Homeಮುಖಪುಟಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ.

- Advertisement -
- Advertisement -

ದೇಶದಲ್ಲಿ ರೈತ ಹೋರಾಟ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ರೈತರು 20 ದಿನಗಳಿಂದ ಹೋರಾಟ ನೆಸುತ್ತಿದ್ದು, ನಿನ್ನೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಇಂದು ತಮ್ಮ ವಿವಾದಾತ್ಮಕ ಕಾನೂನುಗಳನ್ನು ಸಮರ್ಥಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಈಗ ಆಗಿರುವ ಕೃಷಿ ಸುಧಾರಣೆಗಳು ಅನೇಕ ವರ್ಷಗಳಿಂದ ರೈತ ಸಂಘಗಳು ಮತ್ತು ಪ್ರತಿಪಕ್ಷಗಳು ಕೇಳುತ್ತಿರುವ ಸುಧಾರಣೆಗಳೇ ಆಗಿವೆ. ಭಾರತ ಸರ್ಕಾರ ಯಾವಾಗಲೂ ರೈತ ಕಲ್ಯಾಣಕ್ಕೆ ಬದ್ಧವಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ನಾವು ರೈತರಿಗೆ ಭರವಸೆ ನೀಡುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

“ಇಂದು ಪ್ರತಿಪಕ್ಷಗಳಲ್ಲಿ ಕುಳಿತು ರೈತರನ್ನು ದಾರಿ ತಪ್ಪಿಸುತ್ತಿರುವವರು ತಮ್ಮ ಸರ್ಕಾರದ ಅವಧಿಯಲ್ಲಿ ಈ ಕೃಷಿ ಸುಧಾರಣೆಗಳ ಪರವಾಗಿದ್ದರು. ಅವರು ತಮ್ಮ ಸರ್ಕಾರದ ಅವಧಿಯಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಇಂದು ರಾಷ್ಟ್ರವು ಐತಿಹಾಸಿಕ ಹೆಜ್ಜೆ ಇಟ್ಟಾಗ ಇವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ” ಎಂದು ಪ್ರಧಾನಿ ಕಛ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದಾರೆ.

ದೆಹಲಿಯಲ್ಲಿರುವ ರೈತರನ್ನು ದಿಕ್ಕತಪ್ಪಿಸುವ ಪಿತೂರಿ ನಡೆಯುತ್ತಿದೆ. ಈ ಕೃಷಿ ಕಾಯ್ದೆಗಳಿಂದ ರೈತರ ಭೂಮಿಯನ್ನು ಇತರರು ಕಬಳಿಸುತ್ತಾರೆ ಎಂದು ರೈತರು ಹೆದರಿದ್ದಾರೆ. ಡೈರಿ ಕಂಪನಿಗಳು ನಿಮ್ಮಿಂದ ಹಾಲನ್ನು ಕೊಂಡುಕೊಳ್ಳುತ್ತವೆಯೊ? ಅಥವಾ ನಿಮ್ಮ ಹಸುಗಳನ್ನು ಕಿತ್ತುಕೊಳ್ಳುತ್ತಿವೆಯೋ ನೀವು ಹೇಳಿ? ಎಂದು ಮೋದಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ. ಮೊದಲ ದಿನದಿಂದಲೂ ರೈತರ ಹಿತರಕ್ಷಣೆಯೇ ನಮ್ಮ ಆದ್ಯತೆಯೆಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಕೇಂದ್ರ ಸರ್ಕಾರದ ಬಿಜೆಪಿ ನಾಯಕರು ತಾವು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳಲು ಪದೇ ಪದೇ ಪ್ರತಿಪಕ್ಷಗಳತ್ತ ಬೆರಳು ತೋರಿಸುತ್ತಲೇ ಇದೆ. ಮೋದಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿ ಕೂಡ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಎಂದು ನುಣುಚಿಕೊಂಡಿತ್ತು.

ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುವ ಬಿಜೆಪಿ, ಇಕ್ಕಟ್ಟಿನ ಸಂದರ್ಭದಲ್ಲೆಲ್ಲಾ ‘ಇದು ಕಾಂಗ್ರೆಸ್‌ನ ಯೋಜನೆ’ ಎಂದು ನುಣುಚಿಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

ಈ ಹಿಂದೆಯೂ ರೈತರ ಹೋರಾಟವನ್ನು ಖಂಡಿಸಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದವು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಹೇಳಿದ್ದರು.

ತಮ್ಮ ಆಡಳಿತದಲ್ಲಿ ಏನೇ ಒಳ್ಳೆಯದಾದರೂ ಅವುಗಳ ಕ್ರೆಡಿಟ್ ಬಿಜೆಪಿಗೇ ಸೇರುತ್ತದೆ. ಆದರೆ ಏನಾದರೂ ಕೆಡುಕಾದರೆ ಅದಕ್ಕೆ ನೆಹರೂ, ಕಾಂಗ್ರೆಸ್ ಕಾರಣ ಎಂದು ಹೇಳಿ ತಪ್ಪಿಸಿಕೊಳ್ಳುತ್ತದೆ. ಇದು ಬಿಜೆಪಿಯ ಅನೈತಿಕ ರಾಜಕಾರಣವನ್ನು ತೋರಿಸುತ್ತದೆ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿತ್ತು. ಆದರೆ ರೈತರು ಇದಾವುದಕ್ಕೂ ಹೆದರದೇ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಿತ್ತು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತೆ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ.

ಆದರೆ ಕೇಂದ್ರ ಸರ್ಕಾರದ ಈ ಗೊಡ್ಡು ಸಮರ್ಥನೆಗಳು ನಡೆಯುವುದಿಲ್ಲ ಎಂಬಂತೆ ರೈತರು ಪಟ್ಟುಬಿಡದೇ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...