Homeಕರ್ನಾಟಕ'ಆಪರೇಷನ್ ಸಿಂಧೂರ' ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ

‘ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕರ ತಾಣಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ, ಬುಧವಾರ ಕಾವೇರಿ ನಿವಾಸದಲ್ಲಿ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ. ರಾಜ್ಯದ ಪರವಾಗಿ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಹೇಳಿದರು.

‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸುಮಾರು 9 ಭಯೋತ್ಪಾದಕ ನೆಲೆಗಳನ್ನು ಸೇನೆ ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಉಗ್ರರ ಮೇಲಿನ ದಾಳಿ ಹಿನ್ನೆಲೆ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಪಹಲ್ಗಾಮ್‌ನಲ್ಲಿ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ, ಪಾಕಿಸ್ತಾನ ಅದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಸಿಎಂ ಹೇಳಿದರು.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ, ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲಾ ದೇಶಗಳಿಗೆ ಕೂಡಾ ಎಚ್ಚರಿಕೆಯ ಗಂಟೆಯಾಗಿದೆ ಎಂದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

‘ಭಯೋತ್ಪಾದನಾ ಕೇಂದ್ರಗಳ ನಾಶದ ಹಕ್ಕು ಬಳಸಿದ್ದೇವೆ’ | ಆಪರೇಷನ್ ಸಿಂಧೂರ್ ಸಮರ್ಥಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...