Homeಚಳವಳಿದೇಶದ್ರೋಹಿ ಹೆಡಗೇವಾರ್ ಪಠ್ಯ ಕೈಬಿಡಿ: ಎಲ್ಲೆಡೆ ಭುಗಿಲೆದ್ದ ಪ್ರತಿಭಟನೆಗಳು

ದೇಶದ್ರೋಹಿ ಹೆಡಗೇವಾರ್ ಪಠ್ಯ ಕೈಬಿಡಿ: ಎಲ್ಲೆಡೆ ಭುಗಿಲೆದ್ದ ಪ್ರತಿಭಟನೆಗಳು

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಪಠ್ಯಪುಸ್ತಕದ ಹೆಗಡೇವಾರ್ ಭಾಷಣದ ಪಠ್ಯ ಸುಡುವ ಮೂಲಕ ಪ್ರತಿಭಟನೆ ನಡೆಸಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆಗೆ ರಾಜ್ಯದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಪಠ್ಯದಲ್ಲಿ ಹೆಡಗೇವಾರ್ ಭಾಷಣ ಸೇರ್ಪಡೆ ಮಾಡಿ ಮನುಸ್ಮೃತಿ ಮಾಡಲಾಗುತ್ತಿದೆ ಆರೋಪಿಸಿ ಪ್ರತಿಭಟನೆಗಳು ದಾಖಲಾಗಿವೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ ಕೇಸರೀಕರಣದ ಮುಂದುವರೆದ ಭಾಗವಾಗಿದ್ದು ಇದನ್ನು ಶೀಘ್ರ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ಉಡುಪಿಯ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದೆ.

ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಹೇಗೆ ಆದರ್ಶ ಪುರುಷನಾಗಲು ಸಾಧ್ಯವೆಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

ಇನ್ನೊಂದೆಡೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಪಠ್ಯಪುಸ್ತಕದ ಹೆಗಡೇವಾರ್ ಭಾಷಣದ ಪಠ್ಯ ಸುಡುವ ಮೂಲಕ ಪ್ರತಿಭಟನೆ ನಡೆಸಲಾಗಿದೆ.

“ರೋಹಿತ್ ಚಕ್ರತೀರ್ಥ ನೇತೃತ್ವದ ಪರಿಷ್ಕರಣಾ ಸಮಿತಿ ಮನುಸ್ಮೃತಿ ರೂಪದ ಪಠ್ಯವನ್ನು ರಚನೆ ಮಾಡುವ ಮೂಲಕ ಈ ನೆಲದ ದಲಿತರ, ಶೂದ್ರ ಹಾಗೂ ಮಹಿಳೆಯರ ಬರಹಗಳಿಗೆ ತಿಲಾಂಜಲಿ ಬಿಡಲು ನಿರ್ಧರಿಸಿದೆ’ ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಹುಣಸೂರಿನ ಸಂವಿಧಾನ ವೃತ್ತದಲ್ಲಿ ನಡೆದ ಪತ್ರಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.


ಇದನ್ನೂ ಓದಿ: ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ರೋಲ್ ಕಾಲ್ ಮಾಧ್ಯಮದ ಜೊತೆ ,ರೋಲ್ ಕಾಲ್ ಸಂಘದ ಪುಡಾರಿಗಳು ಈಗ ಪಠ್ಯ ಪುಸ್ತಕ ವಿಷಯದಲ್ಲಿ ಬೀದಿಗೆ ಬಂದಿದ್ದಾರೆ ಅಂದರೆ ,ಪಠ್ಯ ಪುಸ್ತಕ ಸಮಿತಿಯ ನಿರ್ಧಾರಗಳು ಸರಿಯಾಗಿಯೇ ಇದೆ ಎಂದರ್ಥ .

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...