Homeಮುಖಪುಟಅದಾನಿ ವಂಚನೆ ಕುರಿತ ತನಿಖೆಗೆ ಪ್ರತಿಪಕ್ಷಗಳ ಪಟ್ಟು: ಸಂಸತ್ತಿನಲ್ಲಿ ಪ್ರತಿಭಟನೆ

ಅದಾನಿ ವಂಚನೆ ಕುರಿತ ತನಿಖೆಗೆ ಪ್ರತಿಪಕ್ಷಗಳ ಪಟ್ಟು: ಸಂಸತ್ತಿನಲ್ಲಿ ಪ್ರತಿಭಟನೆ

- Advertisement -
- Advertisement -

ಅದಾನಿ ಗ್ರೂಪ್‌ನಿಂದ ದೊಡ್ಡ ಪ್ರಮಾಣದ ಕಾರ್ಪೊರೇಟ್ ವಂಚನೆ ನಡೆದಿದೆ ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ಶುಕ್ರವಾರ ಸಂಸತ್ತಿನಲ್ಲಿ ಸತತ ಎರಡನೇ ದಿನವೂ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.

ಗದ್ದಲದಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು. ಇದಕ್ಕೂ ಮುನ್ನ ಶುಕ್ರವಾರ 16 ವಿರೋಧ ಪಕ್ಷಗಳ ನಾಯಕರು ಕಾಂಗ್ರೆಸ್ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆಯವರ ಚೇಂಬರ್‌ನಲ್ಲಿ ಸಭೆ ನಡೆಸಿದ್ದರು.

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಗಳು ಅದಾನಿ ಸಂಸ್ಥೆಯ ಜೊತೆಯಲ್ಲಿ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ನಾಗರಿಕರ ಹಣ ಕಳೆದುಹೋಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. “ಈ ಕುರಿತು ಸಂಪೂರ್ಣ ತನಿಖೆಯಾಗಬೇಕೆಂದು ವಿರೋಧ ಪಕ್ಷಗಳ ಒಕ್ಕೂಟವು ಒತ್ತಾಯಿಸುತ್ತವೆ” ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ದಶಕಗಳ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆಯಲ್ಲಿ ಅದಾನಿ ಗ್ರೂಪ್ ತೊಡಗಿದೆ ಎಂದು ಅಮೆರಿಕ ಮೂಲದ ಕಂಪನಿ ಹಿಂಡೆನ್‌ಬರ್ಗ್ ರಿಸರ್ಚ್‌ ಆರೋಪ ಮಾಡಿದೆ. ಈ ಕುರಿತು ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಶುಕ್ರವಾರ ಲೋಕಸಭೆಯ ಕಲಾಪ ಆರಂಭವಾದ ಕೂಡಲೇ ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿದರು. ಗೌತಮ್ ಅದಾನಿ ಗ್ರೂಪಿನ ವ್ಯವಹಾರ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರಿಗೆ ಸೂಚಿಸಿದರು ಎಂದು ಪಿಟಿಐ ವರದಿ ಮಾಡಿದೆ. ಪ್ರತಿಪಕ್ಷಗಳು ಈ ಬಗ್ಗೆ ಸೂಕ್ತ ಸೂಚನೆ ನೀಡಿದರೆ ಚರ್ಚೆಗೆ ಸಾಕಷ್ಟು ಕಾಲಾವಕಾಶ ನೀಡಲು ಸಿದ್ಧ ಎಂದಿದ್ದಾರೆ.

ಆದಾಗ್ಯೂ, ಪ್ರತಿಪಕ್ಷಗಳು ಘೋಷಣೆಗಳನ್ನು ಮುಂದುವರೆಸಿದವು, ಇದರಿಂದಾಗಿ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಅದಾನಿ ಗ್ರೂಪ್‌ನ ಬಿಕ್ಕಟ್ಟಿನ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸಂಸದರು ಸಲ್ಲಿಸಿದ್ದ 15 ಮುಂದೂಡಿಕೆ ಸೂಚನೆಗಳನ್ನು ರಾಜ್ಯಸಭೆಯಲ್ಲಿ ಸಭಾಪತಿ ಜಗದೀಪ್ ಧಂಖರ್ ತಿರಸ್ಕರಿಸಿದ್ದಾರೆ. “ನಿಯಮ 267 ರ ಅವಶ್ಯಕತೆಗಳನ್ನು ಪೂರೈಸದ ಕಾರಣ ಪ್ರತಿಪಕ್ಷಗಳು ಹೇಳಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಪಿಟಿಐಗೆ ಅವರು ತಿಳಿಸಿದ್ದಾರೆ.

ಎಲ್‌ಐಸಿ, ಎಸ್‌ಬಿಎಂ ಮುಂದೆ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ಫೆಬ್ರವರಿ 6 ರಂದು ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಗಳ ಮುಂದೆ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕಾಂಗ್ರೆಸ್ ಪಕ್ಷದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ತಿಳಿಸಿದ್ದಾರೆ.

“ಎಲ್‌ಐಸಿಯು ಅದಾನಿ ಗ್ರೂಪ್‌ನಲ್ಲಿ 36 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಮಾಡಿದೆ ಮತ್ತು ಭಾರತೀಯ ಬ್ಯಾಂಕ್‌ಗಳು ಅದಾನಿಯಲ್ಲಿ ಸುಮಾರು 80 ಸಾವಿರ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...