Homeಚಳವಳಿರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ಬಡಗಲಪುರ ನಾಗೇಂದ್ರ, ಚಾಮರಸ ಮಾಲೀಪಾಟೀಲ್, ಬಿ.ಆರ್ ಪಾಟೀಲ್, ಕುರುಬುರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ವಿ.ಗಾಯತ್ರಿ, ಮಾವಳ್ಳಿ ಶಂಕರ್, ಸೈಯ್ಯದ್, ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕೆ.ವಿ ಭಟ್, ನಂಜೇಗೌಡ, ನಾರಾಯಣಸ್ವಾಮಿ ನಿಯೋಗದಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ರಾಜ್ಯ ಸರ್ಕಾದ ವಿರುದ್ಧ ರೈತರು ಇಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಿದ್ದಾರೆ. ರಾಜಭವನ ಚಲೋ ಕರೆ ನೀಡಿದ್ದ ಸಾವಿರಾರು ಪ್ರತಿಭಟನಾಕಾರರನ್ನು ಪೊಲೀಸರು ಫ್ರೀಡಂ ಪಾರ್ಕ್ ಬಳಿ ತಡೆದಿದ್ದಾರೆ. ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, 20 ರೈತ ಮುಖಂಡರನ್ನು ರಾಜ್ಯಪಾಲರು ಮಾತುಕತೆಗೆ ಆಹ್ವಾನಿಸಿದ್ದಾರೆ.

ಇಂದು ಬೆಳಿಗ್ಗೆಯೇ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಜಮಾಯಿಸಿದ ಸಾವಿರಾರು ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲು ನಿಲ್ದಾಣದಿಂದ ಕೆ.ಆರ್ ಸರ್ಕಲ್ ಮತ್ತು ವಿಧಾನಸೌಧದ ಮುಂಭಾಗದಿಂದ ರಾಜಭವನ ತಲುಪಲು ಯೋಜಿಸಿದ್ದ ರೈತರನ್ನು ಸದ್ಯಕ್ಕೆ ಫ್ರೀಡಂ ಪಾರ್ಕ್‌ ಬಳಿ ಪೊಲೀಸರು ತಡೆದಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಫ್ರೀಡಂ ಪಾರ್ಕ್ ರಸ್ತೆಯಲ್ಲಿ ವಾಹನ ಸಂಚಾರ ಸ್ತಭ್ದಗೊಂಡಿದೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲೀಪಾಟೀಲ್, ಬಿ.ಆರ್ ಪಾಟೀಲ್, ಕುರುಬುರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ವಿ.ಗಾಯತ್ರಿ, ಮಾವಳ್ಳಿ ಶಂಕರ್, ಹಣ್ಣು ಮಾರಾಟಗಾರರ ಸಂಘದ ಸೈಯ್ಯದ್, ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕೆ.ವಿ ಭಟ್, ನಂಜೇಗೌಡ, ನಾರಾಯಣಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದಾರೆ.

ಫ್ರೀಡಂ ಪಾರ್ಕ್‌ ಬಳಿಯ ರಸ್ತೆಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಸಾವಿರಾರು ಜನ ರಸ್ತೆಯಲ್ಲಿಯೇ ಕುಳಿತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸದನ ಬಹಿಷ್ಕರಿಸಿ ಕಾಂಗ್ರೆಸ್ ಮುಖಂಡರೊಡನೆ ವಿಧಾನಸೌಧದಿಂದ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ನಡೆಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಇದನ್ನೂ ಓದಿ: ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...