Homeಚಳವಳಿಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕೇಂದ್ರದ ಕಾಯ್ದೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಭಗತ್ ಸಿಂಗ್ ಜನ್ಮದಿನದ ನೆನಪಿನಲ್ಲಿ ಅವರ ಹುಟ್ಟೂರು ಕಾತ್ಕರ್ ಕಲನ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. 

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ರೈತರ ಚಳವಳಿ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ. ಇಂದು ಬೆಳಿಗ್ಗೆಯೇ ಕೇಂದ್ರದೆಹಲಿಯ ಇಂಡಿಯಾ ಗೇಟ್ ಬಳಿ ಜಮಾಯಿಸಿದ ರೈತರು ಟ್ರಾಕ್ಟರ್‌ಗೆ ಬೆಂಕಿ ಹಾಕಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಳಿಗ್ಗೆ 7.15ರ ಸಮಯಕ್ಕೆ ಜಮಾಯಿಸಿದ 15-20 ರಷ್ಟಿದ್ದ ರೈತರ ಗುಂಪು ಹಳೆಯ ಟ್ರಾಕ್ಟರ್ ಒಂದಕ್ಕೆ ಬೆಂಕಿ ಹಚ್ಚಿದ್ದಾರೆ. ಇಂಡಿಯಾ ಗೇಟ್ ಎದುರು ಹುತಾತ್ಮ ಭಗತ್ ಸಿಂಗ್ ಫೋಟೊ ಹಿಡಿದು ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ನೇಣಿಗೇರಿಸಿದ್ದಾರೆ. ವಿಷಯ ಕಾಳ್ಗಿಚ್ಚಿನಂತೆ ಹಬ್ಬಿದ್ದು ಪೊಲೀಸರು 7.30ರ ಸಮಯಕ್ಕೆ ಎಲ್ಲಾ ಹೋರಾಟ ನಿರತ ರೈತರು ಅಲ್ಲಿಂದ ತೆರಳಿದರೆ, ಅಗ್ನಿಶಾಮಕ ದಳದ ಸಿಬ್ಬಂದಿ ನೀರು ಹಾರಿಸಿ ಟ್ರಾಕ್ಟರ್ ಅವಶೇ‍ಷಗಳನ್ನು ತೆರವುಗೊಳಿಸಿದ್ದಾರೆ.

ಇಂಡಿಯಾ ಗೇಟ್ ಎದುರು ನಡೆದಿರುವ ಈ ಐತಿಹಾಸಿಕ ಪ್ರತಿಭಟನೆಯನ್ನು ಪಂಜಾಬ್ ಯೂತ್ ಕಾಂಗ್ರೆಸ್‌ನ ಅಧಿಕೃತ ಫೇಸ್‌ಬುಕ್‌ ಪುಟದಿಂದ ಲೈವ್ ಸ್ಟ್ರೀಮ್ ಮಾಡಲಾಗಿದೆ. ಸೆಪ್ಟಂಬರ್ 20 ರಂದು ಹರಿಯಾಣದ ಅಂಬಾಲದಲ್ಲಿ ಸಹ ಟ್ರಾಕ್ಟರ್ ಸುಟ್ಟು ಪ್ರತಿಭಟನೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರು ಎನ್ನಲಾಗಿದೆ.

ರೈತರ ಮತ್ತು ವಿರೋಧ ಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಅಂಗೀಕರಿಸಿದ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರು ನಿನ್ನೆ ಸಹಿ ಮಾಡಿದ್ದಾರೆ. ಇದು ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಪಂಜಾಬ್ ಮತ್ತು ಹರಿಯಾಣದ ರೈತರನ್ನು ರೊಚ್ಚಿಗೆಬ್ಬಿಸಿದೆ. ಕೇಂದ್ರದ ಕಾಯ್ದೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಭಗತ್ ಸಿಂಗ್ ಜನ್ಮದಿನದ ನೆನಪಿನಲ್ಲಿ ಅವರ ಹುಟ್ಟೂರು ಕಾತ್ಕರ್ ಕಲನ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.

ಇಂದು ಕರ್ನಾಟಕದ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು ರಾಜ್ಯದೆಲ್ಲೆಡೆ ಬಂದ್ ಆರಂಭವಾಗಿದೆ. ಬೆಳಿಗ್ಗೆ 4 ಗಂಟೆಯಿಂದಲೇ ಕನ್ನಡಪರ ಸಂಘಟನೆಗಳು ಬಸ್‌ ತಡೆದು, ರೈಲ್ವೇ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ರೈತ-ದಲಿತ-ಕಾರ್ಮಿಕರ ಐಕ್ಯವೇದಿಕೆಯು ಬೆಂಗಳೂರಿನ ಟೌನ್‌ ಹಾಲ್ ಬಳಿ ಧರಣಿ ಆರಂಭಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರೈತರ ಬಂದ್‌ಗೆ ಸಂಪೂರ್ಣ ಬೆಂಬಲ ಘೋಷಿಸಿವೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...