ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಯಾವುದೇ ಮೌಖಿಕ ಮನವಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮಂಗಳವಾರ ಘೋಷಿಸಿದ್ದಾರೆ. ಹಾಗಾಗಿ, ಇನ್ನು ಮುಂದಕ್ಕೆ ಅಂತಹ ಪ್ರಕರಣಗಳಿಗಾಗಿ ವಕೀಲರು ಇಮೇಲ್ ಅಥವಾ ಲಿಖಿತ ಪತ್ರಗಳ ಮೂಲಕ ವಿನಂತಿಗಳನ್ನು ಸಲ್ಲಿಸಬೇಕಾಗುತ್ತದೆ. ಮೌಖಿಕ ಮನವಿಯ
ಸಾಂಪ್ರದಾಯಿಕವಾಗಿ, ವಕೀಲರು ತಮ್ಮ ಪ್ರಕರಣಗಳನ್ನು ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರತಿನಿತ್ಯದ ವಿಚಾರಣೆಯ ಪ್ರಾರಂಭದಲ್ಲಿ ತುರ್ತು ಆಧಾರದ ಮೇಲೆ ಔಟ್-ಆಫ್-ಟರ್ನ್ ಪಟ್ಟಿಗಳು ಮತ್ತು ವಿಚಾರಣೆಗಳನ್ನು ಕೋರುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಇನ್ನು ಮುಂದೆ ಯಾವುದೇ ಲಿಖಿತ ಅಥವಾ ಮೌಖಿಕ ಉಲ್ಲೇಖಗಳನ್ನು ಪರಿಗಣಿಸುವುದಿಲ್ಲ. ತುರ್ತು ಕಾರಣಗಳನ್ನು ತಿಳಿಸಿ ಇಮೇಲ್‌ಗಳು ಅಥವಾ ಲಿಖಿತ ಸ್ಲಿಪ್‌ಗಳು ಅಥವಾ ಪತ್ರಗಳನ್ನು ಸಲ್ಲಿಸಿದರೆ ಮಾತ್ರ ಅದನ್ನು ಸ್ವೀಕರಿಸಲಾಗುತ್ತದೆ” ಎಂದು ಸಿಜೆಐ ಹೇಳಿದ್ದಾರೆ. ಮೌಖಿಕ ಮನವಿಯ
ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ 51ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಖನ್ನಾ, ನ್ಯಾಯಾಂಗ ಸುಧಾರಣೆಗಳಿಗೆ ಜನಕೇಂದ್ರಿತ ಕಾರ್ಯಸೂಚಿಯ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ಜನರ ಸ್ಥಾನಮಾನವನ್ನು ಲೆಕ್ಕಿಸದೆ ಅವರಿಗೆ ಸುಲಭವಾಗಿ ನ್ಯಾಯ ಸಿಗುವಂತೆ ಮಾಡಲು ಮತ್ತು ಸಮಾನತೆಯನ್ನು ಖಚಿತಪಡಿಸುವುದು ನ್ಯಾಯಾಂಗದ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
“ನ್ಯಾಯಾಂಗವು ಆಡಳಿತ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದರೂ, ಅದು ವಿಭಿನ್ನ ಮತ್ತು ಸ್ವತಂತ್ರ ಭಾಗವಾಗಿದೆ. ಸಂವಿಧಾನವು ನಮಗೆ ಸಂವಿಧಾನದ ರಕ್ಷಕನ ಪಾತ್ರ ವಹಿಸುತ್ತದೆ. ಜೊತೆಗೆ ಮೂಲಭೂತ ಹಕ್ಕುಗಳ ರಕ್ಷಕ ಮತ್ತು ನ್ಯಾಯವನ್ನು ನೀಡುವ ಜವಾಬ್ದಾರಿಯನ್ನು ವಹಿಸುತ್ತದೆ” ಎಂದು ಸಿಜೆಐ ತನ್ನ ಮೊದಲ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಾಕಿ ಉಳಿದಿರುವ ಪ್ರಕರಣಗಳನ್ನು ಕಡಿಮೆ ಮಾಡಲು, ದಾವೆಗಳನ್ನು ಹೆಚ್ಚು ಕೈಗೆಟುಕುವಂತೆ ಮಾಡಲು ಮತ್ತು ಸಂಕೀರ್ಣ ಕಾನೂನು ಪ್ರಕ್ರಿಯೆಗಳನ್ನು ಸರಳಗೊಳಿಸುವ ದೃಷ್ಟಿಕೋನವನ್ನು ಜಸ್ಟಿಸ್ ಖನ್ನಾ ಅವರು ವಿವರಿಸಿದ್ದಾರೆ. ನ್ಯಾಯ ವ್ಯವಸ್ಥೆಯು ಎಲ್ಲಾ ನಾಗರಿಕರನ್ನು ತಲುಪಬೇಕು ಎಂದು ಅವರು ಒತ್ತಿ ಹೇಳಿದ್ದು, ನ್ಯಾಯಾಲಯಗಳನ್ನು ಹೆಚ್ಚು ಸುಲಭವಾಗಿ ಮತ್ತು ಬಳಕೆದಾರ ಸ್ನೇಹಿಯನ್ನಾಗಿ ಮಾಡಲು ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ


