Homeಮುಖಪುಟಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

"ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ"

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳನ್ನು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಈ ಮೂರು ಮಸೂದೆಗಳಾಗಿವೆ.

ಈ ಮೂರು ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಪ್ರಸ್ತಾವನೆ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025ರ ಉದ್ದೇಶ ಮತ್ತು ಕಾರಣಗಳ ಹೇಳಿಕೆಯ ಪ್ರಕಾರ, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯ್ದೆ, (1963ರ ಸೆಕ್ಷನ್ 20) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು 1963ರ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಕಾಯ್ದೆಯ ಸೆಕ್ಷನ್‌ 45ಕ್ಕೆ ತಿದ್ದುಪಡಿ ತರುವ ಅವಶ್ಯಕತೆಯಿದೆ.

ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರಿಸಲ್ಪಟ್ಟ ಸಚಿವರನ್ನು ತೆಗೆದುಹಾಕಲು ಸಂವಿಧಾನದ ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಪ್ರಧಾನಿ ಅಥವಾ ಕೇಂದ್ರ ಸಚಿವ ಸಂಪುಟದ ಸಚಿವರನ್ನು, ಮುಖ್ಯಮಂತ್ರಿ ಅಥವಾ ರಾಜ್ಯ ಸಚಿವ ಸಂಪುಟದ ಸಚಿವರನ್ನು ಹಾಗೂ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಸಂವಿಧಾನದ 75, 164 ಮತ್ತು 239ಎಎ ವಿಧಿಗಳನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ, 2025ರ ಉದ್ದೇಶಗಳು, ಗಂಭೀರ ಕ್ರಿಮಿನಲ್ ಆರೋಪಗಳ ಕಾರಣದಿಂದಾಗಿ ಬಂಧಿಸಲ್ಪಟ್ಟ ಮತ್ತು ಬಂಧನದಲ್ಲಿರುವ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 (2019 ರ 34) ಅಡಿಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೇಳುತ್ತದೆ.

ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಅಥವಾ ಸಚಿವರನ್ನು ಪದಚ್ಯುತಗೊಳಿಸಲು ಕಾನೂನು ಚೌಕಟ್ಟನ್ನು ಒದಗಿಸಲು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ ಕಾಯ್ದೆ, 2019 ರ ಸೆಕ್ಷನ್ 54 ಅನ್ನು ತಿದ್ದುಪಡಿ ಮಾಡುವ ಅವಶ್ಯಕತೆಯಿದೆ.

ಪ್ರತಿಪಕ್ಷ ನಾಯಕರಿಂದ ವಿರೋಧ

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿರುವ ಮಸೂದೆಗಳನ್ನು ಪ್ರತಿಪಕ್ಷಗಳ ನಾಯಕರು ವಿರೋಧಿಸಿದ್ದಾರೆ. ಇದು ಸಂವಿಧಾನ ಬದಲಾಯಿಸುವ ಯತ್ನ ಎಂದು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು, “ವಿರೋಧ ಪಕ್ಷದ ಭವಿಷ್ಯವಾಣಿಗಳು ನಿಜವಾಗಿದೆ. ಕೇವಲ 240 ಸಂಸದರನ್ನು ಹೊಂದಿರುವ ಬಿಜೆಪಿ ಸಂವಿಧಾನ ಬದಲಾಯಿಸುತ್ತಿದೆ. ಹೊಸ ಮಸೂದೆ ಒಕ್ಕೂಟ ವ್ಯವಸ್ಥೆ ಮತ್ತು ನ್ಯಾಯಾಂಗ ಎರಡನ್ನೂ ಮೀರಿದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ಚುನಾಯಿತ ವಿರೋಧ ಪಕ್ಷದ ಮುಖ್ಯಮಂತ್ರಿಯನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಬಹುದು ಮತ್ತು ನ್ಯಾಯಾಲಯದಿಂದ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ವಜಾಗೊಳಿಸಬಹುದು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಮತಗಳ್ಳತನ ಬಹಿರಂಗವಾದಾಗ ಮೋದಿ-ಶಾ ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. ಸಿಬಿಐ-ಇಡಿ ಬಿಜೆಪಿಗಾಗಿ ರಾಜ್ಯ ಸರ್ಕಾರಗಳನ್ನು ನೇರವಾಗಿ ಉರುಳಿಸಲು ಅನುವು ಮಾಡಿಕೊಡುವ ಹೊಸ ಮಸೂದೆಯನ್ನು ಇಂದು ಮಂಡಿಸಲಾಗುತ್ತಿದೆ. ನ್ಯಾಯಾಲಯವು ಶಿಕ್ಷೆ ವಿಧಿಸಿದಾಗ ಮಾತ್ರ ಒಬ್ಬರು ವ್ಯಕ್ತಿ ಅಪರಾಧಿಯಾಗುತ್ತಾರೆ. ಅಲ್ಲಿಯವರೆಗೆ ಅವರು ‘ಆರೋಪಿ’ ಆಗಿರುತ್ತಾರೆ. ಕೇವಲ ಆರೋಪದ ಮೇಲೆ ನೀವು ಮುಖ್ಯಮಂತ್ರಿ/ಸಚಿವರನ್ನು ಪದಚ್ಯುತಗೊಳಿಸಲು ಸಾಧ್ಯವಿಲ್ಲ. ಮೋದಿ-ಶಾ ಅವರ ಕೇಂದ್ರೀಯ ಸಂಸ್ಥೆಗಳ ಬಂಧನವು ಅಪರಾಧದ ಸಾಬೀತಲ್ಲ” ಎಂದು ಮತ್ತೋರ್ವ ಟಿಎಂಸಿ ಸಂಸದ ಸಾಕೇತ್ ಗೋಖಲೆ ಬರೆದುಕೊಂಡಿದ್ಧಾರೆ.

ಮುಂದುವರಿದು, “ಕುತೂಹಲಕಾರಿ ಸಂಗತಿಯೆಂದರೆ ಕಳೆದ 11 ವರ್ಷಗಳಲ್ಲಿ ಬಿಜೆಪಿಯ ಯಾವುದೇ ಕೇಂದ್ರ/ರಾಜ್ಯ ಸಚಿವರ ಬಂಧನವಾಗಿಲ್ಲ. ಎಲ್ಲಾ ಬಂಧನಗಳು ವಿರೋಧ ಪಕ್ಷದ ನಾಯಕರದ್ದು ಮಾತ್ರ” ಎಂದು ಹೇಳಿದ್ದಾರೆ.

“ಗೃಹ ಸಚಿವ ಅಮಿತ್ ಶಾ ಅವರ ಮಸೂದೆಗಳು ರಾಹುಲ್ ಗಾಂಧಿಯವರ ಮತ ಅಧಿಕಾರ ಯಾತ್ರೆಯಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಹತಾಶ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಮೊದಲು ಸಿಎಸ್‌ಡಿಎಸ್ – ಬಿಜೆಪಿ ಐಟಿ ಸೆಲ್ ನಾಟಕ ಮತ್ತು ಈಗ ಈ ಮಸೂದೆಗಳು. ಬಿಹಾರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿರುವುದು ಸ್ಪಷ್ಟ” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಬರೆದುಕೊಂಡಿದ್ದಾರೆ.

“ಇದೊಂದು ವಿಕೃತ ಚಕ್ರವ್ಯೂಹವೇ ಸರಿ!. ಇಲ್ಲಿ ಬಂಧನಕ್ಕೆ ಸಂಬಂಧಪಟ್ಟ ಯಾವುದೇ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿಲ್ಲ!. ವಿರೋಧ ಪಕ್ಷಗಳ ನಾಯಕರ ಬಂಧನಗಳು ಅತಿರೇಕವಾಗಿ ಹಾಗೂ ಅನಿಯಮಿತವಾಗಿ ನಡೆಯುತ್ತಿರುವಾಗ, ಹೊಸ ಪ್ರಸ್ತಾಪಿತ ಕಾನೂನು ಅನ್ವಯ, ಯಾರಾದರು ಮುಖ್ಯಮಂತ್ರಿ ಬಂಧಿತರಾದರೆ ಅವರನ್ನು ತಕ್ಷಣವೇ ಅಧಿಕಾರದಿಂದ ವಜಾಗೊಳಿಸಲಾಗುತ್ತದೆ.”

ವಿರೋಧ ಪಕ್ಷವನ್ನು ಅಸ್ಥಿರಗೊಳಿಸುವ ಅತ್ಯುತ್ತಮ ಮಾರ್ಗವೇಂದರೆ, ಪಕ್ಷಪಾತಿ ಕೇಂದ್ರ ಸಂಸ್ಥೆಗಳ ಸಹಾಯದಿಂದ ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಬಂಧಿಸುವುದು. ಚುನಾವಣೆಗಳಲ್ಲಿ ಸೋಲಿಸಲು ಸಾಧ್ಯವಾಗದ ಕಾರಣ, ಇಂಥ ಏಕಪಕ್ಷೀಯ ಬಂಧನಗಳ ಮೂಲಕ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ. ಇದವರೆಗೆ ಆಡಳಿತ ಪಕ್ಷದ ಯಾವುದೇ ಮುಖ್ಯಮಂತ್ರಿಯನ್ನು ಟಚ್ ಮಾಡಿದ್ದಿಲ್ಲ” ಎಂದು ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ಗಮನಿಸಿದರೆ, ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವಾಗ ಗದ್ದಲ ಉಂಟಾಗುವ ಸಾಧ್ಯತೆ ಇದೆ.

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...