Homeಮುಖಪುಟಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

- Advertisement -
- Advertisement -

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ ಸಂಸದರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರಿಗೆ ಜಂಟಿ ಪತ್ರ ಬರೆದಿದ್ದಾರೆ. ಪ್ರಸ್ತುತ ಮೋದಿ ಸರ್ಕಾರದ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವವು “ಅಪಾಯದಲ್ಲಿದೆ” ಎಂದು ಆತಂಕ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು, ಚುನಾವಣಾ ಆಯೋಗದ ನಿಷ್ಪಕ್ಷಪಾತ ಕಾರ್ಯನಿರ್ವಹಣೆಯನ್ನು ಖಾತ್ರಿಪಡಿಸಲು ಸುಪ್ರೀಂ ಕೋರ್ಟ್ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿವೆ. ಜೂನ್ 28 ರಂದು ಬರೆಯಲಾಗಿದ್ದ ಈ ಸುದೀರ್ಘ ಪತ್ರವನ್ನು ಶುಕ್ರವಾರ ಸಾರ್ವಜನಿಕಗೊಳಿಸಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರು ಸಹಿ ಮಾಡಿರುವ ಈ ಪತ್ರದಲ್ಲಿ, “ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಇಂದು ತೀವ್ರ ನಿರಾಸೆ ಮತ್ತು ಅಪಾಯದ ಸುಳಿಗೆ ಸಿಲುಕಿದೆ. ಈ ಗಂಭೀರ ಪರಿಸ್ಥಿತಿಯ ಹಿನ್ನೆಲೆಯಲ್ಲಿಯೇ ನಾವು ಮುಖ್ಯ ನ್ಯಾಯಮೂರ್ತಿಗಳಿಗೆ ನೇರವಾಗಿ ಪತ್ರ ಬರೆಯುವ ಇಂತಹ ಅಸಾಮಾನ್ಯ ಮಾರ್ಗವನ್ನು ಆರಿಸಿಕೊಳ್ಳಬೇಕಾಯಿತು,” ಎಂದು ನಾಯಕರು ವಿಷಾದಿಸಿದ್ದಾರೆ. ಒಟ್ಟಾರೆ ಚುನಾವಣಾ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಕುಶಲತೆಯಿಂದ ನಿಯಂತ್ರಿಸಲಾಗುತ್ತಿದ್ದು, ಹಲವಾರು ಸಂದರ್ಭಗಳಲ್ಲಿ ಹೊರಬೀಳುವ ಫಲಿತಾಂಶಗಳು ಜನರ ನೈಜ ಇಚ್ಛೆಯನ್ನು ಪ್ರತಿಬಿಂಬಿಸುತ್ತಿಲ್ಲ ಎಂದು ವಿಪಕ್ಷಗಳು ಗಂಭೀರವಾಗಿ ಆರೋಪಿಸಿವೆ.

ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಆಡಳಿತ ಪಕ್ಷದ ನಾಯಕರು ಮಾಡುತ್ತಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಚುನಾವಣಾ ಆಯೋಗವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪತ್ರದಲ್ಲಿ ದೂರಲಾಗಿದೆ. ಈ ಮೂಲಕ ಆಯೋಗವು ತನ್ನ ಸಾಂವಿಧಾನಿಕ ನಡವಳಿಕೆಗೆ ತದ್ವಿರುದ್ಧವಾಗಿ “ತಪ್ಪಾದ ಪಕ್ಷಪಾತದ ಧೋರಣೆ”ಯನ್ನು ಪ್ರದರ್ಶಿಸುತ್ತಿದೆ ಮತ್ತು “ಆಡಳಿತಾರೂಢ ಬಿಜೆಪಿಗೆ ಬಹಿರಂಗ ಹಾಗೂ ನಾಚಿಕೆಯಿಲ್ಲದ ಬೆಂಬಲ” ನೀಡುತ್ತಿದೆ ಎಂದು ನಾಯಕರು ಪತ್ರದಲ್ಲಿ ನೇರವಾಗಿ ಬರೆದಿದ್ದಾರೆ.

ಆಯೋಗದ ಸ್ವಾಯತ್ತತೆಯನ್ನು ಪ್ರಶ್ನಿಸಿರುವ ಸಹಿದಾರರು, 2014 ರಿಂದೀಚೆಗೆ ಚುನಾವಣಾ ಆಯೋಗಕ್ಕೆ ನಡೆದಿರುವ ಪ್ರತಿಯೊಂದು ನೇಮಕಾತಿಯೂ ಸರ್ಕಾರದೊಂದಿಗೆ “ನಿಕಟ ಸಂಬಂಧ ಹೊಂದಿರುವ” ವ್ಯಕ್ತಿಗಳದ್ದೇ ಆಗಿದೆ ಎಂದು ಬೆಟ್ಟು ಮಾಡಿದ್ದಾರೆ. ಈ ಹಿಂದೆ ‘ಅನುಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಐತಿಹಾಸಿಕ ತೀರ್ಪನ್ನು ಇಲ್ಲಿ ಸ್ಮರಿಸಲಾಗಿದೆ. ಆದರೆ, ಸಂಸತ್ತು ತರುವಾಯ ಕಾನೂನೊಂದನ್ನು ತರುವ ಮೂಲಕ, ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಲ್ಲಿದ್ದ ‘ಭಾರತದ ಮುಖ್ಯ ನ್ಯಾಯಮೂರ್ತಿಗಳ’ ಸ್ಥಾನವನ್ನು ಕೇಂದ್ರ ಸಚಿವರೊಬ್ಬರಿಂದ ಬದಲಾಯಿಸಿತು. ನೇಮಕಾತಿ ಪ್ರಕ್ರಿಯೆಯನ್ನೇ ಬುಡಮೇಲು ಮಾಡಿರುವ ಈ ನೂತನ ಕಾನೂನನ್ನು ಸದ್ಯ ಸುಪ್ರೀಂ ಕೋರ್ಟ್‌ನಲ್ಲಿ ಸವಾಲು ಮಾಡಲಾಗಿದೆ ಎಂದು ವಿಪಕ್ಷಗಳು ನೆನಪಿಸಿವೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳೇ ಪ್ರಜಾಪ್ರಭುತ್ವದ ಅಡಿಪಾಯ ಎಂದಿರುವ ವಿರೋಧ ಪಕ್ಷಗಳು, “ಚುನಾವಣಾ ಪ್ರಕ್ರಿಯೆಯ ಸಮಗ್ರತೆ, ಹೊಣೆಗಾರಿಕೆ ಮತ್ತು ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನಃಸ್ಥಾಪಿಸಲು ಅಗತ್ಯವಿರುವ ದೃಢ ಹಾಗೂ ಕಠಿಣ ಕ್ರಮಗಳನ್ನು ನ್ಯಾಯಾಲಯವು ತುರ್ತಾಗಿ ತೆಗೆದುಕೊಳ್ಳಬೇಕು,” ಎಂದು ವಿನಂತಿಸಿವೆ. ದೇಶದ ಇತರ ಪ್ರಜಾಸತ್ತಾತ್ಮಕ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ವಿಫಲವಾಗಿರುವ ಕಾರಣಕ್ಕೇ ತಾವು ನ್ಯಾಯಾಂಗದ ಮೊರೆ ಹೋಗುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಸ್ವತಂತ್ರವಾಗಿರಬೇಕಾದ ಸಾಂಸ್ಥಿಕ ವ್ಯವಸ್ಥೆಗಳೇ ಇಂದು “ದಬ್ಬಾಳಿಕೆಯ ಸಾಧನಗಳಾಗಿ ಮಾರ್ಪಟ್ಟಿವೆ” ಮತ್ತು ಕೇವಲ “ಸರ್ಕಾರದ ಅಜೆಂಡಾಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿವೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾಧ್ಯಮಗಳ ಪ್ರಸ್ತುತ ಸ್ಥಿತಿಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿರುವ ನಾಯಕರು, “ದೇಶದ ಸಾಂಪ್ರದಾಯಿಕ ಮುಖ್ಯವಾಹಿನಿ ಮಾಧ್ಯಮಗಳು (Mainstream Media) ಬಹುತೇಕ ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಂಡಿವೆ. ಆದರೆ ಕೆಲವು ಸ್ವತಂತ್ರ ಮಾಧ್ಯಮ ವೇದಿಕೆಗಳು ಮಾತ್ರ ಇಂದಿಗೂ ಅಧಿಕಾರದಲ್ಲಿರುವವರ ಮುಂದೆ ಸತ್ಯವನ್ನು ಧೈರ್ಯವಾಗಿ ಬಿಚ್ಚಿಡುವ ಕೆಲಸ ಮಾಡುತ್ತಿವೆ,” ಎಂದು ಶ್ಲಾಘಿಸಿದ್ದಾರೆ.

ದೇಶದ ಜನತೆ ಇಂದಿಗೂ ಅತ್ಯಂತ ಭರವಸೆಯಿಂದ ನೋಡುವ ಏಕೈಕ ಮತ್ತು ಅಂತಿಮ ಆಶಾದೀಪ ನ್ಯಾಯಾಂಗ ಮಾತ್ರ ಎಂದು ನಾಯಕರು ಒತ್ತಿ ಹೇಳಿದ್ದಾರೆ. “ವ್ಯವಸ್ಥೆಯ ಉಳಿದೆಲ್ಲಾ ಅಂಗಗಳು ವಿಫಲವಾದಾಗಲೂ ಜನರು ನ್ಯಾಯಾಂಗದ ಮೇಲೆ ಅಪಾರ ನಂಬಿಕೆ ಇಡುತ್ತಾರೆ. ಒಂದು ವೇಳೆ ಇಂತಹ ಸಂದರ್ಭದಲ್ಲಿ ನ್ಯಾಯಾಂಗವೇ ದೇಶದ ಸ್ಥಿತಿಗೆ ಸ್ಪಂದಿಸಲು ವಿಫಲವಾದರೆ, ಅದು ಇಡೀ ಗಣರಾಜ್ಯದ ಸಂಪೂರ್ಣ ಕುಸಿತವನ್ನು ಸೂಚಿಸುತ್ತದೆ,” ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

“ನಾವು ಯಾವುದೇ ಕಾರಣಕ್ಕೂ ನ್ಯಾಯಾಂಗದ ನಡವಳಿಕೆಯನ್ನು ಪ್ರಶ್ನಿಸುತ್ತಿಲ್ಲ. ಬದಲಿಗೆ, ಪ್ರತಿಯೊಂದು ಸಾಂವಿಧಾನಿಕ ಕಾರ್ಯವಿಧಾನಗಳು ವಿಫಲವಾದಾಗ ನಾವು ನ್ಯಾಯಾಲಯಗಳ ಕಡೆಗೆ ಧಾವಿಸುತ್ತೇವೆ,” ಎಂದು ಸ್ಪಷ್ಟಪಡಿಸಿರುವ ವಿಪಕ್ಷಗಳು, ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸಾರ್ವಜನಿಕರ ನಂಬಿಕೆ ಸದಾ ಜೀವಂತವಾಗಿರುವಂತೆ ನೋಡಿಕೊಳ್ಳಲು ಸರ್ವೋಚ್ಚ ನ್ಯಾಯಾಲಯವು ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿವೆ. ವ್ಯವಸ್ಥೆಯಲ್ಲಿ “ಪಾರದರ್ಶಕತೆಯ ಹಿತದೃಷ್ಟಿಯಿಂದ” ಮತ್ತು ಭಾರತದ ಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವದ ಚೌಕಟ್ಟನ್ನು ರಕ್ಷಿಸುವಲ್ಲಿ ನ್ಯಾಯಾಲಯವು ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂಬ ದೃಢ ವಿಶ್ವಾಸದೊಂದಿಗೆ ಈ ಪತ್ರವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುತ್ತಿರುವುದಾಗಿ ಕಾಂಗ್ರೆಸ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...