Homeಮುಖಪುಟಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

- Advertisement -
- Advertisement -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾದ ಪರಿಣಾಮ ರಾಜ್ಯದಲ್ಲಿ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಂತೂ ಬೆಳಿಗ್ಗೆಯಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಹಾಗಾಗಿ ಹವಾಮಾನ ಇಲಾಖೆಯು ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅಲ್ಲದೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ. ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣದ ಎಚ್ಚರಿಕೆಗಳನ್ನು ನೀಡುತ್ತದೆ.

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರೀಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಮತ್ತು 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ.
30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಅಪಾಯವು ಹಲವಾರು ಪಟ್ಟು ಹೆಚ್ಚಾಗುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಗುತ್ತದೆ.

ಈ ಎಚ್ಚರಿಕೆಗಳನ್ನು ಟಿವಿ, ರೆಡಿಯೋ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಹವಾಮಾನ ಇಲಾಖೆ ಹೊರಡಿಸುತ್ತದೆ. ಇವುಗಳನ್ನು ಜನರು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಅಲ್ಲದೆ ಇದರಿಂದ ತೀವ್ರ ಮಳೆ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿಯಾಗದಂತೆ ತಡೆಯಲು ಸ್ಥಳೀಯ ಆಡಳಿತಗಳಿಗೆ ಸಹಕಾರಿಯಾಗುತ್ತದೆ.


ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...