Homeಮುಖಪುಟಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

ಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

- Advertisement -
- Advertisement -

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಗುರುವಾರ (ಜೂ.19) ಮುಂಜಾನೆ ದೆಹಲಿಯಲ್ಲಿ ಬಂದಿಳಿದಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಟೆಹ್ರಾನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಅವರಲ್ಲಿ 110 ಮಂದಿ ಗಡಿಯನ್ನು ದಾಟಿ ಅರ್ಮೇನಿಯಾಗೆ ತೆರಳಿದ್ದರು. ಮಂಗಳವಾರ ಭಾರತೀಯ ರಾಯಭಾರ ಕಚೇರಿಯು ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಾಡಿದ ವ್ಯವಸ್ಥೆಗಳ ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ.

ಹೆಚ್ಚಿನ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾರೆ.

“ನಮ್ಮಲ್ಲಿ ವಿಮಾನಗಳು ಸಿದ್ಧವಾಗಿವೆ. ಇಂದು ನಾವು ಮತ್ತೊಂದು ವಿಮಾನವನ್ನು ಕಳುಹಿಸುತ್ತೇವೆ. ನಾವು ತುರ್ಕಮೆನಿಸ್ತಾನದಿಂದ ಇನ್ನೂ ಕೆಲವು ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಸ್ಥಳಾಂತಗೊಳ್ಳಲು ಬಯಸುವ ಜನರು ಯಾವುದೇ ಮನವಿಗಾಗಿ ನಮ್ಮ 24 ಗಂಟೆಗಳು ಕಾರ್ಯಾಚರಿಸುವ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಪರಿಸ್ಥಿತಿ ಬಿಗಡಾಯಿಸಿದರೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಹೆಚ್ಚಿನ ವಿಮಾನಗಳನ್ನು ಕಳುಹಿಸುತ್ತೇವೆ” ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರೂ ಆಗಿರುವ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತುರ್ಕಮೆನಿಸ್ತಾನ್ ಮತ್ತು ಅರ್ಮೇನಿಯಾ ಸರ್ಕಾರಗಳು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ದೆಹಲಿಗೆ ಬಂದಿಳಿದವರಲ್ಲಿ ಒಬ್ಬರಾದ ಕಾಶ್ಮೀರದ ವಿದ್ಯಾರ್ಥಿನಿ ವರ್ತಾ, “ಇರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಮೊದಲ ವ್ಯಕ್ತಿಗಳು ನಾವು. ಅಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು. ನಾವು ಭಯಭೀತರಾಗಿದ್ದೆವು. ನಮ್ಮನ್ನು ಇಲ್ಲಿಗೆ ಕರೆತರಲು ಅತ್ಯಂತ ತ್ವರಿತವಾಗಿ ಕೆಲಸ ಮಾಡಿದ ಭಾರತ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಮೇನಿಯನ್ ಅಧಿಕಾರಿಗಳು ಕೂಡ ತುಂಬಾ ಸಹಾಯಕ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.

ಜೂನ್ 13ರಂದು ಪ್ರಾರಂಭಗೊಂಡ ಇರಾನ್ ಮತ್ತು ಇಸ್ರೇಲ್ ಸಂಘರ್ಷ ಮುಂದುವರಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಟೆಹ್ರಾನ್‌ನಲ್ಲಿರುವ ಇರಾನ್‌ನ ಆಂತರಿಕ ಭದ್ರತಾ ಪ್ರಧಾನ ಕಚೇರಿಯನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಇರಾನ್‌ ಕೂಡ ಇಸ್ರೇಲ್ ಕಡೆಗೆ ಹೆಚ್ಚಿನ ಕ್ಷಿಪಣಿಗಳು ಹಾರಿಬಿಟ್ಟಿವೆ ಎಂದು ವರದಿಯಾಗಿದೆ.

ಎರಡೂ ದೇಶಗಳ ಸಂಘರ್ಷದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪದ ಆಯ್ಕೆಗಳ ಬಗ್ಗೆ ಇನ್ನೂ ಯೋಚಿಸುತ್ತಿದ್ದೇವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದಕ್ಕೂ ಮೊದಲು ಹೇಳಿಕೆ ನೀಡಿರುವ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ, “ಇರಾನ್ ತನ್ನ ಮೇಲೆ ಹೇರಲ್ಪಟ್ಟ ಯುದ್ದವನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ಮೇಲಿನ ಯಾವುದೇ ದಾಳಿಯು ಸರಿಪಡಿಸಲಾಗದ ಪರಿಣಾಮಗಳನ್ನು ಉಂಟು ಮಾಡಬಹುದು” ಎಂದು ಅಮೆರಿಕಕ್ಕೆ ಎಚ್ಚರಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ದಾಟಿದೆ. ಇದರಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಇಸ್ರೇಲ್ ಮೇಲಿನ ಇರಾನ್ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...