Homeಮುಖಪುಟಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

ಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡಿ ಹೋರಾಡುವುದಕ್ಕಾಗಿ ತಮ್ಮ ಪ್ರಯತ್ನವನ್ನು ಮುಂದುವರಿಸಿರುವ ಪ್ರತಿಪಕ್ಷ ನಾಯಕರು ಸೋಮವಾರ ಬೆಂಗಳೂರಿನಲ್ಲಿ ಸಭೆ ಸೇರಲಿದ್ದಾರೆ.

ಮೂರು ವಾರಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ಅಂಗೀಕರಿಸಿದ ನಿರ್ಣಯಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ವಿಪಕ್ಷ ನಾಯಕರು ಈ ಸಮಾವೇಶವನ್ನು ನಡೆಸುತ್ತಿದ್ದಾರೆ. ಸೋಮವಾರದ ಪ್ರತಿಪಕ್ಷ ನಾಯಕರ ಸಮಾವೇಶದಲ್ಲಿ ಕನಿಷ್ಠ 26 ರಾಜಕೀಯ ಪಕ್ಷಗಳು ಪಾಲ್ಗೊಳ್ಳಲಿವೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಬೆಂಗಳೂರಿನ ಪ್ರತಿಪಕ್ಷಗಳ ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ. ವಿವಾದಾತ್ಮಕ ವಿಷಯಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರ ನಡುವೆ ಸಹಮತ ಮೂಡಿಸುವುದಕ್ಕೆ ನೆರವಾಗಲಿದೆ ಎಂದು ಪ್ರತಿಪಕ್ಷ ಮೂಲಗಳು ತಿಳಿಸಿವೆ.

ಈ ಮಧ್ಯೆ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ (AAP) ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.

ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್‌ನಿಂದ ತೊಡಗಿ ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.

ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ, ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.

ಸಮಾವೇಶವು ಮೊದಲಿಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುವುದೆಂದು ನಿಗದಿಯಾಗಿತ್ತಾದರೂ ಅಲ್ಲಿನ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅದನ್ನು ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ತನ್ನ ಚಿಕ್ಕಪ್ಪ ಶರದ್ ಪವಾರ್ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್ ಎನ್‌ ಡಿಎ ಸರಕಾರದ ಜೊತೆ ಕೈಜೋಡಿಸಿರುವುದರಿದ ಎನ್‌ಸಿಪಿಯಲ್ಲಿ ವಿಭಜನೆಯುಂಟಾಗಿರುವ ಸಂದರ್ಭದಲ್ಲೇ ಪ್ರತಿಪಕ್ಷ ನಾಯಕರ ಸಮಾವೇಶ ನಡೆಯುತ್ತಿರುವುದು ಹೆಚ್ಚಿನ ಮಹತ್ವ ಪಡೆದಿದೆ.

ಪ್ರತಿಪಕ್ಷಗಳ ಏಕತೆಗೆ ಸಂಬಂಧಿಸಿದಂತೆ ಪಾಟ್ನಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಅನು ಷ್ಠಾನವನ್ನು ಚುರುಕುಗೊಳಿಸುವುದು ಹಾಗೂ ಮಾತುಕತೆಗಳನ್ನು ಮುಂದುವರಿಸುವುದು ಮುಖ್ಯವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷ ನಾಯಕರನ್ನು ಸಮಾವೇಶಕ್ಕೆ ಆಮಂತ್ರಿಸಿ ಬರೆದ ಪತ್ರದಲ್ಲಿ ತಿಳಿಸಿದ್ದರು.

”ನಮ್ಮ ದೇಶವು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ” ಎಂದು ಅವರು ಪತ್ರದಲ್ಲಿ ಹೇಳಿದ್ದರು.

ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಎಡರಂಗದ ನಾಯಕರ ಜೊತೆ ವಾಕ್ಸಮರ ನಡೆಸಿದ್ದ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡಾ ಬೆಂಗಳೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಇತ್ತೀಚೆಗೆ ಅವರ ಎಡಮಂಡಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಜಾಗರೂಕತೆಯಿಂದ ನಡೆದಾಡುವಂತೆ ವೈದ್ಯರು ಸಲಹೆ ನೀಡಿರುವುದರಿಂದ ಅವರು ಭೋಜನಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿದುಬಂದಿದೆ.

ಮುಂದಿನ ತಿಂಗಳು ಮೋದಿ ಸರಕಾರದ ವಿರುದ್ಧ ಜಂಟಿ ರಾಲಿಯೊಂದನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆಯೂ ವಿಪಕ್ಷ ನಾಯಕರು ಚರ್ಚಿಸುವ ಸಾಧ್ಯತೆಯಿದೆ.

ಬೆಂಗಳೂರು ಸಮಾವೇಶದಲ್ಲಿ ಕೃಷ್ಣ ಪಟೇಲ್ ನೇತೃತ್ವದ ಅಪ್ಪಾ ದಳ (ಕೆ) ಹಾಗೂ ತಮಿಳುನಾಡಿನ ಮನಿದನೇಯ ಮಕ್ಕಳ ಕಚ್ಚಿ (ಎಂಎಂಕೆ) ಪಕ್ಷಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರೊಂದಿಗೆ ವಿಪಕ್ಷ ನಾಯಕರ ಸಭೆಯಲ್ಲಿ ಪಾಲ್ಗೊಳ್ಳುವ ಪಕ್ಷಗಳ ಸಂಖ್ಯೆ 26ಕೇರಿದೆ.

ಪಾಟ್ನಾ ಸಮಾವೇಶದಲ್ಲಿ ಮುಸ್ಲಿಮ್‌ಗ್, ಕೇರಳ ಕಾಂಗ್ರೆಸ್‌ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಎಂಡಿಎಂಕೆ, ಕೆಡಿಎಂಕೆ,ಎಸಿಕೆ, ಫಾರ್ವಡ್್ರ ಬ್ಲಾಕ್ ಹಾಗೂ ಆರ್‌ ಎಸ್‌ಪಿ ಪಕ್ಷಗಳು ಕೂಡಾ ಸಮಾವೇಶದಲ್ಲಿ ಭಾಗವಹಿಸಲಿವೆ. ಜೆಡಿಯು ಆಯೋಜಿಸಿದ ಪಾಟ್ನಾ ಸಮಾವೇಶದಲ್ಲಿ ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಆರ್‌ಎಲ್‌ಡಿ, ಆರ್‌ಜೆಡಿ, ಎನ್‌ ಸಿಪಿ, ಆಪ್, ಸಿಪಿಎಂ, ಸಿಪಿಐ, ಸಿಪಿಎಂಎಲ್(ಎಲ್), ಸಮಾಜವಾದಿ ಪಕ್ಷ, ನ್ಯಾಶನಲ್ ಕಾನರೆನ್ಸ್, ಪಿಡಿಪಿ, ಶಿವಸೇನಾ, (ಯುಬಿಟಿ) ಹಾಗೂ ಜೆಎಂಎಂ ಪಕ್ಷಗಳು ಭಾಗವಹಿಸಿದ್ದವು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು: ಬಿಹಾರದಲ್ಲಿ ಸೇರಿದ 6 ಸಿಎಂಗಳು, 18 ಪ್ರತಿ ಪಕ್ಷಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದ ಎಸ್‌ಐಟಿ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದೀಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ...