Homeಮುಖಪುಟಸಂಸತ್ತಿನಲ್ಲಿ ಇಂದಿನಿಂದ 'ಆಪರೇಷನ್ ಸಿಂಧೂರ್' ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

- Advertisement -
- Advertisement -

ಇಂದಿನಿಂದ (ಜುಲೈ 28, ಸೋಮವಾರ) ಸಂಸತ್ತಿನಲ್ಲಿ ‘ಆಪರೇಷನ್ ಸಿಂಧೂರ್’ ಕುರಿತ ಚರ್ಚೆ ಆರಂಭಗೊಳ್ಳಲಿದೆ. ಆಡಳಿತರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಚರ್ಚೆಗೆ ಸರ್ವ ಸನ್ನದ್ದವಾಗಿದೆ.

ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯುವ ಮೂರು ದಿನಗಳ ಕಾಲ ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ತನ್ನ ಎಲ್ಲಾ ಸಂಸದರಿಗೆ ಭಾನುವಾರ ವಿಪ್ ಜಾರಿಗೊಳಿಸಿದೆ.

ಜುಲೈ 21ರಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡಿದೆ. ಆದರೆ, ಇದುವರೆಗೆ ಸರಿಯಾಗಿ ಕಲಾಪಗಳು ನಡೆದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿ, ಅಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಸುವಂತೆ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ. ಇದರಿಂದ ಉಭಯ ಸದನಗಳ ಕಲಾಪಗಳು ಪದೇ ಪದೇ ಮುಂದೂಡಿಕೆಯಾಗಿವೆ.

ಇಂದಿನಿಂದ ಆಪರೇಷನ್ ಸಿಂಧೂರ್ ವಿಷಯದ ಮೂಲಕ ಸರಿಯಾದ ಚರ್ಚೆ ಆರಂಭಗೊಳ್ಳಲಿದೆ. ಆದರೆ, ಬಿಹಾರ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು  ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಿದ್ದತೆ ನಡೆಸಿವೆ. ಇದರಿಂದ ಸಂಸತ್ತಿನಲ್ಲಿ ವಾಗ್ಯುದ್ಧ ನಡೆಯುವ ಎಲ್ಲಾ ಸಾಧ್ಯತೆ ಇದೆ.

ಆಡಳಿತ ಪಕ್ಷದ ಅಥವಾ ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚರ್ಚೆ ಆರಂಭಿಸಲಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಲೋಕಸಭೆಯಲ್ಲಿ ಪ್ರತಿಪಕ್ಷದ ಉಪನಾಯಕ ಗೌರವ್ ಗೊಗೋಯ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಸದರೂ ಆಗಿರುವ ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಸಜ್ಜು ಮಾಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಸಿಂಧೂರ್ ಕುರಿತು ಮಾತನಾಡಲು ಮೂರು ಗಂಟೆಗಳ ಸಮಯ ನೀಡಲಾಗಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಮಾತನಾಡುವ ಸಾಧ್ಯತೆ ಇದೆ.

ಆಡಳಿತ ಕೂಟದಿಂದ ರಾಜನಾಥ್ ಸಿಂಗ್ ಮಾತ್ರವಲ್ಲದೆ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಮಾತನಾಡಲಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಚರ್ಚೆಯಲ್ಲಿ ಮಧ್ಯಪ್ರವೇಶಿಸಿ ತಮ್ಮ ಸರ್ಕಾರದ ನಿಲುವು ಮತ್ತು ಕೈಗೊಂಡ ಕ್ರಮಗಳನ್ನು ತಿಳಿಸುವ ಸಾಧ್ಯತೆ ಇದೆ.

ಸೋಮವಾರ, ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಸದನ ಮುಂದೂಡಿಕೆಯಾಗುವವರೆಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಪಕ್ಷದ ನಿಲುವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್‌ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ನೀಡಲಾಗಿದೆ. ಮುಖ್ಯ ಸಚೇತಕ ಕೋಡಿಕುನ್ನಿಲ್ ಸುರೇಶ್ ವಿಪ್ ಜಾರಿಗೊಳಿಸಿದ್ದಾರೆ.

ಲೋಕಸಭಾ ಸಚಿವಾಲಯವು ಸೋಮವಾರದ ತನ್ನ ಕಾರ್ಯಸೂಚಿಯಲ್ಲಿ ‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ಬಲವಾದ, ಯಶಸ್ವಿ ಮತ್ತು ನಿರ್ಣಾಯಕ ‘ಆಪರೇಷನ್ ಸಿಂಧೂರ್’ ಕುರಿತು ವಿಶೇಷ ಚರ್ಚೆ”ಯನ್ನು ಪಟ್ಟಿ ಮಾಡಿದೆ.

ಶಶಿ ತರೂರ್ ಮಾತಿನತ್ತ ಎಲ್ಲರ ಚಿತ್ತ

ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಕಾಂಗ್ರೆಸ್ ಸಂಸದ ಶಶಿ ತರೂರ್ ಯಾವ ರೀತಿ ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿದೆ. ಏಕೆಂದರೆ, ಆಪರೇಷನ್ ಸಿಂಧೂರ್ ಬಳಿಕ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ತರೂರ್ ಕೊಂಡಾಡಿದ್ದರು. ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಕಾಂಗ್ರೆಸ್ ಪಕ್ಷದ ನಿಲುವಿಗಿಂತ ಭಿನ್ನವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಭಯೋತ್ಪಾದನೆಯ ಕುರಿತು ಭಾರತ ನಿಲುವು ತಿಳಿಸಲು ಕೇಂದ್ರ ಸರ್ಕಾರ ಕಳಿಸಿದ್ದ ನಿಯೋಗವೊಂದರ ನೇತೃತ್ವನ್ನು ತರೂರ್ ವಹಿಸಿದ್ದರು. ನಿಯೋಗಕ್ಕೆ ತರೂರ್ ಹೆಸರನ್ನು ಕಾಂಗ್ರೆಸ್ ಅಧಿಕೃತವಾಗಿ ನೀಡಿರಲಿಲ್ಲ. ಆದರೂ, ತರೂರ್‌ಗೆ ಸರ್ಕಾರ ಅವಕಾಶ ನೀಡಿತ್ತು. ವಿದೇಶಕ್ಕೆ ಹೋಗಿ ಬಂದ ಬಳಿಕ ತರೂರ್ ಕೇಂದ್ರ ಸರ್ಕಾರದ ಪರ ಮಾತನಾಡುವುದು ಹೆಚ್ಚಾಗಿದೆ. ಇದು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಅಪರೇಷನ್ ಸಿಂಧೂರ್ ಕುರಿತ ಚರ್ಚೆಗೆ ಕಾಂಗ್ರೆಸ್ ಪಕ್ಷ ತರೂರ್ ಅವರನ್ನು ಆಯ್ಕೆ ಮಾಡಿದೆಯೇ ಎಂಬುವುದರ ಬಗ್ಗೆ ಮಾಹಿತಿಯಿಲ್ಲ. ಒಂದು ವೇಳೆ ತರೂರ್ ಮಾತನಾಡಿದರೆ ಯಾರ ಪರ ಮಾತನಾಡಬಹುದು? ಕಾಂಗ್ರೆಸ್ ಸಂಸದರಾಗಿ ತನ್ನ ಪಕ್ಷದ ನಿಲುವನ್ನು ಬೆಂಬಲಿಸಬಹುದಾ? ಇಲ್ಲ ಸರ್ಕಾರದ ಪರ ಬ್ಯಾಟ್ ಬೀಸಬಹುದಾ? ಎಂಬ ಕುತೂಹಲ ಮೂಡಿದೆ.

ಕಾಂಗ್ರೆಸ್ ಸ್ಪೀಕರ್‌ಗೆ ಕೊಟ್ಟಿರುವ ಪಟ್ಟಿಯಲ್ಲಿ ತರೂರ್ ಹೆಸರನ್ನು ಸೇರಿಸದಿದ್ದರೂ, ಸ್ಪೀಕರ್ ಇಚ್ಛಿಸಿದರೆ ತರೂರ್ ಅವರಿಗೆ ಮಾತನಾಡಲು ಅವಕಾಶ ಕೊಡಬಹುದು. ಅದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇನ್ನು ಸಮಾಜವಾದಿ ಪಕ್ಷಕ್ಕೆ ಮಾತನಾಡಲು 65 ನಿಮಿಷಗಳ ಸಮಯ ನಿಗದಿಪಡಿಸಲಾಗಿದೆ. ಅಖಿಲೇಶ್ ಯಾದವ್ ಮತ್ತು ರಾಜೀವ್ ರೈ ಮಾತನಾಡುವ ಸಾಧ್ಯತೆ ಇದೆ.

ಅನುರಾಗ್ ಠಾಕೂರ್, ಸುಧಾಂಶು ತ್ರಿವೇದಿ ಮತ್ತು ನಿಶಿಕಾಂತ್ ದುಬೆ ಅವರಂತಹ ಸಚಿವರು ಮತ್ತು ನಾಯಕರ ತಂಡದ ಜೊತೆಗೆ, ಆಡಳಿತಾರೂಢ ಎನ್‌ಡಿಎ ಆಪರೇಷನ್ ಸಿಂಧೂರ್ ನಂತರ ಭಾರತದ ನಿಲುವನ್ನು ತಿಳಿಸಲು 30ಕ್ಕೂ ಹೆಚ್ಚು ದೇಶಗಳಿಗೆ ಪ್ರಯಾಣಿಸಿದ್ದ ಏಳು ಬಹು-ಪಕ್ಷ ನಿಯೋಗಗಳಿಂದ ತನ್ನ ಸದಸ್ಯರನ್ನು ಚರ್ಚಾ ಕಣಕ್ಕಿಳಿಸುವ ನಿರೀಕ್ಷೆಯಿದೆ. ಅವರಲ್ಲಿ ಶಿವಸೇನೆಯ ಶ್ರೀಕಾಂತ್ ಶಿಂಧೆ, ಜೆಡಿ (ಯು) ನ ಸಂಜಯ್ ಝಾ ಮತ್ತು ಟಿಡಿಪಿಯ ಹರೀಶ್ ಬಾಲಯೋಗಿ ಮತ್ತು ಇತರರು ಸೇರಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚರ್ಚೆ ನಡೆಸಬೇಕು ಎಂಬುವುದು ಪ್ರತಿಪಕ್ಷಗಳ ಆಗ್ರಹವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರು, ಪ್ರತಿಯೊಂದು ವಿಷಯವನ್ನು ಸಂಸತ್ತಿನಲ್ಲಿ ಏಕಕಾಲದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ನಿಯಮಗಳಿಗೆ ಅನುಸಾರವಾಗಿ ಎಸ್‌ಐಆರ್ ಕುರಿತು ಚರ್ಚೆಯ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...