Homeಮುಖಪುಟನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

ನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

- Advertisement -
- Advertisement -

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಬಗ್ಗೆ ವಿರೋಧ ಪಕ್ಷಗಳು ಭಾನುವಾರ  ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿಯ ಭರವಸೆಗಳು ಸುಳ್ಳಿನಿಂದ ತುಂಬಿಕೊಂಡಿದೆ ಮತ್ತು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದು, ಕೇಸರಿ ಪಕ್ಷವು ಪ್ರಣಾಳಿಕೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.

ಪ್ರಣಾಳಿಕೆಯು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ವಿಶೇಷ ಗಮನವನ್ನು ಹರಿಸಿದೆ. ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಜಾರಿಗೆ ತರಲು ಮತ್ತು ಏಕಕಾಲದಲ್ಲಿ ಚುನಾವಣೆಗಳನ್ನು(ಒಂದು ರಾಷ್ಟ್ರ, ಒಂದು ಚುನಾವಣೆ) ನಡೆಸುವುದಾಗಿ ಬಿಜೆಪಿಯು ಭರವಸೆ ನೀಡಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಣದುಬ್ಬರ ಮತ್ತು ನಿರುದ್ಯೋಗ ಬಿಜೆಪಿಯ ಪ್ರಣಾಳಿಕೆಯಿಂದ “ಕಾಣೆಯಾಗಿದೆ” ಎಂದು ಹೇಳಿದ್ದಾರೆ. ಜನರ ಜೀವನಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಬಿಜೆಪಿ ಬಯಸುವುದಿಲ್ಲ. ಇಂಡಿಯಾ ಮೈತ್ರಿ ಕೂಟದ ಯೋಜನೆ ತುಂಬಾ ಸ್ಪಷ್ಟವಾಗಿದೆ. 30 ಲಕ್ಷ ಹುದ್ದೆಗಳಿಗೆ ನೇಮಕಾತಿ ಮತ್ತು ಪ್ರತಿ ವಿದ್ಯಾವಂತ ಯುವಕನಿಗೆ 1 ಲಕ್ಷ ರೂಪಾಯಿಗಳ ಶಾಶ್ವತ ಉದ್ಯೋಗ ನೀಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಾರಿ ಯುವಕರು ಪ್ರಧಾನಿ ಮೋದಿಯವರ ಬಲೆಗೆ ಬೀಳುವುದಿಲ್ಲ, ಅವರು ಈಗ ಕಾಂಗ್ರೆಸ್‌ನ ಕೈಗಳನ್ನು ಬಲಪಡಿಸುತ್ತಾರೆ ಮತ್ತು ದೇಶದಲ್ಲಿ ‘ಉದ್ಯೋಗ ಕ್ರಾಂತಿ’ಗೆ ನೆರವಾಗುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿಯ ಪ್ರಣಾಳಿಕೆಯು ಕೇವಲ ಬಾಯಿ ಮಾತಿಗೆ ಮಾತ್ರ ಅವರ ನಿಜವಾದ ಪ್ರಣಾಳಿಕೆ, ‘ಸಂವಿಧಾನ್ ಬದ್ಲೋ ಪತ್ರ’ (ಸಂವಿಧಾನದ ಬದಲಿಸುವ ಪ್ರಣಾಳಿಕೆ) ಎಂದು ಆರೋಪಿಸಿದರು. ನೆನಪಿಡಿ, ಬಿಜೆಪಿ ದೇಶ, ಸಮಾಜ, ಪ್ರಜಾಪ್ರಭುತ್ವದ ವಿರುದ್ಧ ಈ ಎಲ್ಲ ಷಡ್ಯಂತ್ರಗಳನ್ನು ತಳಮಟ್ಟದಿಂದ ಪ್ರಾರಂಭಿಸುತ್ತದೆ. ಆರಂಭದಲ್ಲಿ ಉನ್ನತ ನಾಯಕರು ಜನರ ಮುಂದೆ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತಾರೆ, ಆದರೆ ರಾತ್ರಿಯಲ್ಲಿ ಅವರು ಸಂವಿಧಾನವನ್ನು ನಾಶಮಾಡಲು ಸ್ಕ್ರಿಪ್ಟ್ ಬರೆಯುತ್ತಾರೆ. ಸಂಪೂರ್ಣ ಅಧಿಕಾರ ಸಿಕ್ಕ ನಂತರ ಸಂವಿಧಾನದ ಮೇಲೆ ದಾಳಿ ನಡೆಸುತ್ತಾರೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವು “ಭಾರತದ ಆತ್ಮ” ಎಂದು ಹೇಳಿದ ಪ್ರಿಯಾಂಕ ಗಾಂಧಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಹೇಳಿದರು.

ಇಂದು ನಾವೆಲ್ಲರೂ ಒಗ್ಗೂಡಿ ಬಿಜೆಪಿಯ ಸಂವಿಧಾನ ಬದಲಾವಣೆ ಮಿಷನ್‌ನ್ನು ತಿರಸ್ಕರಿಸಬೇಕಾಗಿದೆ ಮತ್ತು ದೇಶವನ್ನು ಸಂವಿಧಾನದಿಂದ ನಡೆಸಲಾಗುವುದು ಮತ್ತು ಸಂವಿಧಾನವನ್ನು ಬದಲಾಯಿಸುವ ಉದ್ದೇಶ ಹೊಂದಿರುವವರನ್ನು ನಾವು ಒಟ್ಟಾಗಿ ಸೋಲಿಸುತ್ತೇವೆ ಎಂದು ಗಟ್ಟಿಯಾಗಿ ಹೇಳಬೇಕಾಗಿದೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಅವರು ಮಾಡುತ್ತಿಲ್ಲ. ಬಿಜೆಪಿಯ ಪ್ರಣಾಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದರು, ಅವರು ಎಂಎಸ್‌ಪಿ ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ಅವರು ತಮ್ಮ ಅಧಿಕಾರಾದಲ್ಲಿದ್ದರೂ ಅಂತಹ ಯಾವುದೇ ದೊಡ್ಡ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಪ್ರಣಾಳಿಕೆಗೆ ‘ಸಂಕಲ್ಪ ಪತ್ರ’  ಎಂದು ಹೆಸರಿಟ್ಟಿರುವುದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಆಕ್ಷೇಪವನ್ನು ವ್ಯಕ್ತಪಡಿಸಿದ್ದು, ಅದಕ್ಕೆ ‘ಮಾಫಿನಾಮಾ’  ಎಂದು ಹೆಸರಿಡಬೇಕು ಎಂದು ಹೇಳಿದ್ದಾರೆ.ದೇಶದ ದಲಿತರು, ರೈತರು, ಯುವಕರು ಮತ್ತು ಬುಡಕಟ್ಟು ಜನರಲ್ಲಿ ಮೋದಿಜಿ ಕ್ಷಮೆ ಕೇಳಬೇಕಿತ್ತು. ಕೇಸರಿ ಪಕ್ಷದ ಪ್ರಣಾಳಿಕೆಯು ವಿಶ್ವಾಸಾರ್ಹವಲ್ಲ. 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಬರೆದುಕೊಂಡಿದ್ದಾರೆ. ಆಗ ಎಲ್ಲಿರುತ್ತೀರಿ? 5 ವರ್ಷಗಳ ಖಾತೆ ಕೊಡಿ. ಅವರು ತುಂಬಾ ಸುಳ್ಳು ಹೇಳಿದ್ದಾರೆ, ಈಗ ಯಾರೂ ಅವರನ್ನು ನಂಬುವುದಿಲ್ಲ ಎಂದು ಖೇರಾ ಹೇಳಿದ್ದಾರೆ.

ಯುವಕರು ಉದ್ಯೋಗ ಹುಡುಕುತ್ತಿದ್ದಾರೆ, ಹಣದುಬ್ಬರ ಹೆಚ್ಚುತ್ತಿದೆ, ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಅವರು ಚಿಂತಿಸುವುದಿಲ್ಲ, 10 ವರ್ಷಗಳಲ್ಲಿ ಈ ವ್ಯಕ್ತಿಗೆ ಬಡವರಿಗಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ, ಅವರ ಪ್ರಣಾಳಿಕೆಯನ್ನು ನಂಬುವುದು ಸರಿಯಲ್ಲ ಎಂದು ಖೇರಾ ಹೇಳಿದ್ದಾರೆ.

ಬಿಜೆಪಿಯ ಪ್ರಣಾಳಿಕೆಯು ನಕಲಿ ಭರವಸೆಗಳ ದಾಖಲೆ ಮತ್ತು ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ  ಗಮನಹರಿಸಿಲ್ಲ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕ ಅತಿಶಿ ಹೇಳಿದ್ದಾರೆ. ನಿರುದ್ಯೋಗದಿಂದ ಜನರು ಕಂಗಾಲಾಗಿದ್ದಾರೆ. (ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆ 300 ರೂ.ನಿಂದ 1,200 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 55 ರಿಂದ 90 ರೂ.ಗೆ ಏರಿಕೆಯಾಗಿದೆ. ಪ್ರತಿ ಕುಟುಂಬವು ಖರ್ಚು ವೆಚ್ಚಗಳಿಗೆ ತೊಂದರೆ ಎದುರಿಸುತ್ತಿದೆ. ಈ ನಕಲಿ ಭರವಸೆಗಳನ್ನು ಇಂದು ಬಿಜೆಪಿ ಬಿಡುಗಡೆ ಮಾಡಿರುವುದನ್ನು ಈಗ ಯಾರೂ ನಂಬುವುದಿಲ್ಲ ಎಂದು  ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, ಬಿಜೆಪಿಯ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹಣದುಬ್ಬರದ ಬಗ್ಗೆ ಗಮನ ಹರಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್‌ಗಳ 2ನೇ ಅತಿ ದೊಡ್ಡ ಖರೀದಿದಾರ ಮೇಘಾ ಎಂಜಿನಿಯರಿಂಗ್ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...