HomeUncategorizedವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಲ್ಲಿದೆ - ಅಖಿಲೇಶ್ ಯಾದವ್

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಲ್ಲಿದೆ – ಅಖಿಲೇಶ್ ಯಾದವ್

- Advertisement -
- Advertisement -

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯು ಒಗ್ಗಟ್ಟಿನಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮೈತ್ರಿಕೂಟದ ನಾಯಕತ್ವ ಮತ್ತು ಕಾಂಗ್ರೆಸ್ ಪಾತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. 

ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂಡಿಯಾ ಮೈತ್ರಿಯ ಭವಿಷ್ಯದ ಬಗ್ಗೆ ಸ್ಪಷ್ಟ ನಿಲುವಿಗೆ ಬರುವಂತೆ ಕರೆ ನೀಡಿದ್ದರು, ಈ ನಡುವೆ ಅಖಿಲೇಶ್ ಈ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಒಮರ್‌ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್‌ ರಾಷ್ಟ್ರೀಯ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ.

ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸಲು ಸಮಾಜವಾದಿ ಪಕ್ಷ ಇನ್ನೂ ಅದೇ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಅಖಿಲೇಶ್ ಯಾದವ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇತರ ಪಕ್ಷಗಳು ಸಮಾಜವಾದಿ ಪಕ್ಷದ ಜೊತೆ ನಿಲ್ಲಬೇಕು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿ 8 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಕಳೆದ ವಾರ ಘೋಷಣೆ ಮಾಡಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ ಮತ್ತು ಕಾಂಗ್ರೆಸ್ ಎರಡೂ ಇಂಡಿಯಾ ಮೈತ್ರಿಯ ಭಾಗವಾಗಿದ್ದರೂ, ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ವಿರೋಧ ಪಕ್ಷಗಳ

ಜನವರಿ 9 ರಂದು ಒಮರ್ ಅಬ್ದುಲ್ಲಾ ಅವರು ಮೈತ್ರಿಕೂಟವು ಒಂದಾ ಒಟ್ಟಾಗಿ ಕೆಲಸ ಮಾಡಬೇಕು ಅಥವಾ ಮೈತ್ರಿಕೂಟದ ಉದ್ದೇಶವು 2024 ರ ಲೋಕಸಭಾ ಚುನಾವಣೆಗೆ ಸೀಮಿತವಾಗಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಹೇಳಿದ್ದರು. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮೈತ್ರಿಕೂಟದ ಉದ್ದೇಶಗಳನ್ನು ಪರಿಹರಿಸಲು ಸಭೆ ಕರೆಯುವಂತೆ ಒಮರ್ ಅಬ್ದುಲ್ಲಾ ಅವರ ಪಕ್ಷದ ಸದಸ್ಯರನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಇತರ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ಪರಿಣಾಮಕಾರಿಯಾಗಿ ಹೇಗೆ ಕೆಲಸ ಮಾಡಬಹುದು ಎಂಬುದನ್ನು ನಿರ್ಧರಿಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕರೂ ಆಗಿರುವ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಅದಕ್ಕೂ& ಒಂದು ದಿನದ ಮೊದಲು, ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಎದುರಿಸಲು ಮಾತ್ರ ಇಂಡಿಯಾ ಮೈತ್ರಿಯನ್ನು ರಚಿಸಲಾಗಿದೆ ಎಂದು ಹೇಳಿದ್ದರು. “ಮೈತ್ರಿಕೂಟಕ್ಕೆ ಅದಕ್ಕಿಂತ ಹೆಚ್ಚಿನ ಮಹತ್ವವಿರಲಿಲ್ಲ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಕೂಡಾ ಶನಿವಾರ ಮಹಾರಾಷ್ಟ್ರದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ತಮ್ಮ ಪಕ್ಷವೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಇದನ್ನೂ ಓದಿ: ದೆಹಲಿ ವಿಧಾನಸಭೆ ಚುನಾವಣೆ| ದಲಿತ ಪ್ರಾಬಲ್ಯದ 30 ಸ್ಥಾನಗಳ ಮೇಲೆ ಕಣ್ಣಿಟ್ಟ ಬಿಜೆಪಿ

ದೆಹಲಿ ವಿಧಾನಸಭೆ ಚುನಾವಣೆ| ದಲಿತ ಪ್ರಾಬಲ್ಯದ 30 ಸ್ಥಾನಗಳ ಮೇಲೆ ಕಣ್ಣಿಟ್ಟ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...