Homeಚಳವಳಿನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾಳೆಯಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಪಂಚಾಯತ್: ಕೃಷಿ ಕಾಯ್ದೆ ಹಿಂಪಡೆಯಲು ಪಟ್ಟು

ನಾವು ಒಬ್ಬ ಸ್ಪೀಕರ್ ಮತ್ತು ಉಪ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತೇವೆ. ಆರಂಭದ ಎರಡು ದಿನ ಎಪಿಎಂಸಿ ಕಾಯ್ದೆಯ ಬಗ್ಗೆ ಚರ್ಚೆಗಳು ನಡೆಯಲಿವೆ.

- Advertisement -
- Advertisement -

ಮಾನ್ಸೂನ್ ಸಂಸತ್ ಅಧಿವೇಶನ ಆರಂಭವಾಗಿದ್ದು ಸದನದ ಒಳಗೆ ಪೆಗಾಸಸ್ ಕಣ್ಗಾವಲು ಮತ್ತು ಕೋವಿಡ್ ನಿರ್ವಹಣೆಯಲ್ಲಿನ ವೈಫಲ್ಯದ ಕುರಿತು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಸದನದ ಹೊರಗಿನಿಂದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದ್ದು ಜುಲೈ 22 ರಿಂದ ಜಂತರ್‌ಮಂತರ್‌ನಲ್ಲಿ ಕಿಸಾನ್ ಪಂಚಾಯತ್ ಹೋರಾಟ ನಡೆಸಲು ತೀರ್ಮಾನಿಸಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 8 ತಿಂಗಳಿನಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ, 200 ಮಂದಿ ರೈತರು ಜುಲೈ 22 ರಿಂದ ಜಂತರ್‌ ಮಂತರ್‌ನಲ್ಲಿ ಸದನ ಮುಗಿಯುವವರೆಗೂ ಪ್ರತಿದಿನ ರೈತ ಅಧಿವೇಶನ ನಡೆಸಲಿದ್ದಾರೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ‌ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನುಗಳ ಕುರಿತು ಚರ್ಚೆ ನಡೆಸಲು ಬಯಸಿದರೆ, ನಾವು ಮಾತುಕತೆಗೆ ಸಿದ್ಧರಿದ್ದೇವೆ. ಆದರೆ ಮಾತುಕತೆ ನಡೆಯದಿದ್ದರೆ, ರೈತರ ಪರವಾಗಿ ನಿರ್ಧಾರ ಬರದಿದ್ದರೆ, ಜುಲೈ 22 ರಿಂದ 200 ಮಂದಿ ರೈತರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಾರೆ” ಎಂದು ಈ ಮುಂಚೆ ರಾಕೇಶ್ ಟಿಕಾಯತ್ ಹೇಳಿದ್ದರು. ನಂತರ ರೈತರು ಮತ್ತು ಪೊಲೀಸರ ನಡುವೆ ಹಲವಾರು ಸಂದಾನ ಸಭೆಗಳು ನಡೆದು ಪ್ರತಿಭಟನೆ ಜಾಗ ಜಂತರ್‌ ಮಂತರ್‌ಗೆ ಬದಲಾಗಿದೆ.

ಕಿಸಾನ್ ಪಾರ್ಲಿಮೆಂಟ್ ಪ್ರತಿ ದಿನವೂ ನಡೆಯಲಿದೆ. ನಾವು ಒಬ್ಬ ಸ್ಪೀಕರ್ ಮತ್ತು ಉಪ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತೇವೆ. ಆರಂಭದ ಎರಡು ದಿನ ಎಪಿಎಂಸಿ ಕಾಯ್ದೆಯ ಬಗ್ಗೆ ಚರ್ಚೆಗಳು ನಡೆಯಲಿವೆ. ನಂತರ ಉಳಿದ ಕಾಯ್ದೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ರೈತರು ತಿಳಿಸಿದ್ದಾರೆ.

“ಕೃಷಿ ಕಾನೂನುಗಳನ್ನು ಹಿಂಪಡೆಯದ ಸರ್ಕಾರ, ರೈತ ಪ್ರತಿಭಟನೆಯನ್ನು ಕೊನೆಗೊಳಿಸಲು ಹೇಳುತ್ತಿದ್ದಾರೆ. ರೈತರು 8 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಸರ್ಕಾರದ ಆದೇಶಗಳನ್ನು ಪಾಲಿಸಲು ಅಲ್ಲ. ಸರ್ಕಾರ ಮಾತನಾಡಲು ಬಯಸಿದರೆ, ರೈತರ ಜೊತೆಗೆ ಮಾತನಾಡಬಹುದು, ಆದರೆ ಯಾವುದೇ ಷರತ್ತು ವಿಧಿಸಬಾರದು” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ.

ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ, ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದ್ದು, ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಯಿತು. ಸಾಮಾನ್ಯವಾಗಿ ಜುಲೈನಲ್ಲಿ ಪ್ರಾರಂಭವಾಗುವ ಮಾನ್ಸೂನ್ ಅಧಿವೇಶನವು ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸೆಪ್ಟೆಂಬರ್‌‌ನಲ್ಲಿ ಪ್ರಾರಂಭವಾಗಿತ್ತು.


ಇದನ್ನೂ ಓದಿ; ರೈತರ ಪರ ಮಾತನಾಡಿದ್ದಕ್ಕೆ ಮಾಜಿ ಸಚಿವನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...