Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...