Homeಮುಖಪುಟವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

ವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನ, ಚುನಾವಣಾ ಅವ್ಯವಹಾರಗಳು ಮತ್ತು ಇವಿಎಂ ಟ್ಯಾಂಪರಿಂಗ್ ಆರೋಪದ ಮೇಲೆ ವಿರೋಧ ಪಕ್ಷದ ಸದಸ್ಯರಿಂದ ಪ್ರತಿಭಟನೆಗಳು ಕಂಡುಬಂದವು. ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಮರ್ಕಟ್ವಾಡಿ ಎಂಬ ಗ್ರಾಮವು ಚರ್ಚೆಯ ಕೇಂದ್ರಬಿಂದುವಾಯಿತು.

ಇವಿಎಂಗಳ ದುರುಪಯೋಗದ ಮೂಲಕ “ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ” ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಮರ್ಕಟವಾಡಿ ಗ್ರಾಮದ ನಿವಾಸಿಗಳು ಮತಯಂತ್ರಗಳನ್ನು ಬಳಸಿಕೊಂಡು ಅಣಕು ಮರು ಮತದಾನಕ್ಕೆ ಒತ್ತಾಯಿಸಿದರು. ನಿಷೇಧಾಜ್ಞೆ ಉಲ್ಲಂಘಿಸಿದ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಅಪನಂಬಿಕೆ ಹರಡಿದ್ದಕ್ಕಾಗಿ ಸೊಲ್ಲಾಪುರ ಪೊಲೀಸರು ಕನಿಷ್ಠ 200 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಡಿಸೆಂಬರ್ 3 ರಂದು ಯೋಜಿಸಲಾಗಿದ್ದ ಅಣಕು ಮತದಾನ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.

ವಿಧಾನಸಭೆಯಲ್ಲಿ ಪ್ರತಿಭಟನೆಯ ನಡುವೆಯೇ ಪ್ರತಿಪಕ್ಷಗಳು ವಿಶೇಷ ಅಧಿವೇಶನವನ್ನು ಬಹಿಷ್ಕರಿಸಿದವು.

“ಇವಿಎಂಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ; ಆದ್ದರಿಂದ, ಮರ್ಕಟವಾಡಿ ಗ್ರಾಮದ ಜನರು ಮತಯಂತ್ರಗಳನ್ನು ಬಳಸಿಕೊಂಡು ಅಣಕು ಮರು ಮತದಾನಕ್ಕೆ ಒತ್ತಾಯಿಸಿದ್ದಾರೆ” ಎಂದು ಎನ್‌ಸಿಪಿ (ಶರದ್ ಪವಾರ್ ಶಿಬಿರ) ಶಾಸಕ ಉತ್ತಮರಾವ್ ಜಂಕರ್ ಹೇಳಿದರು.

ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಶಾಸಕ ಆದಿತ್ಯ ಠಾಕ್ರೆ ಸರ್ಕಾರವನ್ನು ಟೀಕಿಸಿ, “ಜನರಿಂದ ಆದೇಶವನ್ನು ನೀಡಲಾಗಿಲ್ಲ. ಆದರೆ, ಇವಿಎಂಗಳು ಮತ್ತು ಭಾರತದ ಚುನಾವಣಾ ಆಯೋಗದಿಂದ ನೀಡಲಾಗಿದೆ” ಎಂದು ಹೇಳಿದ್ದಾರೆ.

ಎನ್‌ಸಿಪಿ ನಾಯಕ ಶರದ್ ಪವಾರ್ ಮರ್ಕಟ್‌ವಾಡಿಗೆ ಭೇಟಿ ನೀಡಿ ಚುನಾವಣಾ ಫಲಿತಾಂಶದ ಬಗ್ಗೆ ಕಾಳಜಿ ಹೊಂದಿರುವ ಗ್ರಾಮಸ್ಥರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಪಕ್ಷದ ರಾಜ್ಯ ಘಟಕದ ಪ್ರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗ್ರಾಮದಿಂದ ಮೆರವಣಿಗೆಯನ್ನು ಮುನ್ನಡೆಸುವ ಸಾಧ್ಯತೆಯಿದೆ.

ಇವಿಎಂಗಳ ದುರ್ಬಳಕೆ ಆರೋಪಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು ಸರಣಿ ಪ್ರತಿಭಟನೆಗಳನ್ನು ಯೋಜಿಸಿವೆ. ಡಿಸೆಂಬರ್ 6 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿಯ ಅಂಗವಾಗಿ ದಾದರ್‌ನ ಚೈತ್ಯಭೂಮಿಯಲ್ಲಿ ಮರ್ಕಟವಾಡಿಯಿಂದ ಸಾಂಕೇತಿಕವಾಗಿ ಉತ್ತಮರಾವ್ ಜಂಕರ್ ಮಣ್ಣನ್ನು ಅರ್ಪಿಸಿದರು. ಮಣ್ಣನ್ನು ದೆಹಲಿಯಲ್ಲಿರುವ ರಾಹುಲ್ ಗಾಂಧಿ ಬಳಿ ಕೊಂಡೊಯ್ಯಲು ನಿರ್ಧರಿಸಲಾಗಿದ್ದು, ಅಲ್ಲಿ ರಾಜ್‌ಘಾಟ್‌ನಲ್ಲಿ ಅರ್ಪಣೆ ಮಾಡಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಚುನಾವಣಾ ಅವ್ಯವಹಾರದ ಆರೋಪಗಳನ್ನು ತಳ್ಳಿಹಾಕಿದರು. ಅವುಗಳನ್ನು ‘ಅನ್ಯಾಯ’ ಎಂದು ಕರೆದರು. ಎಂವಿಎ 31 ಲೋಕಸಭಾ ಸ್ಥಾನಗಳನ್ನು ಗೆದ್ದಾಗ ಅವರು ಇವಿಎಂಗಳನ್ನು ಪ್ರಶ್ನಿಸಲಿಲ್ಲ. ಅವರು ಪ್ರತಿಭಟಿಸಲು ಸ್ವತಂತ್ರರು. ಆದರೆ, ಸದನದ ಕಲಾಪಗಳಲ್ಲಿ ಭಾಗವಹಿಸಲು ಪ್ರಮಾಣ ವಚನ ಸ್ವೀಕರಿಸಬೇಕು ಎಂದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮಹಾರಾಷ್ಟ್ರ ವಿಧಾನಸಭೆಯ ಅಧಿವೇಶನ ಪ್ರಾರಂಭವಾಯಿತು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಳಂಬ್ಕರ್ ಅವರು ಹೊಸದಾಗಿ ಆಯ್ಕೆಯಾದ 173 ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಬಹುತೇಕ ಪ್ರತಿಪಕ್ಷಗಳ 115 ಶಾಸಕರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ.

ಇದನ್ನೂ ಓದಿ; ಮಹಾರಾಷ್ಟ್ರ | ಬಾಬರಿ ಮಸೀದಿ ಧ್ವಂಸ ಸಮರ್ಥಿಸಿದ ಶಿವಸೇನೆ : ಎಂವಿಎ ಒಕ್ಕೂಟ ತೊರೆದ ಸಮಾಜವಾದಿ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...