Homeಮುಖಪುಟವಿಪಕ್ಷಗಳ ಒಗ್ಗಟ್ಟು ಯತ್ನ: ಖರ್ಗೆ, ರಾಹುಲ್ ಭೇಟಿಯಾಗಲಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್

ವಿಪಕ್ಷಗಳ ಒಗ್ಗಟ್ಟು ಯತ್ನ: ಖರ್ಗೆ, ರಾಹುಲ್ ಭೇಟಿಯಾಗಲಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲ ವಿರೋಧ ಪಕ್ಷಗಳು ಒಟ್ಟಾಗುತ್ತಿರುವ ಭಾಗವಾಗಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ.

ತಿಂಗಳಿನಾದ್ಯಂತ ವಿವಿಧ ವಿರೋಧ ಪಕ್ಷಗಳ ಮುಖಂಡರನ್ನು ಭೇಟಿ ಮಾಡುತ್ತಿರುವ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಪಾಟ್ನಾದಲ್ಲಿ ಬೃಹತ್ ಸಭೆ ನಡೆಸುವ ಯೋಚನೆಯಲ್ಲಿದ್ದಾರೆ ಎನ್ನಲಾಗಿದೆ.

ಕಳೆದೊಂದು ತಿಂಗಳಿನಿಂದ ಈ ಜೋಡಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್,  ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಎಡಪಕ್ಷಗಳ ನಾಯಕರಾದ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಆದರೆ ಬಿಆರ್‌ಸಿ ಮುಖ್ಯಸ್ಥ ಮತ್ತು ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಮತ್ತು ವೈಎಸ್‌ಆರ್‌ಸಿಪಿ ಮುಖ್ಯಸ್ಥ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ.

ವಿರೋಧ ಪಕ್ಷಗಳು ದೇಶಾದ್ಯಂತ ಒಗ್ಗಟ್ಟಾಗಿ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಮತ ವಿಭಜನೆಯನ್ನು ತಡೆಗಟ್ಟಲು ಬಿಜೆಪಿ ಅಭ್ಯರ್ಥಿ ವಿರುದ್ಧ ವಿರೋಧ ಪಕ್ಷಗಳ ಸಮರ್ಥ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸುವ ಯೋಚನೆಯಲ್ಲಿವೆ.

ನಿನ್ನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಹೆಲಿ ಸಿಎಂ ಕೇಜ್ರಿವಾಲ್, ”ನಾನು ಇಂದು ನಿತೀಶ್ ಜೀ ಅವರೊಂದಿಗೆ ಸಭೆ ನಡೆಸಿದ್ದೇನೆ. ದೆಹಲಿ ಪರವಾಗಿನ ಸುಪ್ರೀಂಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ತರುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ನಾನು ದೆಹಲಿಯ ಜನರೊಂದಿಗೆ ನಿಲ್ಲುತ್ತೇನೆ ಎಂದು ಅವರು ಹೇಳಿರುವುದಾಗಿ” ತಿಳಿಸಿದ್ದಾರೆ.

”ಒಂದು ವೇಳೆ ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ತಂದರೆ, ಬಿಜೆಪಿಯೇತರ ಪಕ್ಷಗಳೆಲ್ಲ ಒಗ್ಗೂಡಿದರೆ ರಾಜ್ಯಸಭೆಯಲ್ಲಿ ಬಿಜೆಪಿಗೆ ಹಿನ್ನಡೆ ಉಂಟು ಮಾಡುಬಹುದು. ಅಂತಹದ್ದೇನಾದರೂ ನಡೆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂಬ ಸಂದೇಶ ರವಾನಿಸಬಹುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ದ್ವೇಷದ ಸೋಲಾಗಿದೆ ಆದರೆ ಪ್ರೀತಿಯ ಗೆಲುವಿನ್ನೂ ಆಗಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...