Homeಮುಖಪುಟಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ (ಮಾ.9) ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು.

ಇದಕ್ಕೂ ಮೊದಲು, ಎರಡನೇ ಹಂತದ ಬಜೆಟ್ ಅಧಿವೇಶನದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಸದನದ ನಾಯಕರು ಸಂಸತ್ ಭವನದ ಸಂಕೀರ್ಣದಲ್ಲಿರುವ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ಸೇರಿದ್ದರು.

ಮಲ್ಲಿಕಾರ್ಜು ಖರ್ಗೆ ಮತ್ತು ರಾಹುಲ್ ಗಾಂಧಿ ಮಾತ್ರವಲ್ಲದೆ, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಡಿಎಂಕೆಯ ದಯಾನಿಧಿ ಮಾರನ್, ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ಮತ್ತು ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

“ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಳ್ಳುತ್ತಿದ್ದಂತೆ ಇರಾನ್ ಜೊತೆಗಿನ ಅಮೆರಿಕ-ಇಸ್ರೇಲ್ ಯುದ್ಧವು ನಮ್ಮ ಹಿತ್ತಲನ್ನು ತಲುಪಿದೆ. ಈ ಸಂದರ್ಭದಲ್ಲಿ, ಪ್ರಸ್ತುತ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸುವುದು ಕಡ್ಡಾಯವಾಗಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ವಿದೇಶಾಂಗ ವ್ಯವಹಾರಗಳ ಸಚಿವರ ಏಕಪಕ್ಷೀಯ ಹೇಳಿಕೆ ಇದಕ್ಕೆ ಪರಿಹಾರವಲ್ಲ. ನಾವು ಸಾಮೂಹಿಕವಾಗಿ ಇಡೀ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ. ಭಾರತ ಸರ್ಕಾರವು ನಮ್ಮ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ನಮ್ಮ ವ್ಯಾಪಾರಿಗಳಿಗೆ ನೆರವಾಗಲು, ನಮ್ಮ ರಫ್ತುಗಳ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಮತ್ತು ಬೆಲೆ ಏರಿಕೆಯ ಮೂಲಕ ನಮ್ಮ ಜನರ ಮೇಲೆ ಹೊರೆ ಹೇರುವುದನ್ನು ನಿಲ್ಲಿಸಲು ವಿವರವಾದ ತುರ್ತು ಯೋಜನೆಯೊಂದಿಗೆ ಮುಂದೆ ಬರಬೇಕು. ವಿರೋಧ ಪಕ್ಷವು ನಮ್ಮ ಜನರ ಬಗ್ಗೆ ಸಂವೇದನಾಶೀಲತೆಯನ್ನು ತೋರಬೇಕೆಂದು ಒತ್ತಾಯಿಸುತ್ತದೆ” ಎಂದು ಸಭೆಯ ನಂತರ ಖರ್ಗೆ ಹೇಳಿದ್ದಾರೆ.

ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸಿದರು, ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆಗೆ ಒತ್ತಾಯಿಸಿದರು ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರದ ‘ಮೌನ’ವನ್ನು ಖಂಡಿಸಿದರು.

“ಗಲ್ಫ್ ಉರಿಯುತ್ತಿದೆ, ತೈಲ ಆಘಾತ. ಭಾರತೀಯರು ಸಂಕಷ್ಟದಲ್ಲಿದ್ದಾರೆ. ಭಾರತಕ್ಕೆ ನಾಯಕತ್ವದ ಅಗತ್ಯವಿದೆ – ಮೌನದಲ್ಲ” ಎಂದು ಬರೆದಿದ್ದ ಬೃಹತ್ ಬ್ಯಾನರ್ ಹಿಡಿದ ಸಂಸದರು, ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...