Homeಮುಖಪುಟಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ.

ಉಭಯ ಸದನಗಳ ಮುಖ್ಯಸ್ಥರು ತಮ್ಮ ನಿರ್ಧಾರಕ್ಕೆ ನಿರ್ದಿಷ್ಟ ಕಾರಣಗಳನ್ನು ಒದಗಿಸಿಲ್ಲ ಎಂದು ವರದಿಗಳು ಹೇಳಿವೆ.

ಮಾರ್ಚ್ 12ರಂದು ಸಲ್ಲಿಸಲಾದ ನೋಟೀಸ್‌ಗಳಿಗೆ ರಾಜ್ಯಸಭೆಯ 63 ಸದಸ್ಯರು ಮತ್ತು ಲೋಕಸಭೆಯ 130 ಸಂಸದರು ಸಹಿ ಹಾಕಿದ್ದರು. ಈ ಮೂಲಕ ನೋಟಿಸ್ ಅಗತ್ಯಕ್ಕೆ ತಕ್ಕ ಸಹಿ ಪಡೆದಿತ್ತು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದಲ್ಲಿ ವಿಪಕ್ಷಗಳು, ಜ್ಞಾನೇಶ್ ಕುಮಾರ್ ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಪಕ್ಷಪಾತಿ ಮತ್ತು ತಾರತಮ್ಯದ ನಡವಳಿಕೆ ತೋರುತ್ತಿದ್ದಾರೆ ಎಂದು ಆರೋಪಿಸಿತ್ತು.

ಚುನಾವಣಾ ಅಕ್ರಮಗಳ ತನಿಖೆಗೆ ಜ್ಞಾನೇಶ್ ಕುಮಾರ್ ಅಡ್ಡಿಪಡಿಸಿದ್ದಾರೆ. ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಟಿಎಂಸಿ ಆರೋಪ ಮಾಡಿತ್ತು.

ವರದಿಗಳ ಪ್ರಕಾರ, ಸೋಮವಾರ ಹೊರಡಿಸಲಾದ ಸಂಸತ್ತಿನ ಬುಲೆಟಿನ್‌ಗಳ ಮೂಲಕ ನೋಟಿಸ್‌ಗಳನ್ನು ತಿರಸ್ಕರಿಸಿರುವ ನಿರ್ಧಾರಗಳನ್ನು ತಿಳಿಸಲಾಗಿದೆ. ಸೂಕ್ತ ಪರಿಗಣನೆ ಮತ್ತು ಎಲ್ಲಾ ಸಂಬಂಧಿತ ಆಯಾಮಗಳು ಹಾಗೂ ವಿಷಯಗಳ ಬಗ್ಗೆ ಎಚ್ಚರಿಕೆಯ ಮತ್ತು ವಸ್ತುನಿಷ್ಠ ಮೌಲ್ಯಮಾಪನ ಮಾಡಿದ ನಂತರ ನೋಟಿಸ್‌ಗಳನ್ನು ತಿರಸ್ಕರಿಸಲಾಗಿದೆ ಎಂದು ಬುಲೆಟಿನ್‌ಗಳಲ್ಲಿ ಹೇಳಲಾಗಿದೆ.

“1968ರ ನ್ಯಾಯಾಧೀಶರ ವಿಚಾರಣಾ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಉಲ್ಲೇಖಿಸಿ ಅಧ್ಯಕ್ಷೀಯ ಅಧಿಕಾರಿಗಳು (ಪೀಠಾಧ್ಯಕ್ಷರು) ಈ ಕ್ರಮ ಕೈಗೊಂಡಿದ್ದಾರೆ. ಲಭ್ಯವಿರುವ ದಾಖಲೆಗಳ ಮರುಪರಿಶೀಲನೆ ಮತ್ತು ಸಮಾಲೋಚನೆಯ ನಂತರ ಇಂತಹ ನಿರ್ಣಯಗಳನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರವನ್ನು ಈ ಕಾಯ್ದೆಯು ಅವರಿಗೆ ನೀಡುತ್ತದೆ” ಎಂದು ವರದಿಗಳು ಹೇಳಿವೆ.

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಗೊಳಿಸುವ ಪ್ರಕ್ರಿಯೆಯು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರಂತೆಯೇ ಇರುತ್ತದೆ.

ಲೋಕಸಭೆಯ 100 ಸದಸ್ಯರು ಮತ್ತು ರಾಜ್ಯಸಭೆಯ 50 ಸದಸ್ಯರು ಸಹಿ ಮಾಡಿದರೆ ಮಾತ್ರ ವಜಾ ನಿರ್ಣಯದ ಪ್ರಕ್ರಿಯೆ ಆರಂಭಿಸಲು ಸಾಧ್ಯವಾಗುತ್ತದೆ. ಒಂದು ವೇಳೆ ಈ ನಿರ್ಣಯವು ಎರಡೂ ಸದನಗಳಲ್ಲಿ ಅಂಗೀಕಾರಗೊಂಡರೆ, ಈ ಬಗ್ಗೆ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗುತ್ತದೆ. ಸಮಿತಿಯು ದುರ್ನಡತೆಯನ್ನು ಪತ್ತೆಹಚ್ಚಿದರೆ ಮಾತ್ರ ಸಂಸತ್ತಿನಲ್ಲಿ ಮತದಾನ ನಡೆಯುತ್ತದೆ. ಈ ನಿರ್ಣಯಕ್ಕೆ ಮೂರನೇ ಎರಡರಷ್ಟು (2/3) ಬಹುಮತ ದೊರೆತರೆ, ಚುನಾವಣಾ ಆಯುಕ್ತರನ್ನು ಪದಚ್ಯುತಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗುತ್ತದೆ.

ಸೋಮವಾರ, ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಸಾಮಾಜಿಕ ಮಾಧ್ಯಮದಲ್ಲಿ ನೋಟಿಸ್ ತಿರಸ್ಕಾರಕ್ಕೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಎಂದು ಹೇಳಿದ್ದು, ಕೇಂದ್ರ ಸರ್ಕಾರ ನಮ್ಮ ಮಹಾನ್ ಸಂಸತ್ತನ್ನು ಅಪಹಾಸ್ಯ ಮಾಡುತ್ತಿದೆ ಎಂದಿದ್ದಾರೆ.

“ವಿರೋಧ ಪಕ್ಷಗಳ ಸಂಸದರು ಸಲ್ಲಿಸಿದ್ದ ನೋಟಿಸ್ ಸ್ವೀಕರಿಸಿದ್ದ ರಾಜ್ಯಸಭೆಯ ಕೊನೆಯ ಅಧ್ಯಕ್ಷರಿಗೆ ಏನಾಯಿತು ಎಂಬುವು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

2025ರ ಜುಲೈನಲ್ಲಿ, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರನ್ನು ವಜಾಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ಸಲ್ಲಿಸಿದ್ದ ನೋಟಿಸ್ ಅನ್ನು ಅಂಗೀಕರಿಸಲಾಗಿದೆ ಎಂದು ವರದಿಯಾಗಿತ್ತು. ನಂತರ, ಆ ಸಮಯದಲ್ಲಿ ರಾಜ್ಯಸಭೆಯ ಅಧ್ಯಕ್ಷರಾಗಿದ್ದ ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಅನಾರೋಗ್ಯದ ಕಾರಣಗಳನ್ನು ನೀಡಿ ಹಠಾತ್ ರಾಜೀನಾಮೆ ನೀಡಿದ್ದರು.

ಧನ್ಕರ್ ಅವರ ಹಠಾತ್ ರಾಜೀನಾಮೆಯ ಬಗ್ಗೆ ಹಲವಾರು ವಿರೋಧ ಪಕ್ಷಗಳ ನಾಯಕರು ಪ್ರಶ್ನೆಗಳನ್ನು ಎತ್ತಿದ್ದರು. ಧನ್ಕರ್ ಅವರ ನಿರ್ಧಾರದ ಹಿಂದೆ ದೊಡ್ಡ ಕಾರಣಗಳಿವೆ ಎಂದು ಜೈರಾಮ್ ರಮೇಶ್ ಆ ಸಮಯದಲ್ಲಿ ಹೇಳಿದ್ದರು.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...