Homeಚಳವಳಿಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ - ಸಿಎಂಗೆ ಬಹಿರಂಗ ಪತ್ರ

ಬಸವಣ್ಣನವರ ಪಠ್ಯ ತಿರುಚುವಿಕೆ ಕುಚೋದ್ಯ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಖಂಡನೆ – ಸಿಎಂಗೆ ಬಹಿರಂಗ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮುಗಿಯುವ ಯಾವ ಸೂಚನೆಗಳೂ ಕಾಣುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಬಸವಣ್ಣನವರ ಪಠ್ಯ ತಿರುಚುವಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದಿದೆ.

ನೂರಾರು ಲಿಂಗಾಯಿತ ಮಠಾಧೀಶರು ಇರುವ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟ ಬಸವಣ್ಣನವರ ಪಠ್ಯವನ್ನು ತಿರುಚಿರುವ ಕುರಿತು ಗಂಭೀರವಾದ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನು ಸರಿಪಡಿಸದೇ ಹೋದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ನೀಡಿದೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಹಂದಿಗುಂದದ ವಿರಕ್ತಮಠದ  ನೇತೃತ್ವದಲ್ಲಿ ಶ್ರೀ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪತ್ರ ಬರೆದಿದ್ದು, ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಠ್ಯದಲ್ಲಿ ಬದಲಾವಣೆ ಮಾಡಿರುವುದು ಕುಚೋದ್ಯದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಮಸ್ತಕದಲ್ಲಿ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು ಎಂದು ಬರೆಯಲಾಗಿದೆ. ಇದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ನನಗೇಕೆ? ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋದುದು ಐತಿಹಾಸಿಕ ಸಂಗತಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅದೇ ರೀತಿ “ಶೈವ-ಗುರುಗಳ ಸಾನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು” ಎಂದು ಬರೆಯಲಾಗಿದೆ. ಇದು ಸಹ ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು, ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು. ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದದು. ಅವರೇ ಇಷ್ಟಲಿಂಗದ ಜನಕರು. ಅಲ್ಲಮಪ್ರಭುದೇವರಾದಿಯಾಗಿ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ‘ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಲಿಂಗ’ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ‘ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಕೆ ನೀನೆ ರೂಪಾದೆ’ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ” ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

“ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂದು ಈಗ ಪಠ್ಯದಲ್ಲಿ ಸೇರಿಸಲಾಗಿದೆ. ಇದು ಕೂಡ ಶುದ್ಧ ತಪ್ಪು. ವೀರಶೈವ ಶೈವದ ಶಾಖೆ. ಅದು ಮತವಿರಬಹುದು ಈಗ ಅದನ್ನು ಅಂಗಾಯತ ಧರ್ಮದ ಒಂದು ಪಂಗಡ ಎಂದು ಹೆಸರಿಸಲಾಗಿದೆ. ಸರಕಾರದ ದಾಖಲೆಗಳಲ್ಲಿ ಕ್ರಿ.ಶ.1871 ರಿಂದಲೂ ಇದನ್ನು ಕಾಣಬಹುದು. ಆದರೆ ಬಸವಣ್ಣನವರು ಅಂಗಾಯತ ಧರ್ಮದ ಸ್ಥಾಪಕರು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಶೈವದಲ್ಲಿ ವರ್ಣಾಶ್ರಮದ ಆಚರಣೆ ಇದೆ. ಅಂಗಾಯತರಲ್ಲಿ ವರ್ಣಾಶ್ರಮ ಭೇದಗಳಲ್ಲ. ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಎಂಬುದು ಶುದ್ಧ ಅನೈತಿಹಾಸಿಕ” ಎಂದು ಮಠಾಧಿಪತಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಪಠ್ಯದಲ್ಲಿದ್ದ ವೈದಿಕ ಧರ್ಮದ ಆಚರಣೆಗಳ ನಿರಾಕರಣೆ, ಮಾನವೀಯ ಮಾಲ್ಯಗಳಿಂದ ಕೂಡಿದ ಸಿದ್ಧಾಂತದ ಪ್ರತಿಪಾದನೆ, ಅನಿಷ್ಟ ಪದ್ಧತಿಗಳ ವಿರುದ್ಧದ ಹೋರಾಟ, ಸ್ವಾವಲಂಬನೆ, ದೇಹವೇ ದೇಗುಲ ತತ್ವಗಳ ಬೋಧನೆ ಮುಂತಾದವುಗಳ ಜೊತೆಗೆ ಅವರು ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳುವಳಿಯನ್ನು ಜನಮುಖಿಯಾಗಿಸಿದರು ಎನ್ನುವಂತಹ ಸಾಲುಗಳನ್ನು ಕೈಬಿಟ್ಟಿರುವುದು ದುರ್ದೈವದ ಸಂಗತಿ ಎಂದು ಮಠಾಧಿಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದಲ್ಲಿ ಆಗಿರುವ ಈ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಅನ್ಯಥಾ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುವುದಲ್ಲದೆ ವೈಶಿಷ್ಟ್ಯಪೂರ್ಣವಾದ ಲಿಂಗಾಯತ ಧರ್ಮಕ್ಕೆ ಮತ್ತು ಬಸವಣ್ಣನವರಿಗೆ ಅಪಚಾರವೆಸಗಿದಂತಾಗುತ್ತದೆ. ಲಿಂಗಾಯತ ಧರ್ಮದ ಅನುಯಾಯಿ ಮತ್ತು ಬಸವಣ್ಣನವರ ಹೆಸರಿನವರಾದ ತಾವು ಮುಖ್ಯ ಮಂತ್ರಿಯಾಗಿರುವ ಸಮಯದಲ್ಲಿ ಇಂತಹ ಅಪಚಾರವಾಗಿರುವುದು ನಮಗೆ ಆಘಾತಕಾರಿಯಾಗಿದೆ. ಬಹುಸಂಖ್ಯಾತ ಲಿಂಗಾಯತರು ಮತ್ತು ಲಿಂಗಾಯತ ಮಠಾಧಿಪತಿಗಳು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಸೂಕ್ತ ಸಂದರ್ಭದಲ್ಲಿ ಹೋರಾಟ ಮಾಡುವುದು ನಮಗೆ ಅನಿವಾರ್ಯವಾಗುತ್ತದೆ” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದೇ ರೀತಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆಯ ಬಗ್ಗೆಯೂ ಅವಹೇಳನಕಾರಿ ವಿಷಯ ಪ್ರಕಟವಾಗಿರುವುದು ಸರಿಯಾದ ರೀತಿಯಲ್ಲ. ಇದು ಅತ್ಯಂತ ಖಂಡನೀಯವಾಗಿದೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: 🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಂಬೇಡ್ಕರ್‌ ಕುರಿತು ಚಕ್ರತೀರ್ಥ ಮಾಡಿದ್ದ ವ್ಯಂಗ್ಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಮಂಗಳವೇಡೆಯಿಂದ ತಮ್ಮ ಸಾಮಾಜಿಕ ಕೆಲಸಗಳನ್ನು ಆರಂಭಿಸಿದರು ಎಂಬುದಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಜಿಲ್ಲೆಯ ಮಂಗಳವೇಡೆಗೂ ಬಸವಣ್ಣಿಗೂ ಏನು ಸಂಬಂಧ ಎಂದು ಹುಡುಕಿದರೆ ವಿಕಿಪೀಡಿಯದಲ್ಲಿ ಈ ಕೆಳಗಿನ ಒಂದು ಬರಹ ಕಾಣಸಿಗುತ್ತದೆ. ಅದರ ಪ್ರಕಾರ ಮಂಗಳವೇಡದಿಂದ ಆಳ್ವಿಕೆ ನಡೆಸಿದ ಕರ್ಣ ಎಂಬ ಸಾಮಂತರಾಜ ಕಳಚುರಿ ವಂಶದ ಒಂದನೇ ಬಿಜ್ಜಳನ ಮಗ ಎಂಬುದೊಂದನ್ನು ಬಿಟ್ಟರೆ, ಬಸವಣ್ಣನು ಬಾಗೇವಾಡಿಯಿಂದ ಹೊರಟು ತಲುಪಿದ ಕೂಡಲಸಂಗಮ ಅಥವಾ ತನ್ನ ಸಾಮಾಜಿಕ ಕಾರ್ಯಗಳನ್ನು ನಡೆಸಿದ ಬಸವಕಲ್ಯಾಣ ಇವುಗಳಿಗೂ ಮಂಗಳವೇಡೆಗೂ ಮತ್ಯಾವ ಸಂಬಂಧವೂ ಕಾಣುವುದಿಲ್ಲ.

    [ಇದಲ್ಲದೆ ಕರ್ನಾಟಕ ಏಕೀಕರಣ ಚಳವಳಿಯನ್ನಾರಂಭಿಸಿದ ಆಲೂರು ವೆಂಕಟರಾಯರ ಶಿಷ್ಯರಾಗಿದ್ದ ಏಕೀಕರಣ ಹೋರಾಟಗಾರ ಮಂಗಳವೇಡೆ ಕೃಷ್ಣರಾಯರಿಗೆ ಸಂಬಂಧಿಸಿದ ವಿವರಗಳಿವೆ. ಮಂಗಳವೇಡೆಯೊಂದಿಗೆ ಬಸವಣ್ಣನಿಗೆ ಯಾವುದೇ ನಂಟು ಇದ್ದುದು ನನಗೆ ವಿಕಿಪೀಡಿಯದಲ್ಲಿ ಸಿಗಲಿಲ್ಲ.]

    ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರ್ಣ (ಕಳಚುರಿ)

    ಕರ್ಣ (ಕಳಚುರಿ): ಕರ್ನಾಟಕದಲ್ಲಿ ಚಾಳುಕ್ಯರ ಆಶ್ರಯದಲ್ಲಿ ಆಳುತ್ತಿದ್ದ ಕಳಚುರಿ ದೊರೆಗಳಲ್ಲೊಬ್ಬ. ಒಂದನೆಯ ಬಿಜ್ಜಳನ (ಬಿಜ್ಜ) ಮಗ. ಕನ್ನಮ, ಕೃಷ್ಣರಾಜ ಎಂದೂ ಈತನನ್ನು ಸಂಬೋಧಿಸಲಾಗಿದೆ. 1067ರಲ್ಲಿ ಈತನ ಆಳ್ವಿಕೆ ಪ್ರಾರಂಭವಾಯಿತೆಂದು ತಿಳಿದುಬರುತ್ತದೆ. ಮಂಗಳಿವೇಡದಿಂದ (ಈಗಿನ ಮಂಗಳವೇಢೆ; ಷೋಲಾರಪುರ ಜಿಲ್ಲೆ) ಅದರ ಸುತ್ತಮುತ್ತಣ ಪ್ರದೇಶಗಳನ್ನು ಈತ ಆಳುತ್ತಿದ್ದ. ಐವತ್ತು ಕದನಗಳಲ್ಲಿ ಕಾದಾಡಿ ಗೆದ್ದನೆಂದೂ ಹನ್ನೆರಡು ಮಂದಿ ದೊರೆಗಳನ್ನು ಕೊಂದು ತನ್ನ ರಾಜಧಾನಿಯನ್ನು ಶತ್ರುಗಳಿಂದ ರಕ್ಷಿಸಿದನೆಂದೂ ಇವನನ್ನು ಹೊಗಳಲಾಗಿದೆ. ಪರಮಾರರು, ಪೂರ್ವ ಚಾಳುಕ್ಯರು, ಚೋಳರು ಮುಂತಾದವರೊಂದಿಗೆ ಈತನ ಪ್ರಭುವಾದ ಒಂದನೆಯ ಸೋಮೇಶ್ವರ ಮಾಡಿದ ಕದನಗಳಲ್ಲಿ ಇವನೂ ಭಾಗವಹಿಸಿರಬೇಕೆಂದು ತೋರುತ್ತದೆ. ಈತ 1080ರ ವರೆಗೂ ರಾಜ್ಯವಾಳಿದ (ನೋಡಿ- ಕಳಚುರಿಗಳು).

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...