Homeಕರೋನಾ ತಲ್ಲಣಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

ಕೇರಳದ ಎಲ್ಲ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ ಲಭ್ಯವಾಗಲಿದೆ. ಲಸಿಕೆಗಾಗಿ ಹಣ ಪಡೆಯುವುದಿಲ್ಲ. ಇದು ಸರ್ಕಾರದ ನಿಲುವು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಶನಿವಾರ ಘೋಷಿಸಿದ್ದರು.

- Advertisement -
- Advertisement -

ಕೇರಳದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ ಉಚಿತವಾಗಿ ಲಭ್ಯವಾಗಲಿದೆ ಎಂಬ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ಭಾನುವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿವೆ. ನಾಲ್ಕು ಉತ್ತರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡಿಸೆಂಬರ್ 14 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಚುನಾವಣಾ ಆಯೋಗದ ಮೆಟ್ಟಿಲೇರಿವೆ.

‘ಕೇರಳದ ಎಲ್ಲ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ ಲಭ್ಯವಾಗಲಿದೆ. ಲಸಿಕೆಗಾಗಿ ಹಣ ಪಡೆಯುವುದಿಲ್ಲ. ಇದು ಸರ್ಕಾರದ ನಿಲುವು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಶನಿವಾರ ಘೋಷಿಸಿದ್ದರು. ನಂತರದ ವಿರೋಧ ಪಕ್ಷಗಳ ಆರೋಪವನ್ನು ಆಡಳಿತಾರೂಡ ಸಿಪಿಐ (ಎಂ) ‘ಬಾಲಿಶ’ ಎಂದು ತಳ್ಳಿಹಾಕಿದೆ.

ಇದನ್ನೂ ಓದಿ: 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲು ಸಿದ್ದವಾಗಿರುವ ಭಾರತ

ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕನ್ವೀನರ್ (UDF) ಎಂ.ಎಂ.ಹಸನ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಮುಖ್ಯಮಂತ್ರಿಯವರ ಘೋಷಣೆ ಮಾದರಿ ಸಂಹಿತೆಯ ಉಲ್ಲಂಘನೆಯಾಗಿದೆ, ಡಿಸೆಂಬರ್ 14 ರಂದು ನಾಲ್ಕು ಉತ್ತರದ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ನಡೆಯಲಿದೆ. ಈ ಸಮಯದಲ್ಲಿ ಅಂತಹ ಘೋಷಣೆ ಮಾಡುವ ತುರ್ತು ಇರಲಿಲ್ಲ” ಎಂದು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ಜೋಸೆಫ್ ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಆನ್‌ಲೈನ್ ದೂರು ದಾಖಲಿಸಿದ್ದಾರೆ.

ಬಿಜೆಪಿ ರಾಜ್ಯ ಮುಖ್ಯಸ್ಥ ಕೆ.ಸುರೇಂದ್ರನ್ ಕೂಡ ದೂರು ದಾಖಲಿಸಿದ್ದು, ತಮ್ಮ ದೂರಿನಲ್ಲಿ ಮುಖ್ಯಮಂತ್ರಿ ಇಂತಹ ಪ್ರಕಟಣೆಗಳ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಮತ್ತು ಇದು ಮಾದರಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಬಳಕೆಗೆ ಅನುಮತಿ ಕೋರಿದ ’ಸೀರಮ್ ಇನ್ಸ್ಟಿಟ್ಯೂಟ್’

ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಎ.ವಿಜಯರಾಘವನ್ ತ್ರಿಶೂರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಆರೋಪಗಳನ್ನು ‘ಬಾಲಿಶ’ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಹೇಳಿಕೆ ರಾಜ್ಯದಲ್ಲಿ ನಡೆಯುತ್ತಿರುವ ಕೋವಿಡ್ -19 ಚಿಕಿತ್ಸಾ ವಿಧಾನದ ಮುಂದುವರೆದ ಭಾಗವಾಗಿದೆ ಎಂದು ಹೇಳಿದ್ದಾರೆ.

ಉಚಿತ ಲಸಿಕೆ ಘೋಷಣೆ ಮಾಡಿದ್ದ ಸಿಎಂ ಪಿಣರಾಯಿ ವಿಜಯನ್, ಕೇಂದ್ರದಿಂದ ರಾಜ್ಯಕ್ಕೆ ನೀಡಲಾಗುವ ಲಸಿಕೆಯ ಪ್ರಮಾಣವನ್ನು ಇನ್ನೂ ತಿಳಿದುಬಂದಿಲ್ಲ ಎಂದು ನಿನ್ನೆ ಹೇಳಿದ್ದರು.

ಭಾರತ್ ಬಯೋಟೆಕ್, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಫಿಜರ್ ಅಭಿವೃದ್ಧಿಪಡಿಸಿದ ಮೂರು ಕೋವಿಡ್ -19 ಲಸಿಕೆಗಳು ಭಾರತದ ಔಷಧ ನಿಯಂತ್ರಕದ ಸಕ್ರಿಯ ಪರಿಗಣನೆಯಲ್ಲಿದೆ. ಈಗಾಗಲೇ ಮಧ್ಯಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳು ತಮ್ಮ ಜನರಿಗೆ ಉಚಿತವಾಗಿ ಲಸಿಕೆ ನೀಡುವ ಘೋಷಣೆಯನ್ನು ಮಾಡಿವೆ.


ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...