Homeಮುಖಪುಟಎಸ್‌ಐಆರ್ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಎಸ್‌ಐಆರ್ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಗದ್ದಲದ ನಡುವೆ ಮಣಿಪುರ ಜಿಎಸ್‌ಟಿ ಮಸೂದೆ ಅಂಗೀಕಾರ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಪ್ರತಿಭಟಿಸಿದ ಹಿನ್ನೆಲೆ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಾಳೆಗೆ (ಡಿಸೆಂಬರ್ 2) ಮುಂದೂಡಿಕೆಯಾಗಿದೆ.

ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆ ಮಧ್ಯಾಹ್ನದ ನಂತರ ಮಣಿಪುರದ ಜಿಎಸ್‌ಟಿ ಮಸೂದೆ ಅಂಗೀಕಾರಗೊಂಡಿದೆ. ಈ ಮಸೂದೆಯನ್ನು ಲೋಕಸಭೆ ಕಲಾಪದ ಬೆಳಗ್ಗಿನ ಅವಧಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದರು. ಮಸೂದೆಯ ಕುರಿತು ನಾಳೆಯ ಕಲಾಪದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಮಧ್ಯಾಹ್ನ 2.20ಕ್ಕೆ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ಇದಕ್ಕೂ ಮುನ್ನ ಪ್ರತಿಪಕ್ಷಗಳ ಪ್ರತಿಭಟನೆ ಹಿನ್ನೆಲೆ, ಕಲಾಪವನ್ನು ಎರಡು ಬಾರಿ ಮುಂದೂಡಿಕೆ ಮಾಡಿ ಪುನರಾರಂಭಿಸಲಾಗಿತ್ತು.

ರಾಜ್ಯ ಸಭೆ ಕಲಾಪವನ್ನೂ ನಾಳೆಗೆ ಮುಂದೂಡಲಾಗಿದೆ. ಅಲ್ಲಿಯೂ ಎಸ್‌ಐಆರ್ ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷ ಸದಸ್ಯರು ಪಟ್ಟು ಹಿಡಿದಿದ್ದಾರೆ. ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ಎಸ್‌ಐಆರ್ ಅಥವಾ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಹಿಂಜರಿಯುವುದಿಲ್ಲ. ಆದರೆ, ಸಮಯ ಮಿತಿಯನ್ನು ನಿಗದಿಪಡಿಸುವಂತೆ ಒತ್ತಾಯಿಸಬೇಡಿ ಎಂದಿದ್ದಾರೆ. ಸಚಿವರ ಪ್ರತಿಕ್ರಿಯೆಯಿಂದ ತೃಪ್ತರಾಗದ ಹಲವಾರು ವಿರೋಧ ಪಕ್ಷಗಳ ಸದಸ್ಯರು ಮೇಲ್ಮನೆಯಿಂದ ಹೊರನಡೆದರು.

ನೂತನ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ಇಂದು ರಾಜ್ಯಸಭೆಯ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಅವರಿಗೆ ಇದು ಮೊದಲ ಸಂಸತ್ ಅಧಿವೇಶನವಾಗಿದೆ.

ಉಭಯ ಸದನಗಳ ಕಲಾಪ ನಾಳೆ (ಡಿ.2) ಬೆಳಿಗ್ಗೆ 11 ಗಂಟೆಗೆ ಪುನರಾರಂಭಗೊಳ್ಳಲಿದೆ. ನಾಳೆಯೂ ಎಸ್‌ಐಆರ್, ದೇಶದ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು ಹಿಡಿಯುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...

ಉತ್ತರ ಪ್ರದೇಶದಲ್ಲಿ ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ: ಎಸ್‌ಐಆರ್‌ ಕೆಲಸದ ಒತ್ತಡ ಕಾರಣವೆಂದ ಕುಟುಂಬ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ಬೂತ್ ಮಟ್ಟದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಕೆಲಸದ ಒತ್ತಡದಿಂದಾಗಿ ಅವರು ಈ ನಿರ್ಧಾರ ಮಾಡಿದ್ದಾರೆ ಎಂದು...