Homeಕರ್ನಾಟಕಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ - ರೈತರಿಂದ ಪ್ರತಿಭಟನೆ

ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

- Advertisement -
- Advertisement -

ಡಾ.ಕೆ.ಶಿವರಾಮ ಕಾರಂತ್ ಲೇಔಟ್‌‌‌‌‌ಗಾಗಿ ಭೂಮಿಯನ್ನು ಕಳೆದುಕೊಳ್ಳಲಿರುವ ರೈತರು ಮತ್ತು ಭೂಮಾಲೀಕರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಬುಧವಾರ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿದರು.

ಲೇಔಟ್‌ಗೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಮೂರು ಸದಸ್ಯರ ಸಮಿತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ರೈತರು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯು ಅರಮನೆ ಮೈದಾನದ 9ನೇ ಗೇಟ್ ಬಳಿಯ ಬಿಡಿಎ ಕೇಂದ್ರ ಕಚೇರಿ ಮುಂದೆ ಆಯೋಜನೆಗೊಂಡಿತ್ತಾದರೂ, ಅಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಾಗಿ ಪ್ರತಿಭಟನೆ ಮೌರ್ಯಸರ್ಕಲ್ ಬಳಿಗೆ ಸ್ಥಳಾಂತರಗೊಂಡಿದೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಬಿಡಿಎ ವಿರುದ್ದ ರೈತರ ಆಕ್ರೋಶ ಹೆಚ್ಚುತ್ತಿರುವುದನ್ನು ಮನಗಂಡಿದ್ದ ಬಿಡಿಎ ಅಧ್ಯಕ್ಷ, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರು ನಿನ್ನೆ ರಾತ್ರಿಯೇ ಲೇಔಟ್‌‌ ಇರುವ 16 ಹಳ್ಳಿಯ ರೈತರಿಗೆ ಪ್ರತಿಭಟನೆಗೆ ತೆರಳದಂತೆ ಪೊಲೀಸರ ಮುಖಾಂತರ ಕೇಳಿಕೊಂಡಿದ್ದರು. ಇಂದು ಮುಂಜಾನೆ ಕೂಡಾ ಪೊಲೀಸರು ಪ್ರತಿಭಟನೆಗೆ ತೆರಳದಂತೆ ರೈತರಿಗೆ ತಡೆ ಒಡ್ಡಿದ್ದರು ಎನ್ನಲಾಗಿದೆ. ಆದರೂ ಇದನ್ನು ಮೀರಿ ರೈತರು ಬೆಂಗಳೂರಿನ ಮೌರ್ಯ ಸರ್ಕಲ್‌ಗೆ ತಲುಪಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ಪ್ರಸನ್ನ ಲಕ್ಷ್ಮೀಪುರ, “ಪ್ರತಿಭಟನೆಗೆ ಹೊರಡುತ್ತಿದ್ದ ರೈತರನ್ನು ಅವರ ಹಳ್ಳಿಯಲ್ಲೆ ತಡೆದು ಲೇಔಟ್‌ಗೆ ಯಾರದ್ದೂ ವಿರೋಧವಿಲ್ಲ ಎಂದು ತೋರಿಸಿಕೊಳ್ಳುವ ಉಪಾಯವನ್ನು ಶಾಸಕ ವಿಶ್ವನಾಥ್‌ ಹೂಂದಿದ್ದರು. ಅದಕ್ಕಾಗಿ ಹಳ್ಳಿಗಳಲ್ಲೇ ರೈತರನ್ನು ಪೊಲೀಸರು ತಡೆದಿದ್ದರು, ಆದರೆ ಇಲ್ಲಿ ಯಾವ ರೈತರು ಲೇಔಟ್ ಪರವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

“ರೈತರು ತಮ್ಮ ಭೂಮಿಯನ್ನು ಲೇಔಟ್‌‌ಗೆ ನೀಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ. ನಮ್ಮ ಬಳಿಯಿಂದ ಭೂಮಿಯನ್ನು ಪಡೆದುಕೊಂಡು ಬೇರೆಯವರಿಗೆ ಮನೆ ಕಟ್ಟಲು ನೀಡುತ್ತಿದ್ದಾರೆ. ಹೀಗೆ ನೀಡಲು ಬಿಡಿಎ ಯಾಕೆ ಬೇಕು? ಜನರೆ ನೇರವಾಗಿ ತಮಗೆ ಬೇಕಾದವರಿಗೆ ಭೂಮಿ ನೀಡುವುದಿಲ್ಲವೆ?. ಬಿಡಿಎ ಪ್ರಸ್ತುತ ಅಲ್ಲಿರುವ ಮನೆಗಳನ್ನು ಒಡೆದು ಹಾಕಲು ಹೊರಟಿದೆ. ಅಲ್ಲಿರುವ ಮನೆಗಳನ್ನು ಒಡೆದು ಹಾಕಿ ಅಲ್ಲಿ ಬೇರೆ ಮನೆಗಳನ್ನು ಕಟ್ಟಿ ಬೇರೆ ಜನರಿಗೆ ಮನೆ ನೀಡುತ್ತೇವೆ ಅಂದರೆ ಅದು ಅನ್ಯಾಯವಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

“ಬಿಡಿಎ ಉದ್ದೇಶವೆ ಸೈಟುಗಳನ್ನು ಮಾರಿ ಮನೆ ಕಟ್ಟುವುದಾದರೆ, ಸೈಟುಗಳಲ್ಲಿ ಈಗಾಗಲೆ ಇರುವ ಮನೆಗಳನ್ನು ಒಡೆಯುವುದು ಯಾಕೆ? ಅದು ಅಲ್ಲದೆ ರೈತರೊಂದಿಗೆ ಬಲವಂತವಾಗಿ ಜಮೀನನ್ನು ಪಡೆಯುವುದು ಯಾತಕ್ಕಾಗಿ? ಇಲ್ಲಿನ ಯಾವುದೇ ರೈತರಿಗೆ ತಮ್ಮ ಭೂಮಿಯನ್ನು ಬಿಡಿಎಗೆ ನೀಡಲು ಮನಸ್ಸಿಲ್ಲ. ಈ ಹಿನ್ನಲೆಯಲ್ಲಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...