Homeಮುಖಪುಟಉನ್ನಾವೋ ಸಂತ್ರಸ್ತೆಯ ಕಾರು ಅಪಘಾತ: ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆ

ಉನ್ನಾವೋ ಸಂತ್ರಸ್ತೆಯ ಕಾರು ಅಪಘಾತ: ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆ

- Advertisement -
- Advertisement -

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತದ ಪ್ರಕರಣವನ್ನು ವಿರೋಧಿಸಿ, ಕುಟುಂಬಕ್ಕೆ ಸೂಕ್ತ ಭದ್ರತೆ ನೀಡುವಂತೆ ಆಗ್ರಹಿಸಿ ಇಂದು ಲೋಕಸಭೆಯಲ್ಲಿ ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಬಿಎಸ್ಪಿ ಸೇರಿದಂತೆ ಇತರ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದರು.

ಇಂದು ಮುಂಜಾನೆ ಲೋಕಸಭೆ ಆರಂಭವಾದೊಡನೆ ಸದನದಲ್ಲಿ ಪ್ರತಿಭಟನೆ ಆರಂಭಿಸಿದ ವಿರೋಧ ಪಕ್ಷಗಳು ನಮಗೆ ನ್ಯಾಯ ಬೇಕು ಎಂಬ ಘೋಷಣೆಗಳನ್ನು ಕೂಗಿದರು. ಸುಮಾರು 40 ನಿಮಿಷಗಳ ಕಾಲ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ನಂತರ ಸದನದಿಂದ ಹೊರನಡೆದಿದ್ದಾರೆ.

ಲೋಕಸಭೆಯಲ್ಲಿ ಮಾತಾಡಿದ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಇದೊಂದು ನಾಚಿಕೆಗೇಡಿನ ಸಂಗತಿಯಾಗಿದ್ದು ಈ ಕೂಡಲೇ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕೇಂದು ಆಗ್ರಹಿಸಿದ್ದಾರೆ. ಜೊತೆಗೆ ಇದರಲ್ಲ ನೈಜ ಕಾಳಜಿ ಬಿಟ್ಟರೆ ಬೇರೆ ಯಾವುದೇ ರಾಜಕೀಯವಿಲ್ಲವೆಂದೂ ಸಹ ಸ್ಪಷ್ಟಪಡಿಸಿದ್ದರು.

ಆದರೆ ಇದಕ್ಕುತ್ತರಿಸಿ ಮಾತನಾಡಿದ ಬಿಜೆಪಿಯ ಸಂಸಧೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ವಿಷಯವನ್ನು ರಾಜಕೀಯಗೊಳಿಸಬಾರದು, ಅಲ್ಲಿಯ ರಾಜ್ಯ ಸರ್ಕಾರ ಆ ಕುಟುಂಬಕ್ಕೆ ಬೇಕಾದ ಎಲ್ಲಾ ರೀತಿಯ ರಕ್ಷಣೆಯನ್ನು ನೀಡಲಾಗಿದೆ ಎಂದಿದ್ದಾರೆ. ಮುಂದುವರಿದು ಅಪಘಾತದಲ್ಲಿ ಭಾಗಿಯಾದ ಲಾರಿಯು ಸಮಾಜವಾದಿ ಪಕ್ಷದ ಕಾರ್ಯಕರ್ತನದ್ದಾಗಿದೆ ಎಂದು ಆರೋಪಿಸಿದ್ದಾರೆ.

ವಿರೋಧ ಪಕ್ಷಗಳು ಮಾತಾಡುವ ಸಂದರ್ಭದಲ್ಲಿ ಸ್ಪೀಕರ್ ಓಂ ಬಿರ್ಲಾರವರು ಇದು ರಾಜ್ಯಗಳಿಗೆ ಸಂಬಂಧಿತ ವಿಷಯ, ಹಾಗಾಗಿ ಲೋಕಸಭೆಯಲ್ಲಿ ಚರ್ಚಿಸಬೇಡಿ ಎಂದಿದ್ದಾರೆ. ಆದರೆ ಇದಕ್ಕೆ ಕಿವಿಗೊಡದ ವಿರೋಧ ಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿವೆ.

ಬಿಜೆಪಿಯ ಸಂಸದೆ ಮೀನಾಕ್ಷಿ ಲೇಖಿ ಈಗಾಗಲೇ ಸಿಬಿಐ ವಿಚಾರಣೆ ನಡೆಯುತ್ತಿದೆ. ಹಾಗಾಗಿ ಈ ವಿಷಯವನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದಾರೆ. ಜೊತೆಗೆ ಕಾಂಗ್ರೆಸ್ ನ ಚೌಧರಿಯವರು ಇದನ್ನು ರಾಜಕೀಯಗೊಳಿಸುತ್ತಿದ್ದು ಬಿಜೆಪಿ ಪಕ್ಷದ ಮೇಲೆ ಆರೋಪ ಹೊರಿಸುವುದು ತಪ್ಪು ಎಂದಿದ್ದಾರೆ.

ಇನ್ನು ಉನ್ನಾವೋ ಸಂತ್ರಸ್ತ ಕುಟುಂಬದವರು “ಅಪಘಾತದ ಹಿಂದೆ ಬಿಜೆಪಿ ಪಕ್ಷದ ಪಿತೂರಿಯಿದೆ ಎಂದು ದೂರಿದ್ದಾರೆ”. ಅಲ್ಲದೇ ಬಿಜೆಪಿಯ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ರವರು ಜೈಲಿನಲ್ಲಿದ್ದಾಗಲೂ ಕೂಡ ಕರೆ ಮಾಡಿ ನಮಗೆ ಬೆದರಿಕೆ ಹಾಕಿದ್ದರು ಎಂದಿದ್ದಾರೆ.

ಇದರ ಜೊತೆಗೇನೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸರ್ಕಾರ ವತಿಯಿಂದ ನೇಮಿಸಿದ್ದ ರಕ್ಷಣಾ ಪೊಲೀಸರು ಏಕೆ ಹಾಜರಿರಲಿಲ್ಲ ಎಂಬ ಪ್ರಶ್ನೆಯೂ ಸಹ ಎದ್ದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...