Homeಮುಖಪುಟಪಟಾಕಿಗೆ ವಿರೋಧ | ವೃದ್ಧರೊಬ್ಬರನ್ನು ಹೊಡೆದು ಕೊಂದ ದುಷ್ಕರ್ಮಿಗಳು

ಪಟಾಕಿಗೆ ವಿರೋಧ | ವೃದ್ಧರೊಬ್ಬರನ್ನು ಹೊಡೆದು ಕೊಂದ ದುಷ್ಕರ್ಮಿಗಳು

- Advertisement -
- Advertisement -

ನೆರೆಹೊರೆಯಲ್ಲಿ ಪಟಾಕಿ ಸಿಡಿಸುವುದನ್ನು ವಿರೋಧಿಸಿದ ವೃದ್ಧರೊಬ್ಬನನ್ನು ಹೊಡೆದು ಕೊಂದಿರುವ ದಾರುಣ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿದ್ದ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫರಿದಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಪಟಾಕಿಗೆ ವಿರೋಧ

ಸಂತ್ರಸ್ತೆಯ ಪುತ್ರ ವಿನೋದ್ ನೀಡಿದ ದೂರಿನ ಪ್ರಕಾರ, ಆರೋಪಿಗಳಾದ ರಾಜು, ಧೀರಜ್ ಮತ್ತು ನಂದು ಎಂಬ ಮೂವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಈ ವೇಳೆ ಅವರ ಮಗ ವಿನೋದ್ ಮತ್ತು ಅವರ ಪತ್ನಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದರೂ, ಅವರ ಮೇಲೂ ಹಲ್ಲೆ ನಡೆಸಲಾಯಿತು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಗಳು ಗುರುವಾರ ಸಂಜೆ ಹರಿಯಾಣದ ಸೆಕ್ಟರ್ 18ರ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ತಮ್ಮ ನಿವಾಸದ ಮುಂದೆ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ಶಬ್ಧ ಮಾಲಿನ್ಯದ ಬಗ್ಗೆ ವೃದ್ಧ ವ್ಯಕ್ತಿ ವಿರೋಧಿಸಿದಾಗ, ತೀವ್ರ ವಾಗ್ವಾದ ನಡೆದಿತ್ತು.

ಪರಿಸ್ಥಿತಿ ತಾತ್ಕಾಲಿಕವಾಗಿ ಶಾಂತವಾಗಿದ್ದರೂ, ಮೂವರು ಆರೋಪಿಗಳು ಮತ್ತೆ 1 ಗಂಟೆಯ ಸುಮಾರಿಗೆ ಹಿಂತಿರುಗಿ ಗದ್ದಲದ ಚಟುವಟಿಕೆಯನ್ನು ಪುನರಾರಂಭಿಸಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಮತ್ತೆ ಆಕ್ಷೇಪಿಸಲು ವೃದ್ಧ ಹೊರಗೆ ಕಾಲಿಡುತ್ತಿದ್ದಂತೆಯೇ ಅವರ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಫರಿದಾಬಾದ್‌ನಲ್ಲಿ ಮತ್ತೊಂದು ಪ್ರತ್ಯೇಕ ಘಟನೆ ನಡೆದಿದ್ದು, ದೀಪಾವಳಿಯಂದು ಪಟಾಕಿ ಸಿಡಿಸುವಾಗ ಕುಟುಂಬದ ಮೇಲೆ ದೊಣ್ಣೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸುಭಾಷ್ ಕಾಲೋನಿಯಲ್ಲಿ ಗುರುವಾರ ಈ ಘಟನೆ ನಡೆದಿದೆ ಎಂದು ವರದಿ ಹೇಳಿದೆ. ಪಟಾಕಿಗೆ ವಿರೋಧ

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...