Homeಕರ್ನಾಟಕಕಾಶಿಯಾತ್ರೆ ಸಹಾಯಧನ ಯೋಜನೆಗೆ ಆದೇಶ: ಶಶಿಕಲಾ ಜೊಲ್ಲೆ

ಕಾಶಿಯಾತ್ರೆ ಸಹಾಯಧನ ಯೋಜನೆಗೆ ಆದೇಶ: ಶಶಿಕಲಾ ಜೊಲ್ಲೆ

- Advertisement -
- Advertisement -

ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ರಾಜ್ಯದ ಕಾಶಿಯಾತ್ರೆ ಪ್ರವಾಸ ಯೋಜನೆಗೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪವಾದ ಕಾಶಿಯಾತ್ರೆ ಪ್ರವಾಸ ಯೋಜನೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಇದು ದೇವಾಲಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಿದಂತಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿಯವರು ಉತ್ತರಪ್ರದೇಶದ ವಾರಣಾಸಿಯ ಪುರಾತನ ಕಾಶಿಯ ವಿಶ್ವನಾಥ ಮಂದಿರವನ್ನು ವಿಶಿಷ್ಟ ರೀತಿಯಲ್ಲಿ ಜೀರ್ಣೋದ್ಧಾರ ಮಾಡುವ ಮೂಲಕ ಐತಿಹಾಸಿಕ ಕಾಶಿಗೆ ‘ದಿವ್ಯಕಾಶಿ-ಭವ್ಯಕಾಶಿ’ ಎಂಬ ಅಭಿದಾನ ದೊರೆಯುವಂತೆ ಮಾಡಿರುವ ಈ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಯಾತ್ರಾರ್ಥಿಗಳು ಭವ್ಯಕಾಶಿಗೆ ಭೇಟಿ ನೀಡಿ ವಿಶ್ವನಾಥನ ದರ್ಶನವನ್ನು ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದು ಜೊಲ್ಲೆ ತಿಳಿಸಿದ್ದಾರೆ.

ಕಾಶಿಯಾತ್ರೆ ಯೋಜನೆಯನ್ವಯ ಪ್ರತಿ ವರ್ಷ ರಾಜ್ಯದ 30 ಸಾವಿರ ಯಾತ್ರಾರ್ಥಿಗಳು ಸರ್ಕಾರದ ಸಹಾಯಧನದ ಮೂಲಕ ಕಾಶಿಗೆ ತೆರಳಬಹುದಾಗಿದೆ. ಪ್ರತಿಯೊಬ್ಬ ಯಾತ್ರಾರ್ಥಿಗೆ ಈ ಯೋಜನೆಯನ್ವಯ 5 ಸಾವಿರ ರೂ. ಸಹಾಯಧನ ನೀಡಲಾಗುವುದು. ಈ ಕುರಿತಂತೆ ಸರ್ಕಾರದ ಆದೇಶ ಹೊರಡಿಸಲಾಗಿದ್ದು, ಶೀಘ್ರದಲ್ಲಿಯೇ ಇಲಾಖೆಯಿಂದ ಕಾಶಿಯಾತ್ರೆಗೆ ತೆರಳಲು ಆಸಕ್ತಿ ಹೊಂದಿರುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಜೀವಮಾನದಲ್ಲಿ ಒಂದು ಬಾರಿಯಾದರೂ ಕಾಶಿಯಾತ್ರೆ ಮಾಡಬೇಕೆನ್ನುವುದು ಬಹುತೇಕ ಹಿಂದೂಗಳ ಕನಸು. ಅನೇಕರಿಗೆ ನಾನಾ ಕಾರಣಗಳಿಂದ ಕಾಶಿಗೆ ಹೋಗಿಬರಲು ಸಾಧ್ಯವಾಗುತ್ತಿರಲಿಲ್ಲ. ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಆಸಕ್ತ ಯಾತ್ರಾರ್ಥಿಗಳನ್ನು ಕಾಶಿಗೆ ಹೋಗಿಬರಲು ಈ ಮೂಲಕ ಅನುಕೂಲ ಕಲ್ಪಿಸಲಾಗಿದೆ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...