Homeಕರ್ನಾಟಕ'ಆಪರೇಶನ್ ಕಮಲ' ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಆಪರೇಶನ್ ಕಮಲ’ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

“ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ; ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ನಂತರ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಈಗಾಗಲೇ ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

“ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ.
ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ; ಇಬ್ಬರೂ ಸಮರ್ಥ ಅಭ್ಯರ್ಥಿಗಳು” ಎಂದರು.

“ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ; ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ, ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ; ದೆಹಲಿ ಸಿಎಂ ನಿವಾಸದಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಆರೋಪ; ಸ್ಪಷ್ಟನೆ ನೀಡದ ಆಪ್ ಮುಖಂಡರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...