್ಕೆಯಾಗಿದ್ದರು. ಆದರೆ 2020ರಲ್ಲಿ 6 ಶಾಸಕರು ಬಿಜೆಪಿ ಸೇರಿದ್ದರು. ಉಳಿದಿದ್ದ ಏಕೈಕ ಶಾಸಕ ಕೂಡ ಕಳೆದ ವಾರ ಬಿಜೆಪಿ ಸೇರಿದ್ದಾರೆ. ಅಲ್ಲಿಗೆ ಅರುಣಾಚಲದಲ್ಲಿ ಜೆಡಿಯು ಶಾಸಕರ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ಒಂದು ಕಡೆ ರಾಷ್ಟ್ರೀಯ ನಾಯಕರಾಗಿ ಪ್ರಧಾನಿಯಾಗಬೇಕೆಂಬ ಹಂಬಲದಲ್ಲಿದ್ದ ನಿತೀಶ್‌ ಕುಮಾರ್‌ರವರ ಕನಸಿಗೆ ಈ ಬೆಳವಣಿಗೆಗಳು ತಣ್ಣೀರು ಎರಚಿವೆ.

ಮಣಿಪುರದಲ್ಲಿ ಈ ವರ್ಷ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಸ್ಪರ್ಧಿಸಿದ್ದ 38 ಕ್ಷೇತ್ರಗಳ ಪೈಕಿ 6ರಲ್ಲಿ ಗೆದ್ದಿತ್ತು. ಆದರೆ ಶಾಸಕರಾದ ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್‌.ಎಂ ಖೌಟೆ ಮತ್ತು ತಂಗಜಮ್ ಅರುಣ್‌ಕುಮಾರ್ ಎಂಬ ಐವರು ಶಾಸಕರು ಬಿಜೆಪಿ ಸೇರಿದ್ದಾರೆ. ಮತ್ತೊಬ್ಬ ಜೆಡಿಯು ಶಾಸಕ ಅಬ್ದುಲ್ ನಾಸೀರ್ ಸಹ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

60 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷವು 37 ಶಾಸಕರೊಂದಿಗೆ ಅತಿದೊಡ್ಡ ಪಕ್ಷವಾಗಿದೆ. ಅದರ ಮಿತ್ರಪಕ್ಷ ಎನ್‌ಪಿಪಿ 7 ಸದಸ್ಯರನ್ನು ಹೊಂದಿದೆ.


ಇದನ್ನೂ ಓದಿ; ಮುರುಘಾ ಶರಣರ ಮೇಲೆ ಅತ್ಯಾಚಾರ ಆರೋಪ: ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...