Homeಕರ್ನಾಟಕಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

ಮೊಬೈಲ್ ಪ್ರಿಪೇಯ್ಡ್ ದರಗಳ ಹೆಚ್ಚಳ ವಿರೋಧಿಸಿ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳಲ್ಲಿ ಏರಿಸಿರುವ ಭಾರಿ ಹೆಚ್ಚಳದ ವಿರುದ್ಧ ಎಐಡಿಎಸ್‌ಓ ಮತ್ತು ಎಐಡಿವೈಓ ಸಂಘಟನೆಗಳು ಇಂದು (ಜ.26) ಮಧ್ಯಾಹ್ನ 3 ರಿಂದ ಸಂಜೆ 5ರವರೆಗೆ ರಾಷ್ಟವ್ಯಾಪಿ ಟ್ವಿಟ್ಟರ್ ಅಭಿಯಾನ ನಡೆಸಿವೆ. #SayNoToMobileTariffHike #SayNoToPrivatisation ಎಂಬ ಹ್ಯಾಶ್ ಟ್ಯಾಗ್‌ಗಳನ್ನು ಬಳಸಿ ಟ್ವಿಟರ್‌ ಟ್ರೆಂಡ್ ಮಾಡಿವೆ.

’ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಮೊಬೈಲ್ ಫೋನ್ ಕೂಡ ಅಗತ್ಯ ವಸ್ತುಗಳಂತೆಯೇ ಆಗಿದೆ. ಲಾಕ್‌ಡೌನ್ ಸಮಯ ಮತ್ತು ನಂತರ, ಮೊಬೈಲ್ ತಂತ್ರಜ್ಞಾನ ಮತ್ತು ಇಂಟರ್ನೆಟ್ ಸೇವೆಯ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಬಹುತೇಕ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೂ ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಲು ಮೊಬೈಲ್ ಇಂಟರ್ನೆಟ್ ಸೇವೆ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರದ ಡಿಜಿಟಲೀಕರಣವು ಮೊಬೈಲ್ ಫೋನ್‌ಗಳ ಬಳಕೆ ಹೆಚ್ಚಳಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ದರಗಳನ್ನು ತೀವ್ರವಾಗಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಸಂಘಟನೆಗಳು ಆರೋಪಿಸಿವೆ.

’ದೇಶದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಜಿಯೋ, ವೊಡಾಫೋನ್ ಐಡಿಯಾ, ಏರ್‌ಟೆಲ್ ಕಂಪನಿಗಳು ನೆಟ್ ಪ್ಯಾಕ್‌ಗಳು ಮತ್ತು ರೀಚಾರ್ಜ್ ದರಗಳನ್ನು 20- 25% ಹೆಚ್ಚಿಸಿವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳ ಮಾಡುವುದಾಗಿ ಘೋಷಿಸಿವೆ. ಇದರಿಂದ ಮಧ್ಯಮ ವರ್ಗದವರು, ಕಡಿಮೆ ಆದಾಯವುಳ್ಳವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಖಾಸಗಿ ಟೆಲಿಕಾಂಗಳು ದರಗಳಲ್ಲಿ ಇಷ್ಟೊಂದು ಏರಿಕೆ ಮಾಡುತ್ತಿದ್ದರೂ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಯಾವ ಕ್ರಮವನ್ನು ಕೈಗೊಳ್ಳದೇ ಜಡ ಮೌನವಾಗಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

’ಜಾಗತೀಕರಣದ ನಂತರ 1995 ರಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಈ ವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರವು, ಬಿಎಸ್‌ಎನ್‌ಎಲ್ ಗೆ 2002 ರಲ್ಲಿ ದೇಶದಲ್ಲಿ ಮೊಬೈಲ್ ಸೇವೆಯನ್ನು ಒದಗಿಸಲು ಅನುಮತಿ ನೀಡಿತ್ತು. ಆದರೆ ಮುಂದಿನ ದಶಕದಲ್ಲಿ, ಸರ್ಕಾರಗಳ ನಿರ್ಲಕ್ಷದಿಂದ ಬಿಎಸ್‌ಎನ್‌ಎಲ್ ಹಣಕಾಸಿನ ತೀವ್ರ ಕೊರತೆಯನ್ನೆದುರಿಸಿತು. ಅಕ್ಟೋಬರ್ 2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಬಿಎಸ್‌ಎನ್‌ಎಲ್ ಅನ್ನು 4ಜಿ ತರಂಗಾಂತರ ಹರಾಜು ಪ್ರಕ್ರಿಯೆಯಿಂದ ಹೊರಗಿಟ್ಟಿತು. ಜಿಯೋ, ಏರ್‌ಟೆಲ್, ಐಡಿಯಾ ಕಂಪನಿಗಳು 4ಜಿ ಸ್ಪೆಕ್ಟ್ರಮ್ ಲೈಸೆನ್ಸ್‌ನಲ್ಲಿ ಸಿಂಹ ಪಾಲು ಪಡೆದವು. 2018 ರಲ್ಲಿ ಬಿಎಸ್‌ಎನ್‌ಎಲ್‌ನ 80% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ವಿ.ಆರ್.ಎಸ್ ಹೆಸರಲ್ಲಿ ಮನೆಗೆ ಕಳುಹಿಸಲಾಗಿದೆ. ಹೀಗಾಗಿ ಸಾರ್ವಜನಿಕ ವಲಯದ ಬಿಎಸ್‌ಎನ್‌ಎಲ್ ಇಂದು ಬೆನ್ನೆಲುಬು ಮುರಿದುಕೊಂಡು ಮೂಲೆ ಗುಂಪಾಗಿದ್ದರೆ ಖಾಸಗಿ ಟೆಲಿಕಾಂ ಕಂಪನಿಗಳು ಈ ವಲಯದಲ್ಲಿ ರಾರಾಜಿಸುತ್ತಿವೆ’ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಕಿಡಿ ಕಾರಿವೆ.

’ದೇಶದ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಈ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ಇಂಟರ್ನೆಟ್ ಪ್ಯಾಕ್ ಮತ್ತು ಮೊಬೈಲ್ ರೀಚಾರ್ಜ್ ದರಗಳನ್ನು ಏರಿಸಿವೆ ಎಂದಿರುವ ಎಐಡಿವೈಓ ಮತ್ತು ಎಐಡಿಎಸ್‌ಓ ಸಂಘಟನೆಗಳು ಇಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ರಾಷ್ಟ್ರವ್ಯಾಪಿ ಟ್ವಿಟ್ಟರ್ ಚಳವಳಿಯನ್ನು ಹಮ್ಮಿಕೊಂಡಿದ್ದವು.


ಇದನ್ನೂ ಓದಿ: ಗ್ರಾಮೀಣ ಭಾರತಕ್ಕೆ ಬೇಕಿದೆ ಹೊಸ ’ಎಂಎಸ್‌ಪಿ’ – ’ಗರಿಷ್ಠ ಬೆಂಬಲ ನೀತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...