ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಂಜಾಬ್‌ನ ಆರು ಗಡಿ ಜಿಲ್ಲೆಗಳ ಎಲ್ಲಾ ಶಾಲೆಗಳು ಗುರುವಾರ ಮುಚ್ಚಲ್ಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿರೋಜ್‌ಪುರ, ಪಠಾಣ್‌ಕೋಟ್, ಫಜಿಲ್ಕಾ, ಅಮೃತಸರ, ಗುರುದಾಸ್ಪುರ ಮತ್ತು ತರಣ್ ತರಣ್ ಜಿಲ್ಲೆಗಳಲ್ಲಿನ ಶಾಲೆಗಳು ಮುಚ್ಚಲ್ಪಟ್ಟಿವೆ ಎಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂಧೂರ
ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದರು.
ಇದರ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ದಾಳಿ ನಡೆಸಿದ ಪ್ರದೇಶಗಳಲ್ಲಿ ಜೈಶ್-ಎ-ಮೊಹಮ್ಮದ್ ಭದ್ರಕೋಟೆಯಾದ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾದ ನೆಲೆ ಸೇರಿವೆ.
ಜಿಲ್ಲೆಯ ಎಲ್ಲಾ ಶಾಲೆಗಳು ಮೇ 8 ರಿಂದ 11 ರವರೆಗೆ ಮುಚ್ಚಲ್ಪಡುತ್ತವೆ ಎಂದು ತರಣ್ ತರಣ್ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಫಿರೋಜ್‌ಪುರದಲ್ಲಿ, ಮುಂದಿನ ಆದೇಶದವರೆಗೆ ಮುಂದಿನ 72 ಗಂಟೆಗಳ ಕಾಲ ಶಾಲೆಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಜಿಲ್ಕಾದಲ್ಲಿನ ಶಾಲೆಗಳು ಮುಂದಿನ ಆದೇಶದವರೆಗೆ ಮುಚ್ಚಲ್ಪಡುತ್ತವೆ ಎಂದು ಅವರು ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ 26 ಜನರ ಹತ್ಯಾಕಾಂಡದ ಎರಡು ವಾರಗಳ ನಂತರ, ಭಾರತವು ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಗಡಿಯಾಚೆಗಿನ ಸೇನಾ ದಾಳಿಗಳನ್ನು ನಡೆಸಿತು. ಭಾರತದ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಕಾಶ್ಮೀರದ ಗಡಿಗಳಲ್ಲಿ ಗುಂಡಿನ ದಾಳಿ ನಡೆಸಿದ್ದು ಸುಮಾರು 15 ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಜೋಧಪುರ: ಜಾತಿ ಆಧಾರಿತ ಹಲ್ಲೆ ಆರೋಪ; ದಲಿತ ನರ್ಸ್ ಆತ್ಮಹತ್ಯೆಗೆ ಶರಣು

