Homeಕರ್ನಾಟಕಯತ್ನಾಳ್‌ಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಬಿಜೆಪಿಯಲ್ಲಿ ವಿರೋಧ; ಬ್ಲ್ಯಾಕ್​ಮೇಲ್​ ಆರೋಪ

ಯತ್ನಾಳ್‌ಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಬಿಜೆಪಿಯಲ್ಲಿ ವಿರೋಧ; ಬ್ಲ್ಯಾಕ್​ಮೇಲ್​ ಆರೋಪ

- Advertisement -
- Advertisement -

ಮಂಗಳವಾರ ರಾತ್ರಿ ಬಿಜೆಪಿ ಪಕ್ಷ 189 ಕ್ಷೇತ್ರಗಳಿಗೆ ಘೋ‍ಷಣೆ ಮಾಡಿದೆ. ರಾಜ್ಯದ ಹಲವೆಡೆ ಟಿಕೆಟ್ ವಂಚಿತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಟಿಕೆಟ್ ಸಿಗುತ್ತೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ. ಹೀಗಾಗಿ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದಕ್ಕೆ ವಿಜಯಪುರ ನಗರ ಕ್ಷೇತ್ರ ಕೂಡ ಹೊರತಾಗಿಲ್ಲ.

ವಿಜಯಪುರ ನಗರ ಕ್ಷೇತ್ರದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಹಿನ್ನೆಲೆ ಜಿಲ್ಲಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಯತ್ನಾಳ್ ವಿರುದ್ಧ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಕಿಡಿಕಾರಿದ್ದಾರೆ. ”ಬಸನಗೌಡ ಯತ್ನಾಳ್ ರಾಜ್ಯ & ಹೈಕಮಾಂಡ್​ ನಾಯಕರಿಗೆ ಬ್ಲ್ಯಾಕ್​ಮೇಲ್​ ಮಾಡಿ ಟಿಕೆಟ್ ಪಡೆದಿದ್ದಾರೆ” ಎಂದು ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ

”ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿ ಹಾಕೋದಾದರೆ ಬಬಲೇಶ್ವರದಲ್ಲಿ ಎಂಬಿ ಪಾಟೀಲ್ ವಿರುದ್ಧ ಯಾಕೆ ಪ್ರಬಲ ಅಭ್ಯರ್ಥಿ ಹಾಕಿಲ್ಲ. ಎಂ.ಬಿ.ಪಾಟೀಲ್ ‘ಕೈ’ ನಾಯಕ ಅಲ್ವಾ? ಯಾಕೆ ಕಟ್ಟಿಹಾಕಲಿಲ್ಲ. ಒಳ ಒಪ್ಪಂದ ಮಾಡಿಕೊಂಡಿದ್ದಾರೆ” ಎಂದು ಪಟ್ಟಣಶೆಟ್ಟಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೊಬ್ಬ ಅಸಮಾಧಾನಿತ ಹಿರಿಯ ನಾಯಕ ರಾಜಕೀಯ ನಿವೃತ್ತಿ ಘೋಷಣೆ

ಬಂಡಾಯದ ಮುನ್ಸೂಚನೆ

ಇನ್ನೆರಡು ದಿನಗಳಲ್ಲಿ ಬಣಜಿಗ ಸಮಾಜದ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಸಮಾಜದ ಮುಖಂಡರು, ಬೆಂಬಲಿಗರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದರು. ಇದೇ ವೇಳೆ ಪಕ್ಷೇತರ ಅಥವಾ ಬೇರೆ ಪಕ್ಷದಿಂದ ಶಾಸಕ ಯತ್ನಾಳ್ ವಿರುದ್ಧ ಸ್ಪರ್ಧಿಸುವ ಸುಳಿವನ್ನೂ ಪಟ್ಟಣಶೆಟ್ಟಿ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಗೆ ಬಿಜೆಪಿ ಹೊಸ ಪ್ರಯೋಗಕ್ಕೆ ಮುಂದಾಗಿ, ಯಡವಟ್ಟು ಮಾಡಿಕೊಂಡಿದೆ. ಟಿಕೆಟ್ ಘೋ‍‍‍ಷಣೆ ಬೆನ್ನಲ್ಲೇ ರಾಜ್ಯದ ಹಲವೆಡೆ ಅಸಮಾಧಾನ ಹೆಚ್ಚಾಗಿದ್ದು, ಬಹುತೇಕ ಕಡೆಗಳಲ್ಲಿ ಆಕಾಂಕ್ಷೆ ಹೊಂದಿದ್ದವರು ಬಂಡಾಯ ಏಳುವ ಸುಳಿವು ನೀಡುತ್ತಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಟಿಕೆಟ್ ನೀಡದಿದ್ದರೂ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದ್ದಾರೆ. ಮತ್ತೊಂದೆಡೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ.

ಇನ್ನು ಕೆಲ ಹಿರಿಯ ರಾಜಕಾರಣಿಗಳು ನಿವೃತ್ತಿಯನ್ನೇ ಘೋಷಣೆ ಮಾಡುತ್ತಿದ್ದಾರೆ. ಮಂಗಳವಾರ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಸಾಲಿಗೆ ಸೇರಿದರು. ಇಂದು ಸಚಿವ ಎಸ್ ಅಂಗಾರ ಅವರು ಟಿಕೆಟ್ ಸಿಗದಿರುವುದಕ್ಕೆ ಬೇಸರಗೊಂಡು ಸಂಪೂರ್ಣ ರಾಜಕೀಯ ಜೀವನದಿಂದಲೇ ನಿವೃತ್ತಿ ಘೋ‍ಷಣೆ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...