Homeಮುಖಪುಟಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

- Advertisement -
- Advertisement -

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು ಬುಧವಾರ (ಡಿ.17) ನಿರ್ಧರಿಸಿದ್ದಾರೆ.

ವರದಿಗಳ ಪ್ರಕಾರ, ವಿರೋಧ ಪಕ್ಷಗಳ ಸಂಸದರು ಮಸೂದೆಯ ಚರ್ಚೆಗೆ ಹಾಜರಾಗಲಿದ್ದಾರೆ. ಆದರೆ, ಅಂಗೀಕಾರದ ಸಮಯದಲ್ಲಿ ಸಭಾತ್ಯಾಗ ಮಾಡಲಿದ್ದಾರೆ. ಬುಧವಾರ ನಡೆದ ಇಂಡಿಯಾದ ಒಕ್ಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹೊರತುಪಡಿಸಿ, ಇಂಡಿಯಾದ ಮೈತ್ರಿಕೂಟದ ಎಲ್ಲಾ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಿಗಿಯಾಗಿ ನಿಯಂತ್ರಿಸಲ್ಪಡುವ ನಾಗರಿಕ ಪರಮಾಣು ವಲಯವನ್ನು ಖಾಸಗಿ ಭಾಗವಹಿಸುವಿಕೆಗೆ ಮುಕ್ತಗೊಳಿಸಲು ಅವಕಾಶ ನೀಡುವ ಸಸ್ಟೈನೇಬಲ್ ಹಾರ್ನೆಸ್ಸಿಂಗ್ ಅಂಡ್ ಅಡ್ವಾನ್ಸ್‌ಮೆಂಟ್ ಆಫ್ ನ್ಯೂಕ್ಲಿಯರ್ ಎನರ್ಜಿ ಫಾರ್ ಟ್ರಾನ್ಸ್‌ಫಾರ್ಮಿಂಗ್ ಇಂಡಿಯಾ (ಎಸ್‌ಹೆಚ್‌ಎಎನ್‌ಟಿಐ-ಶಾಂತಿ) ಮಸೂದೆಯ ಚರ್ಚೆಯಲ್ಲೂ ಭಾಗವಹಿಸಿ, ತಮ್ಮ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ವಿರೋಧ ಪಕ್ಷಗಳು ತೀರ್ಮಾನಿಸಿವೆ.

ಈ ಮಸೂದೆಗಳು ದೂರಗಾಮಿ ಪರಿಣಾಮಗಳನ್ನು ಬೀರಬಹುದು, ಗ್ರಾಮೀಣ ಜೀವನೋಪಾಯವನ್ನು ದುರ್ಬಲಗೊಳಿಸುವ ಮತ್ತು ಕಾರ್ಯತಂತ್ರದ ವಲಯಗಳನ್ನು ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ವಿರೋಧ ಪಕ್ಷಗಳ ನಾಯಕರು ಎಚ್ಚರಿಸಿದ್ದಾರೆ.

ಮಂಗಳವಾರ ಸರ್ಕಾರ ವಿಬಿ–ಜಿ ರಾಮ್ ಜಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿವೆ.

ಕೇಂದ್ರವು ಹಕ್ಕು ಆಧಾರಿತ ಕಲ್ಯಾಣ ಯೋಜನೆಯನ್ನು ರದ್ದುಗೊಳಿಸುತ್ತಿದೆ ಮತ್ತು ಮಹಾತ್ಮ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಹಲವಾರು ಸಂಸದರು ಆರೋಪಿಸಿದ್ದಾರೆ. ಎರಡು ದಶಕಗಳಷ್ಟು ಹಳೆಯದಾದ ನರೇಗಾ (ಎಂಜಿಎನ್‌ಆರ್‌ಇಜಿಎ) ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳಿಸಬೇಕೆಂದು ವಿಪಕ್ಷ ಸಂಸದರು ಒತ್ತಾಯಿಸಿದ್ದಾರೆ.

ವಿಪಕ್ಷಗಳ ತಂಡದ ನೇತೃತ್ವದ ವಹಿಸಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿ, ಪ್ರಸ್ತಾವಿತ ಕಾನೂನು ಉದ್ಯೋಗದ ಕಾನೂನು ಖಾತರಿಯನ್ನು ದುರ್ಬಲಗೊಳಿಸುತ್ತದೆ ಮತ್ತು ರಾಜ್ಯಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಹೇರುತ್ತದೆ ಎಂದು ಹೇಳಿದ್ದಾರೆ.

ಈ ಮಸೂದೆಯು ಕೇಂದ್ರಕ್ಕೆ ನಿಧಿ ಹಂಚಿಕೆಯನ್ನು ಮೊದಲೇ ನಿರ್ಧರಿಸುವ ಅಧಿಕಾರವನ್ನು ನೀಡುತ್ತದೆ. ಇದು ಯೋಜನೆಯ ಬೇಡಿಕೆ ಆಧಾರಿತ ಸ್ವರೂಪವನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸುತ್ತದೆ ಮತ್ತು 73ನೇ ಸಾಂವಿಧಾನಿಕ ತಿದ್ದುಪಡಿಯ ಉದ್ದೇಶವನ್ನು ಉಲ್ಲಂಘಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಟಿಎಂಸಿ ಮತ್ತು ಡಿಎಂಕೆ ಸಂಸದರೂ ಕೂಡ ಪ್ರಿಯಾಂಕಾ ಗಾಂಧಿಯ ಹೇಳಿಕೆಗೆ ಧನಿಗೂಡಿಸಿದ್ದಾರೆ. ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ಕೈಬಿಟ್ಟಿರುವುದಕ್ಕೆ ಮತ್ತು ಮತ್ತು ಬೇಡಿಕೆ-ಚಾಲಿತ ವ್ಯವಸ್ಥೆಯಿಂದ ಪೂರೈಕೆ-ಚಾಲಿತ ವ್ಯವಸ್ಥೆಗೆ ಬದಲಾಯಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಭಾತ್ಯಾಗ ಮಾಡಿದ ನಂತರ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಡಿಎಂಕೆ ಸಂಸದ ಟಿ.ಆರ್. ಬಾಲು ಸೇರಿದಂತೆ ವಿರೋಧ ಪಕ್ಷದ ನಾಯಕರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದರು. “ಮಹಾತ್ಮ ಗಾಂಧಿಯವರಿಗೆ ಮಾಡುವ ಈ ಅವಮಾನವನ್ನು ದೇಶ ಸಹಿಸುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...