Homeಮುಖಪುಟಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ 'ಆಪರೇಷನ್ ವೀರಾಚಾರಿ': ರವಿಕೃಷ್ಣಾ ರೆಡ್ಡಿ

ಸಾವಿಗೆ ಶರಣಾದ ಸಾಲುಮರದ ವೀರಾಚಾರಿ ಸ್ಮರಣಾರ್ಥ ‘ಆಪರೇಷನ್ ವೀರಾಚಾರಿ’: ರವಿಕೃಷ್ಣಾ ರೆಡ್ಡಿ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತರಾಗಿದ್ದ ವೀರಾಚಾರಿಯವರ ನಿಧನದ ಸ್ಮರಣಾರ್ಥ ಒಂದು ವಾರಗಳ ಕಾಲ ಆಪರೇಷನ್ ವೀರಾಚಾರಿ ಕಾರ್ಯಾಚರಣೆ ನಡೆಸುವುದಾಗಿ ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ವೀರಾಚಾರಿಯವರು ನ್ಯಾಯಬೆಲೆ ಅಂಗಡಿಯಲ್ಲಿನ ಭ್ರಷ್ಟಾಚಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಸೋಲಾದ ನೋವಿನಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ನೆನಪಿನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆಯ ವಿರುದ್ಧ ಹೋರಾಡುವುದಾಗಿ ಕೆಆರ್‌ಎಸ್ ಪಕ್ಷ ಹೇಳಿದೆ.

 

ಸಾಲುಮರದ ವೀರಾಚಾರಿಯವರ ಕುರಿತು

ಮಿಟ್ಲಗಟ್ಟೆ ಊರಿನ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಮೋಸ ಮಾಡಿ ಪಡಿತರವನ್ನು ಬ್ಲಾಕ್‌ ಮಾರುಕಟ್ಟೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರ ವೀರಾಚಾರಿಯವರು 10 ವರ್ಷದ ಹಿಂದೆಯೇ ದೂರಿದ್ದರು. ಆಗ ಅಧಿಕಾರಿಗಳು ದಾಳಿ ಮಾಡಿ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಅಮಾನತ್ತು ಮಾಡಿದ್ದರು. ಅಲ್ಲದೆ ಏಜೆನ್ಸಿಯನ್ನು ಬೇರೆಯವರಿಗೆ ನೀಡಲಾಗಿತ್ತು. ಆದರೆ ಆರೋಪಿಯ ಈ ಕುರಿತು ಕೋರ್ಟಿನಲ್ಲಿ ದೂರು ನೀಡಿದ್ದರು. ಆ ಸಂದರ್ಭದಲ್ಲಿ ವೀರಾಚಾರಿಯವರು ‘ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ’ ಎಂಬ ವಾಗ್ದಾನ ಮಾಡಿದ್ದರು. ಕೋರ್ಟ್ ತೀರ್ಪು ನ್ಯಾಯಬೆಲೆ ಅಂಗಡಿ ಮಾಲೀಕನ ಪರ ಬಂದಿದ್ದರಿಂದ ಮನನೊಂದ ವೀರಾಚಾರಿಯವರು ವಾಗ್ದಾನದಂತೆ ಮಂಗಳವಾರ ರಾತ್ರಿ 2:00 ಗಂಟೆಗೆ ತಾವೇ ನೆಟ್ಟು ಬೆಳೆಸಿದ್ದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ

“ಸಾಲುಮರದ ವೀರಾಚಾರಿ”ಯವರ ಸಾವು ಮತ್ತು ಅವರ ಹೋರಾಟ ವ್ಯರ್ಥವಾಗಲು KRS ಪಕ್ಷ ಬಿಡುವುದಿಲ್ಲ.
KRS ಪಕ್ಷವು ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಒಂದು ವಾರದ ಕಾಲ ರಾಜ್ಯಾದ್ಯಂತ “ಸಾಲುಮರದ ವೀರಾಚಾರಿ ಸ್ಮರಣಾರ್ಥ ಕಾರ್ಯಾಚರಣೆ”ಯನ್ನು (#OperationVeerachari) ಹಮ್ಮಿಕೊಳ್ಳಲಿದೆ. ಆ ವಾರ ಪೂರ್ತಿ KRS ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮತಮ್ಮ ಊರುಗಳಲ್ಲಿ/ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅಕ್ರಮ ಎಸಗುವ ನ್ಯಾಯಬೆಲೆ ಅಂಗಡಿಗಳ ಮುಂದೆ ಲೈವ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ; ಅಲ್ಲಿಯ ಅಕ್ರಮಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಜರುಗಿಸಲು ಆಗ್ರಹಿಸಲಿದ್ದಾರೆ, ಹಾಗೂ ಕರ್ತವ್ಯಲೋಪ ಎಸಗುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಲಿದ್ದಾರೆ ಎಂದು ರವಿಕೃಷ್ಣಾರೆಡ್ಡಿಯವರು ತಿಳಿಸಿದ್ದಾರೆ.

ಬಡತನ ನಿವಾರಣೆಯ ಮಾರ್ಗೋಪಾಯವಾಗಿ ಕಡುಬಡವರಿಗೆಂದು ನೀಡುವ ಪಡಿತರ ಸಾಮಗ್ರಿ ವಿತರಣೆಯಲ್ಲಿ ಮೋಸ ಮಾಡುವ ವಂಚಕರು ಮತ್ತು ಅವರ ಜೊತೆ ಶಾಮೀಲಾಗಿ ಭ್ರಷ್ಟಾಚಾರ ಎಸಗುವ ಸರ್ಕಾರಿ ಅಧಿಕಾರಿಗಳು ಈ ಕೂಡಲೇ ತಮ್ಮ ದೇಶದ್ರೋಹಿ ಕುಕೃತ್ಯಗಳನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮಗೆ ಯಾವ ರೀತಿ ಶಿಕ್ಷೆ ಆಗಲಿದೆ ಎನ್ನುವುದನ್ನು ನೀವು ಅನುಭವಿಸಿಯೇ ನೋಡಬೇಕು ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ಆಗುವ ಮೋಸ, ವಂಚನೆ, ದಬ್ಬಾಳಿಕೆಯನ್ನು ತಡೆಯುವುದೇ ನಾವು ಸಾಲುಮರದ ವೀರಾಚಾರಿ’ಯವರಿಗೆ ಸಲ್ಲಿಸುವ ಪ್ರಾಮಾಣಿಕ ಗೌರವ. ಅದನ್ನು KRS ಪಕ್ಷ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...