Homeಮುಖಪುಟಇಸ್ರೇಲ್ ವಿರೋಧಿ ಹೇಳಿಕೆಗೆ ಪಕ್ಷದ ವರಿಷ್ಠರಿಂದ ವಿರೋಧ; ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆಸಿ...

ಇಸ್ರೇಲ್ ವಿರೋಧಿ ಹೇಳಿಕೆಗೆ ಪಕ್ಷದ ವರಿಷ್ಠರಿಂದ ವಿರೋಧ; ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೆಸಿ ತ್ಯಾಗಿ

- Advertisement -
- Advertisement -

ಪ್ಯಾಲೇಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಖಂಡಿಸಿದ್ದ ಜೆಡಿಯುನ ಹಿರಿಯ ನಾಯಕ ಕೆಸಿ ತ್ಯಾಗಿ ಅವರು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ನೇಮಕ ಮಾಡಿದ್ದಾರೆ.

“ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ” ಎಂದು ಪಕ್ಷವು ಹೇಳಿದ್ದರೂ, ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಹೇಳಿಕೆಗಳು ಜೆಡಿಯು ಮಿತ್ರಪಕ್ಷವಾದ ಬಿಜೆಪಿ ನಾಯಕತ್ವಕ್ಕೆ  ಸರಿಹೋಗದ ಕಾರಣ ವರಿಷ್ಠರು ಅವರ ರಾಜೀನಾಮೆ ಪಡೆದಿದ್ದಾರೆ ಎನ್ನಲಾಗಿದೆ.

“ಜನತಾದಳ (ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾದ ನಿತೀಶ್ ಕುಮಾರ್ (ಮುಖ್ಯಮಂತ್ರಿ, ಬಿಹಾರ) ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ. ವಕ್ತಾರ ಹುದ್ದೆಗೆ ಪಕ್ಷದಲ್ಲಿರುವ ಕೆ.ಸಿ. ತ್ಯಾಗಿ ಅವರು ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ಪಕ್ಷದ ವಕ್ತಾರ ಹುದ್ದೆಗೆ ಸ್ಥಾನ ನೀಡಲಾಗಿದೆ” ಎಂದು ಜೆಡಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೆಡಿಯು ಬಿಡುಗಡೆ ಮಾಡಿರುವ ಪತ್ರದಲ್ಲಿ, ತ್ಯಾಗಿ ಅವರು ಈ ಹಿಂದೆಯೂ ಸಹ ಸಾಂಸ್ಥಿಕ ಜವಾಬ್ದಾರಿಯಿಂದ ಮುಕ್ತರಾಗಲು ವಿನಂತಿಸಿದ್ದರು ಎಂದು ಹೇಳಿದ್ದಾರೆ. “ಕಳೆದ ಕೆಲವು ತಿಂಗಳುಗಳಿಂದ ನಾನು ಟಿವಿ ಚರ್ಚೆಗಳಿಂದ ದೂರವಿರುವುದನ್ನು ನೀವು ಗಮನಿಸಿರಬೇಕು. ಬೇರೆ ಕೆಲಸದ ಕಾರಣದಿಂದ ನಾನು ವಕ್ತಾರ ಹುದ್ದೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸಿ. ಬಿಹಾರ ಸರ್ಕಾರದ ಸಾಧನೆಗಳ ಕುರಿತು ಪ್ರಚಾರಕ್ಕೆ ನಾನು ಲಭ್ಯವಿದ್ದೇನೆ” ಎಂದು ಅವರು ಬರೆದಿದ್ದಾರೆ.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯ ನಂತರ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸಿದ ಪ್ರಮುಖ ಮಿತ್ರಪಕ್ಷಗಳಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಸೇರಿದೆ. ಆಡಳಿತಾರೂಢ ಎನ್‌ಡಿಎ ಬಣದಲ್ಲಿ ಸಮನ್ವಯತೆ ಕಾಯ್ದುಕೊಳ್ಳುವಂತೆ ಬಿಜೆಪಿಯು ಮಿತ್ರಪಕ್ಷಗಳನ್ನು ಕೇಳುತ್ತಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ, ವಕ್ಫ್ ತಿದ್ದುಪಡಿ ಮಸೂದೆ, ಏಕರೂಪ ನಾಗರಿಕ ಸಂಹಿತೆ ಮತ್ತು ಗಾಜಾದಲ್ಲಿನ ಯುದ್ಧದಂತಹ ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಟೀಕೆಗಳು ಜೆಡಿಯು ನಾಯಕರ ಕಣ್ಣು ಕೆಂಪಾಗುವಂತೆ ಮಾಡಿತು.

ಇತ್ತೀಚೆಗೆ, ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಹೇಳಿಕೆಯನ್ನು ನೀಡಿದ ಸಂಸದರು ಮತ್ತು ಮಾಜಿ ಸಂಸದರಲ್ಲಿ ತ್ಯಾಗಿಯೂ ಸೇರಿದ್ದಾರೆ. “ನಾವು, ರಾಜಕೀಯ ಸ್ಪೆಕ್ಟ್ರಮ್‌ನ ಕೆಳಗಿನ ಸಹಿ ಮಾಡಲಾದ ಸಂಸದರು, ನಡೆಯುತ್ತಿರುವ ಜಿಯೋನಿಸ್ಟ್ ಆಕ್ರಮಣವನ್ನು ಮತ್ತು ಇಸ್ರೇಲ್‌ನಿಂದ ಪ್ಯಾಲೇಸ್ಟಿನಿಯನ್ ಜನರ ಘೋರ ನರಮೇಧವನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ. ಈ ಕ್ರೂರ ಆಕ್ರಮಣವು ಮಾನವೀಯತೆಯ ಅವಮಾನ ಮಾತ್ರವಲ್ಲದೆ ಅಂತರರಾಷ್ಟ್ರೀಯ ಕಾನೂನು ಮತ್ತು ತತ್ವಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಹೇಳಿಕೆಯಲ್ಲಿ ಇದ್ರೇಲ್ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ.

“ನ್ಯಾಯ ಮತ್ತು ಮಾನವ ಹಕ್ಕುಗಳ ಕಾರಣಕ್ಕಾಗಿ ಯಾವಾಗಲೂ ಹೋರಾಡುವ ರಾಷ್ಟ್ರವಾಗಿ, ಭಾರತವು ಈ ನರಮೇಧದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ” ಎಂದು ಹೇಳಿಯಲ್ಲಿದೆ. ಹಲವಾರು ವಿರೋಧ ಪಕ್ಷದ ರಾಜಕಾರಣಿಗಳಲ್ಲದೆ, ತ್ಯಾಗಿ ಕೂಡ ಈ ಹೇಳಿಕೆಗೆ ತಮ್ಮ ಸಹಮತ ವ್ಯಕ್ತಪಡಿಸಿ ಸಹಿ ಹಾಕಿದ್ದರು.

73ರ ಹರೆಯದ ತ್ಯಾಗಿ, ಹಲವು ವಿಚಾರಗಳಲ್ಲಿ ತಮ್ಮದೇ ಆದ ನಿಲುವು ತಳೆದು ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ ಎಂದು ಜೆಡಿಯು ಮೂಲಗಳು ತಿಳಿಸಿವೆ. ಜೆಡಿಯು ಮತ್ತು ಅದರ ಮಿತ್ರ ಪಕ್ಷವಾದ ಬಿಜೆಪಿ ನಡುವೆ “ಗೊಂದಲ ಮತ್ತು ಅನಗತ್ಯ ಘರ್ಷಣೆಯನ್ನು ಸೃಷ್ಟಿಸುವ” ವಿವಾದಾತ್ಮಕ ವಿಷಯಗಳ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೊದಲು ತ್ಯಾಗಿ ಸಮಾಲೋಚನೆ ನಡೆಸಬೇಕಿತ್ತು ಎಂದು ಪಕ್ಷದ ನಾಯಕತ್ವವು ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ‘ಕಾನೂನು ವ್ಯವಸ್ಥೆಯಲ್ಲಿ ನನಗೆ ನಂಬಿಕೆಯಿದೆ..’; ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೌನ ಮುರಿದ ಮಲಯಾಳಂ ನಟ ಜಯಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...