Homeಮುಖಪುಟಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್...

ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನ ಪಠ್ಯ ಬೇಡ: ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು.

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದೆ. ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಪಠ್ಯ ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

BJP ಹಾಗೂ ಸಂಘಪರಿವಾರದ ಬೌದ್ಧಿಕ ದಿವಾಳಿತನ ಈ ಮಟ್ಟಕ್ಕೆ ಇಳಿಬಾರದಾಗಿತ್ತು. ಸುಳ್ಳಿನ ಕಂತೆಗಳನ್ನ ಪೋಣಿಸುವ ಹೆಂಗ್ ಪುಂಗ್ಲಿ ಖ್ಯಾತಿಯ ಬಾಡಿಗೆ ಭಾಷಣಕಾರನನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಸುವುದು ದುರಂತ ಎಂದಿದ್ದಾರೆ.

ಅಂತಹ ವಾಗ್ಮಿ, ಚಿಂತಕನ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮ್ಮದೇ ಪಕ್ಷದ ಮಾಜಿ ಸಿಎಂ ಡಿ.ವಿ ಸದಾನಂದಗೌಡರ ಬಗ್ಗೆ ಮಾರ್ಗದರ್ಶನ ಪಡೆಯುವುದು ಒಳ್ಳೆಯದು ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ “ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಹಿಂದೂಪರ ಚಿಂತನೆಗಳನ್ನು ಶಾಲಾ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿದರೆ” ತಪ್ಪೇನು ಎಂದು ಪ್ರಶ್ನಿಸಿದ್ದರು. ಅಲ್ಲದೆ ಟಿಪ್ಪು ಒಬ್ಬ ನರಭಕ್ಷಕ ಎಂದು ಸಹ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, “ಜಗದೀಶ್ ಶೆಟ್ಟರ್‌ ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನ ಮರೆತಿರಬೇಕು. ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ, ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ. ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿ‌ಕೊಡಬೇಕಾ?” ಎಂದು ಶೆಟ್ಟರ್ ಟಿಪ್ಪುವಿನ ವೇಶ ಧರಿಸಿದ್ದ ಫೋಟೋಗಳನ್ನು ಟ್ವಿಟ್ ಮಾಡಿದ್ದಾರೆ.

ಸ್ವಿಸ್‌ನಲ್ಲಿರುವ ಕಪ್ಪು ಹಣವನ್ನು ಭಾರತದ ಬೊಕ್ಕಸಕ್ಕೆ ತಂದು ಹಾಕಿದರೆ ದೇಶದ ಎಲ್ಲಾ ರಸ್ತೆಗಳಿಗೂ ಟಾರ್ ಹಾಕುವ ಬದಲು ಚಿನ್ನ ಹಾಕಬಹುದು. ಸೌದಿಯ ಪೆಟ್ರೋಲಿಯಂ ಸಚಿವರಿಗೆ ಮೋದಿ ಫೋನ್ ಮಾಡಿ ಪೆಟ್ರೋಲ್ ಬೆಲೆ ಕಡಿಮೆ ಮಾಡಲು ಹೇಳಿದ್ದರು. ಬೆಂಗಳೂರಿನಿಂದ ಮಂಗಳೂರಿಗೆ ಬುಲೆಟ್ ಟ್ರೈನ್ ನಲ್ಲಿ 2 ಗಂಟೆಯಲ್ಲಿ ಹೋಗಬಹುದು. ಮೋದಿ ಇವೆಲ್ಲವನ್ನು ಮಾಡುತ್ತಾರೆ ಎಂದು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿ ವಿವಾದ ಸೃಷ್ಟಿಸಿದ್ದರು. ಹಾಗಾಗಿ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಹೆಂಗ್ ಪುಂಗ್ಲಿಯೆಂಬ ಅಡ್ಡನಾಮದಿಂದ ಕರೆದು ಟ್ರೋಲ್ ಮಾಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹರಿಪ್ರಸಾದ್ ಅನ್ನೋ ಗುಲಾಮನೇ ಒಬ್ಬಾ ಗೂಂಡಾ ಹಾಗಿರುವಾಗ ಇನ್ನೊಬ್ಬರ ಬಗ್ಗೆ ಮಾತಾಡೋ ಯೋಗ್ಯತೆ ಈ ಗೂಂಡಾ ಗುಲಾಮರಿಗೆ ಇಲ್ಲಾ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...