HomeಮುಖಪುಟRSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಬರೆದ ಪತ್ರದ ಪೂರ್ಣ ಪಠ್ಯ ಈ ಕೆಳಗಿನಂತಿದೆ.

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(೧) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ.

(೨) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್, ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ.

24ನೇ ಮೇ 2022

(ದೇವನೂರ ಮಹಾದೇವ)


ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Something is better than nothing. But nothing is better than nonsense. ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಾ ಗುರುಗಳೇ. 👍

  2. ಈ ದೇಶದಲ್ಲಿ ‘ದಲಿತ’ ಎಂದರೆ ಜಾತ್ಯತೀತ, ‘ಬ್ರಾಹ್ಮಣ’ ಅಂದರೆ ಜಾತಿವಾದಿ. ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...