Homeಮುಖಪುಟಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಕೃಷಿ ಮಸೂದೆಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಮಸೂದೆಗೆ ಬೆಂಬಲಿಸದ ವಿರೋಧ ಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿರೋಧ ಪಕ್ಷಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದೆ, ರೈತರ ಸುಧಾರಣೆಯನ್ನು ಬಯಸುತ್ತಿಲ್ಲ ಎಂದಿದ್ದಾರೆ.

ಈ ಮಸೂದೆಗಳಿಂದ ಮಧ್ಯವರ್ತಿಗಳ ಬಗ್ಗೆ ಚಿಂತಿಸದೆ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಅವಕಾಶಗಳನ್ನು ಹೊಂದಿರುತ್ತಾರೆ. ಇದರಿಂದಾಗಿ ರೈತರಿಗೆ ಲಾಭ ಹೆಚ್ಚಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದ ಕೋಸಿ ರೈಲು ಮೆಗಾ ಬ್ರಿಡ್ಜ್ ಉದ್ಘಾಟನಾ ಕಾರ್ಯಕ್ರಮದ ನಂತರ ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

’ಈ ಮಸೂದೆಗಳು ಕೃಷಿಯಲ್ಲಿ ರೈತರಿಗೆ ಹೊಸ ಸ್ವಾತಂತ್ರ್ಯ ನೀಡುತ್ತವೆ. ಅವರು ಈಗ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಆಯ್ಕೆ ಮತ್ತು ಅವಕಾಶಗಳನ್ನು ಹೊಂದಿರುತ್ತಾರೆ. ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸಲು ಇವುಗಳನ್ನು ತರುವುದು ಅಗತ್ಯವಾಗಿತ್ತು ಮಸೂದೆಗಳ ಅಂಗೀಕಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ’ ಎಂದಿದ್ದಾರೆ ಪ್ರಧಾನಿ.

ಮಸೂದೆಗಳ ವಿರುದ್ಧ ಪ್ರತಿಭಟಿಸುವವರ ಬಗ್ಗೆ ಮಾತನಾಡಿ. ಇವರು ರೈತರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ರೈತರ ಲಾಭವನ್ನು ಅನ್ಯಾಯವಾಗಿ ಲೂಟಿ ಮಾಡುವ ಮಧ್ಯವರ್ತಿಗಳ ಪರವಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ವಿರೋಧ ಪಕ್ಷಗಳು ಈ ಮಸೂದೆಗೆ ಲೋಕಸಭೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಂಜಾಬ್‌ನ ಕಾಂಗ್ರೆಸ್ ಸಂಸದರು ಗುರುವಾರ ಸಂಸತ್ತಿನಲ್ಲಿ ಮಸೂದೆಗಳ ಪ್ರತಿಗಳನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಪಂಜಾಬ್ ರಾಜ್ಯದ ರೈತರು ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನವನ್ನು ನಡೆಸಲಿದ್ದಾರೆ.

ಈ ಮಧ್ಯೆ ನಿನ್ನೆ ಕೇಂದ್ರ ಸಚಿವೆ ಹಾಗೂ ಶಿರೋಮಣಿ ಅಕಾಲಿ ದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತಂದಿರುವ ಹೊಸ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020 ಮತ್ತು ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಅನ್ನು ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಯನ್ನು ಸೆಪ್ಟೆಂಬರ್ 13 ರಂದು ಅಂಗೀಕರಿಸಲಾಗಿದೆ.


ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...