Homeಮುಖಪುಟಸಂಸತ್ತಿನಲ್ಲಿ ನೀಟ್ ಅಕ್ರಮಗಳ ಕುರಿತು ಚರ್ಚೆಗೆ ಆಗ್ರಹಿಸಿದ ಪ್ರತಿಪಕ್ಷಗಳು

ಸಂಸತ್ತಿನಲ್ಲಿ ನೀಟ್ ಅಕ್ರಮಗಳ ಕುರಿತು ಚರ್ಚೆಗೆ ಆಗ್ರಹಿಸಿದ ಪ್ರತಿಪಕ್ಷಗಳು

- Advertisement -
- Advertisement -

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳ ಕುರಿತು ಲೋಕ ಸಭೆಯಲ್ಲಿ ಚರ್ಚಿಸಲು ಪ್ರತಿಪಕ್ಷಗಳು ಇಂದು (ಜೂನ್ 28) ಒತ್ತಾಯಿಸಿವೆ. ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಸರ್ಕಾರ ಪರೀಕ್ಷಾ ವಿವಾದಗಳ ಕುರಿತ ಯಾವುದೇ ಪ್ರಶ್ನೆಗೆ ಉತ್ತರಿಸಲು ಸಿದ್ಧ ಎಂದಿದೆ.

ಇಂದು ಬೆಳಿಗ್ಗೆ ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಲೋಕಸಭೆಯಲ್ಲಿ ನಿರ್ಣಯ ಮಂಡಿಸಿದ ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್, ನೀಟ್-ಯುಜಿ, ಯುಜಿಸಿ-ನೆಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಕರಣಗಳ ಕುರಿತು ಚರ್ಚಿಸಿದರು. ಪ್ರತಿ ಪಕ್ಷವು ಹನ್ನೆರಡು ಸ್ಪರ್ಧಾತ್ಮಕ ರಾಷ್ಟ್ರೀಯ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ವೈಫಲ್ಯಗಳನ್ನು”ಎತ್ತಿ ತೋರಿಸಲಿದೆ ಎಂದರು.

ಈ ವೇಳೆ ಪ್ರತಿಕ್ರಿಯಿಸಿದ ಸ್ಪೀಕರ್ ಓಂ ಬಿರ್ಲಾ ಅವರು, “ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ನನಗೆ 22 ನೋಟಿಸ್‌ಗಳು ಬಂದಿವೆ. ರಾಷ್ಟ್ರಪತಿ ಈಗಾಗಲೇ ತಮ್ಮ ಭಾಷಣದ ಪ್ಯಾರಾಗ್ರಾಫ್ 20ರಲ್ಲಿ ನೀಟ್ ಅಕ್ರಮಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದರು. ಕಲಾಪವನ್ನು 12 ಗಂಟೆಗೆ ಮುಂದೂಡಿದರು.

“ಎಲ್ಲಾ ಪಕ್ಷಗಳು ದೇಶದ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸುತ್ತವೆ ಮತ್ತು ಅವರ ಭವಿಷ್ಯದ ಬಗ್ಗೆ ಚಿಂತಿಸುತ್ತಿವೆ ಎಂಬ ಸಂದೇಶವನ್ನು ನಾಯಕರು ಸಂಸತ್ತಿನಿಂದ ಕಳುಹಿಸಬೇಕು” ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದರು.

“ನಾವು ಸಮಸ್ಯೆಯನ್ನು ಶಾಂತವಾಗಿ ಚರ್ಚಿಸಬೇಕು. ವಿರೋಧ ಮತ್ತು ಆಡಳಿತ ಮೈತ್ರಿ ಎರಡೂ ಸಂಸತ್ತಿನಿಂದ ವಿದ್ಯಾರ್ಥಿಗಳಿಗೆ ಉತ್ತಮ ಸಂದೇಶವನ್ನು ಕಳುಹಿಸಬೇಕು” ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು.

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಕೂಡ ರಾಜ್ಯಸಭೆಯಲ್ಲಿ ನೀಟ್ ವಿಷಯವನ್ನು ಚರ್ಚಿಸುವಂತೆ ಕೇಳಿಕೊಂಡರು.

ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್ ಅವರು ‘ವ್ಯವಹಾರದ ಅಮಾನತು’ ಸೂಚನೆಯನ್ನು ನೀಡಿದರು. ಇದು ಸದನವು ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಿ, ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಅಕ್ರಮಗಳ ಬಗ್ಗೆ ಮಾತ್ರ ಚರ್ಚಿಸಬೇಕು ಎಂದು ಹೇಳಿದರು.

ಇದನ್ನೂ ಓದಿ : ಹೊಸ ಕ್ರಿಮಿನಲ್ ಕಾನೂನುಗಳಿಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...