Homeಮುಖಪುಟಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

ಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

- Advertisement -
- Advertisement -

ಬಿಹಾರ ಸರಕಾರ ದೇಶದಲ್ಲೇ ಮೊದಲ ಬಾರಿಗೆ ಜಾತಿ ಆಧಾರಿತ ಜನಗಣತಿಯ ವರದಿಯನ್ನು ಬಿಡುಗಡೆ ಮಾಡಿದ್ದು ಇದನ್ನು ಪ್ರತಿಪಕ್ಷಗಳ INDIA ಒಕ್ಕೂಟ ಸ್ವಾಗತಿಸಿದೆ.

ಸರ್ಕಾರ ನಡೆಸಿದ್ದ ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಇದರನ್ವಯ ಬಿಹಾರದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಬಿಸಿ) ಜನರು ಶೇಕಡ 63ರಷ್ಟು ಇದ್ದಾರೆ ಎಂಬುದು ತಿಳಿದು ಬಂದಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಿರುವ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿದ್ದು, ಬಿಹಾರದ ಜಾತಿ ಗಣತಿ ಅನ್ವಯ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರು ಶೇಕಡ 84ರಷ್ಟು ಇದ್ದಾರೆ ಎಂಬುದು ಬಹಿರಂಗವಾಗಿದೆ. ಕೇಂದ್ರ ಸರ್ಕಾರದ 90 ಕಾರ್ಯದರ್ಶಿಗಳ ಪೈಕಿ ಕೇವಲ 3 ಮಂದಿ ಮಾತ್ರ ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರು ಭಾರತದ ಬಜೆಟ್‌ನ ಶೇ. 5ರಷ್ಟನ್ನು ಮಾತ್ರ ನಿಭಾಯಿಸುತ್ತಾರೆ. ಆದ್ದರಿಂದ ದೇಶದ ಜಾತಿ ಅಂಕಿಅಂಶಗಳನ್ನು ತಿಳಿದುಕೊಳ್ಳಬೇಕಿದೆ. ಹೆಚ್ಚಿನ ಜನಸಂಖ್ಯೆ, ಹೆಚ್ಚಿನ ಹಕ್ಕುಗಳು, ಇದು ನಮ್ಮ ಪ್ರತಿಜ್ಞೆ ಎಂದು ರಾಹುಲ್ ಗಾಂಧಿ ಅವರು ಬರೆದುಕೊಂಡಿದ್ದಾರೆ.

ಕಳೆದ ಏ.16 ರಂದು ಕರ್ನಾಟಕದ ಕೋಲಾರದಲ್ಲಿ ಜಾತಿ ಗಣತಿ ಪರ ಪಕ್ಷವು ಇದೆ ಎಂದು ಹೇಳಿದ್ದು, ದಲಿತರು, ಬುಡಕಟ್ಟುಗಳು ಮತ್ತು ಒಬಿಸಿಗಳಿಗೆ ಶೇ.50 ರಷ್ಟು ಅನುಪಾತದ ಕೋಟಾವನ್ನು ಒದಗಿಸಲು ಮತ್ತು ಮೀಸಲಾತಿ ಮಿತಿಯನ್ನು ಹೆಚ್ಚಿಸುವ ವಿಚಾರದಲ್ಲಿ ಪಕ್ಷವು ಧನಾತ್ಮಕ ನಿಲುವನ್ನು ಹೊಂದಿದೆ ಎಂದು ಹೇಳಿದ್ದರು.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಬಿಹಾರ ನಡೆಸಿದ ಜಾತಿ ಸಮೀಕ್ಷೆ ಈಗಷ್ಟೇ ಬಿಡುಗಡೆಯಾಗಿದೆ. ಇದನ್ನುನಾವು ಸ್ವಾಗತಿಸುತ್ತಿದ್ದೇವೆ. ಇದಲ್ಲದೆ ಕಾಂಗ್ರೆಸ್ ಸರ್ಕಾರಗಳು ಇತರ ರಾಜ್ಯಗಳಲ್ಲಿ ಇದೇ ರೀತಿಯ ಸಮೀಕ್ಷೆಗಳನ್ನು ಈ ಹಿಂದೆ ನಡೆಸಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾತಿ ಗಣತಿಯನ್ನು ಆದಷ್ಟು ಬೇಗ ನಡೆಸಬೇಕು ಎಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದಾರೆ.

UPA-2 ಸರ್ಕಾರವು ವಾಸ್ತವವಾಗಿ ಈ ಜನಗಣತಿಯನ್ನು ಪೂರ್ಣಗೊಳಿಸಿತ್ತು ಆದರೆ ಅದರ ಫಲಿತಾಂಶಗಳನ್ನು ಮೋದಿ ಸರ್ಕಾರವು ಪ್ರಕಟಿಸಲಿಲ್ಲ. ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳಿಗೆ ಮತ್ತು ಸಾಮಾಜಿಕ ನ್ಯಾಯಕ್ಕೆ ದೃಢವಾದ ಅಡಿಪಾಯವನ್ನು ಒದಗಿಸಲು ಇಂತಹ ಜನಗಣತಿಯು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಹಿಂದುಳಿದ ವರ್ಗಗಳ(ಒಬಿಸಿ) ಜನರು ಶೇಕಡ 27.13ರಷ್ಟು, ಆರ್ಥಿಕವಾಗಿ ಹಿಂದುಳಿದ ವರ್ಗಗಳ(ಇಬಿಸಿ) ಜನರು ಶೇಕಡ 36.01ರಷ್ಟಿದ್ದರೆ, ಸಾಮಾನ್ಯ ವರ್ಗದ ಜನರು ಶೇಕಡ 15.52ರಷ್ಟಿದ್ದಾರೆ. ಬಿಹಾರದಲ್ಲಿ 13.07 ಕೋಟಿ ಜನಸಂಖ್ಯೆ ಇದೆ ಎಂದು ಈ ಸಮೀಕ್ಷೆಯು ತಿಳಿಸಿದೆ.

ಇದನ್ನು ಓದಿ: ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...