Homeಮುಖಪುಟಮಸೂದೆ ಅನುಮೋದನೆಗೆ ಗಡುವು: ಸುಪ್ರೀಂ ಕೋರ್ಟ್‌ಗೆ 14 ಪ್ರಶ್ನೆಗಳನ್ನು ಕೇಳಿದ ರಾಷ್ಟ್ರಪತಿ

ಮಸೂದೆ ಅನುಮೋದನೆಗೆ ಗಡುವು: ಸುಪ್ರೀಂ ಕೋರ್ಟ್‌ಗೆ 14 ಪ್ರಶ್ನೆಗಳನ್ನು ಕೇಳಿದ ರಾಷ್ಟ್ರಪತಿ

- Advertisement -
- Advertisement -

ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಗಡುವು ನಿಗದಿಪಡಿಸಿದ ಏಪ್ರಿಲ್ 8ರ ತೀರ್ಪಿನ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ಗೆ 14 ನಿರ್ಣಾಯಕ ಪ್ರಶ್ನೆಗಳನ್ನು ಕೇಳಿದ್ದಾರೆ.

ಅಪರೂಪಕ್ಕೆ ಬಳಸಲಾಗುವ ಸಂವಿಧಾನದ ವಿಧಿ 143 (1) ರ ಅಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುತ್ತಾ, ರಾಷ್ಟ್ರಪತಿ ಮುರ್ಮು ಅವರು ಪ್ರಸ್ತುತ ಸಂದರ್ಭಗಳಲ್ಲಿ, ಈ ಕೆಳಗಿನ ಕಾನೂನಿನ ಪ್ರಶ್ನೆಗಳು ಉದ್ಭವಿಸಿವೆ ಎಂದು ತೋರುತ್ತದೆ ಮತ್ತು ಅವುಗಳ ಸ್ವರೂಪ ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿವೆ. ಅದರ ಬಗ್ಗೆ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ಪಡೆಯುವುದು ಸೂಕ್ತವಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನದ 143 (1) ನೇ ವಿಧಿಯು ರಾಷ್ಟ್ರಪತಿ ಸುಪ್ರೀಂ ಕೋರ್ಟ್‌ನೊಂದಿಗೆ ಸಮಾಲೋಚನೆ ನಡೆಸುವ ಅಧಿಕಾರದ ಬಗ್ಗೆ ಹೇಳುತ್ತದೆ.

“ಯಾವುದೇ ಸಮಯದಲ್ಲಿ ಕಾನೂನು ಅಥವಾ ವಾಸ್ತವದ ಪ್ರಶ್ನೆ ಉದ್ಭವಿಸಿದೆ ಅಥವಾ ಉದ್ಭವಿಸುವ ಸಾಧ್ಯತೆ ಇದೆ ಎಂದು ರಾಷ್ಟ್ರಪತಿಗಳಿಗೆ ಕಂಡುಬಂದರೆ, ಅದು ಅಂತಹ ಸ್ವರೂಪದ್ದಾಗಿದ್ದು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿದ್ದು, ಅದರ ಬಗ್ಗೆ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ಪಡೆಯುವುದು ಸೂಕ್ತವಾಗಿದ್ದರೆ, ರಾಷ್ಟ್ರಪತಿ ಆ ಪ್ರಶ್ನೆಯನ್ನು ಪರಿಗಣನೆಗೆ ನ್ಯಾಯಾಲಯಕ್ಕೆ ಉಲ್ಲೇಖಿಸಬಹುದು. ನ್ಯಾಯಾಲಯವು ಸೂಕ್ತವೆಂದು ಭಾವಿಸುವ ವಿಷಯದ ಬಗ್ಗೆ ತನ್ನ ಅಭಿಪ್ರಾಯವನ್ನು ರಾಷ್ಟ್ರಪತಿಗೆ ವರದಿ ಮಾಡಬಹುದು” ಎಂದು ನಿಬಂಧನೆ ಹೇಳುತ್ತದೆ.

ರಾಷ್ಟ್ರಪತಿ ಸುಪ್ರೀಂ ಕೋರ್ಟ್‌ಗೆ ಕೇಳಿರುವ ಪ್ರಶ್ನೆಗಳು ಹೀಗಿವೆ :

  1. ಭಾರತ ಸಂವಿಧಾನದ 200ನೇ ವಿಧಿಯಡಿಯಲ್ಲಿ ರಾಜ್ಯಪಾಲರಿಗೆ ಮಸೂದೆಯನ್ನು ಮಂಡಿಸಿದಾಗ ಅವರ ಮುಂದೆ ಇರುವ ಸಾಂವಿಧಾನಿಕ ಆಯ್ಕೆಗಳೇನು?
  2. ಭಾರತ ಸಂವಿಧಾನದ 200ನೇ ವಿಧಿಯಡಿ ಮಸೂದೆ ಕುರಿತು ತೀರ್ಮಾನ ತೆಗೆದುಕೊಳ್ಳಲು ರಾಜ್ಯಪಾಲರು ತಮ್ಮ ಮುಂದಿರುವ ಆಯ್ಕೆಗಳನ್ನು ಚಲಾಯಿಸುವಾಗ ಮಂತ್ರಿ ಮಂಡಲದ ನೀಡುವ ನೆರವು ಮತ್ತು ಸಲಹೆಗೆ ಬದ್ಧರಾಗಿದ್ದಾರೆಯೇ?
  3. ಭಾರತ ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಸಾಂವಿಧಾನಿಕ ವಿವೇಚನೆಯನ್ನು ಚಲಾಯಿಸುವುದು ನ್ಯಾಯಸಮ್ಮತವೇ?
  4. ಭಾರತದ ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಕ್ರಮಗಳಿಗೆ ಸಂಬಂಧಿಸಿದಂತೆ ನ್ಯಾಯಾಂಗ ಪರಿಶೀಲನೆಗೆ ಭಾರತದ ಸಂವಿಧಾನದ 361ನೇ ವಿಧಿಯು ಸಂಪೂರ್ಣ ನಿರ್ಬಂಧವೇ?
  5. ಸಂವಿಧಾನಾತ್ಮಕವಾಗಿ ನಿಗದಿಪಡಿಸಿದ ಸಮಯ ಮಿತಿ ಮತ್ತು ವಿಧಾನದಲ್ಲಿ ರಾಜ್ಯಪಾಲರು ಮಸೂದೆಗಳ ಕುರಿತು ನಿರ್ಣಯ ತೆಗೆದುಕೊಳ್ಳದಿದ್ದರೆ, ಸಂವಿಧಾನದ 200 ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಅಧಿಕಾರಗಳನ್ನು ಚಲಾಯಿಸಲು ನ್ಯಾಯಾಂಗ ಆದೇಶಗಳ ಮೂಲಕ ಸಮಯ ಮಿತಿಗಳನ್ನು ವಿಧಿಸಬಹುದೇ ಮತ್ತು ಚಲಾಯಿಸುವ ವಿಧಾನವನ್ನು ಸೂಚಿಸಬಹುದೇ?
  6. ಭಾರತದ ಸಂವಿಧಾನದ 201 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳು ಸಾಂವಿಧಾನಿಕ ವಿವೇಚನೆಯನ್ನು ಚಲಾಯಿಸುವುದು ನ್ಯಾಯಸಮ್ಮತವೇ?
  7. ಸಂವಿಧಾನಾತ್ಮಕವಾಗಿ ನಿಗದಿಪಡಿಸಿದ ಸಮಯ ಮಿತಿ ಮತ್ತು ವಿಧಾನದಲ್ಲಿ ರಾಷ್ಟ್ರಪತಿ ಮಸೂದೆಗಳ ಕುರಿತು ನಿರ್ಣಯ ತೆಗೆದುಕೊಳ್ಳದಿದ್ದರೆ, ಸಂವಿಧಾನದ 201 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ಅಧಿಕಾರಗಳನ್ನು ಚಲಾಯಿಸಲು ನ್ಯಾಯಾಂಗ ಆದೇಶಗಳ ಮೂಲಕ ಸಮಯ ಮಿತಿಗಳನ್ನು ವಿಧಿಸಬಹುದೇ ಮತ್ತು ಚಲಾಯಿಸುವ ವಿಧಾನವನ್ನು ಸೂಚಿಸಬಹುದೇ?
  8. ರಾಷ್ಟ್ರಪತಿಗಳ ಅಧಿಕಾರಗಳನ್ನು ನಿಯಂತ್ರಿಸುವ ಸಾಂವಿಧಾನಿಕ ನಿಯಮಗಳಡಿ ರಾಜ್ಯಪಾಲರು ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿದಾಗ, ರಾಷ್ಟ್ರಪತಿಗಳು ಭಾರತದ ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಪಡೆಯಬೇಕೇ ಅಥವಾ ಬೇರೆ ರೀತಿಯಲ್ಲಿ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕೇ?
  9. ಭಾರತ ಸಂವಿಧಾನದ 200ನೇ ವಿಧಿ ಮತ್ತು 201ನೇ ವಿಧಿಯಡಿಯಲ್ಲಿ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ತೆಗೆದುಕೊಳ್ಳುವ ನಿರ್ಧಾರಗಳು ಕಾನೂನು ಜಾರಿಗೆ ಬರುವ ಮೊದಲು ಒಂದು ಹಂತದಲ್ಲಿ ನ್ಯಾಯಸಮ್ಮತವೇ? ಮಸೂದೆ ಕಾನೂನಾಗುವ ಮೊದಲು ಅದರ ವಿಷಯಗಳ ಬಗ್ಗೆ ನ್ಯಾಯಾಲಯಗಳು ಯಾವುದೇ ರೀತಿಯಲ್ಲಿ ನ್ಯಾಯಾಂಗ ತೀರ್ಪು ನೀಡಲು ಅನುಮತಿ ಇದೆಯೇ?
  10. ಭಾರತದ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಅಧಿಕಾರಗಳ ಚಲಾವಣೆ ಮತ್ತು ರಾಷ್ಟ್ರಪತಿ/ರಾಜ್ಯಪಾಲರ ಆದೇಶಗಳನ್ನು ಯಾವುದೇ ರೀತಿಯಲ್ಲಿ ಬದಲಿಸಬಹುದೇ?
  11. ಸಂವಿಧಾನದ 145(3) ನೇ ವಿಧಿಯ ನಿಬಂಧನೆಯನ್ನು ಗಮನದಲ್ಲಿಟ್ಟುಕೊಂಡು, ಈ ನ್ಯಾಯಾಲಯದ ಯಾವುದೇ ಪೀಠವು ಮುಂದೆ ವಿಚಾರಣೆಯಲ್ಲಿರುವ ವಿಷಯವು ಸಂವಿಧಾನದ ವ್ಯಾಖ್ಯಾನಕ್ಕೆ ಸಂಬಂಧಿಸಿದ ಕಾನೂನಿನ ಗಣನೀಯ ಪ್ರಶ್ನೆಗಳನ್ನು ಒಳಗೊಂಡಿರುವ ಸ್ವರೂಪದ್ದಾಗಿದೆಯೇ ಎಂದು ನಿರ್ಧರಿಸುವುದು ಮತ್ತು ಅದನ್ನು ಕನಿಷ್ಠ ಐದು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸುವುದು ಕಡ್ಡಾಯವಲ್ಲವೇ?
  12. ಭಾರತದ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರಗಳು ಕಾರ್ಯವಿಧಾನ ಕಾನೂನು ಅಥವಾ ಭಾರತದ ಸಂವಿಧಾನದ 142 ನೇ ವಿಧಿಯ ವಿಷಯಗಳಿಗೆ ಸೀಮಿತವಾಗಿವೆಯೇ? ಸಂವಿಧಾನದ ಅಥವಾ ಜಾರಿಯಲ್ಲಿರುವ ಕಾನೂನಿನ ಅಸ್ತಿತ್ವದಲ್ಲಿರುವ ಸಬ್ಸ್ಟಾಂಟಿವ್ ಅಥವಾ ಕಾರ್ಯವಿಧಾನದ ನಿಬಂಧನೆಗಳಿಗೆ ವಿರುದ್ಧವಾದ ಅಥವಾ ಅಸಮಂಜಸವಾದ ನಿರ್ದೇಶನಗಳನ್ನು/ಆದೇಶಗಳನ್ನು ಹೊರಡಿಸುವವರೆಗೆ ವಿಸ್ತರಿಸಲಾಗಿದೆಯೇ?
  13. ಭಾರತದ ಸಂವಿಧಾನದ 131 ನೇ ವಿಧಿಯ ಅಡಿಯಲ್ಲಿ ಮೊಕದ್ದಮೆ ಹೂಡುವುದನ್ನು ಹೊರತುಪಡಿಸಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಿವಾದಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್‌ನ ಯಾವುದೇ ಇತರ ನ್ಯಾಯವ್ಯಾಪ್ತಿಯನ್ನು ಸಂವಿಧಾನವು ನಿಷೇಧಿಸುತ್ತದೆಯೇ?
  14. ರಾಜ್ಯ ಶಾಸಕಾಂಗವು ಮಾಡಿದ ಕಾನೂನು, ಭಾರತದ ಸಂವಿಧಾನದ 200 ನೇ ವಿಧಿಯ ಅಡಿಯಲ್ಲಿ ನೀಡಲಾದ ರಾಜ್ಯಪಾಲರ ಒಪ್ಪಿಗೆಯಿಲ್ಲದೆ ಜಾರಿಯಲ್ಲಿರುವ ಕಾನೂನೇ?

ರಾಷ್ಟ್ರಪತಿ ಮುಂದಿಟ್ಟಿರುವ 14 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐವರು ನ್ಯಾಯಾಧೀಶರ ಸಂವಿಧಾನ ಪೀಠವನ್ನು ರಚಿಸಬಹುದು ಎಂದು ವರದಿಯಾಗಿದೆ. ಆದಾಗ್ಯೂ, ಅಂತಹ ಪೀಠ ರಚನೆಯು ನ್ಯಾಯಾಲಯಕ್ಕೆ ಕಡ್ಡಾಯವಲ್ಲ.

ಏಪ್ರಿಲ್ 8 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ಕುರಿತು ರಾಜ್ಯಪಾಲರು ತೀರ್ಮಾನ ತೆಗೆದುಕೊಳ್ಳಲು ಒಂದು ಕಾಲಮಿತಿಯನ್ನು ನಿಗದಿಪಡಿಸಿದೆ. ರಾಜ್ಯಪಾಲರು ತಮಗೆ ಮಂಡಿಸಲಾದ ಯಾವುದೇ ಮಸೂದೆಗೆ ಸಂಬಂಧಿಸಿದಂತೆ ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ತಮ್ಮ ವಿವೇಚನೆಯಂತೆ ಮುಂದುವರಿಯುವಂತಿಲ್ಲ, ಮಂತ್ರಿ ಮಂಡಲ ನೀಡುವ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.

ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿದ ಮಸೂದೆಗಳ ಕುರಿತು ಅವರು ತೀರ್ಮಾನ ತೆಗೆದುಕೊಳ್ಳದಿದ್ದರೆ, ಸರ್ಕಾರ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದಿದೆ.

ರಾಜ್ಯಪಾಲರ ವೈಯಕ್ತಿಕ ಅಸಮಾಧಾನ, ರಾಜಕೀಯ ಲಾಭ ಅಥವಾ ಯಾವುದೇ ಇತರ ಬಾಹ್ಯ ಅಥವಾ ಅಪ್ರಸ್ತುತ ವಿಷಯಗಳಿಗಾಗಿ ಮಸೂದೆಯ ಕುರಿತು ತೀರ್ಮಾನ ತೆಗೆದುಕೊಳ್ಳದೆ ಸುಮ್ಮನಿರುವುದನ್ನು ಸಂವಿಧಾನ ಅನುಮತಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ ಸ್ಪಷ್ಟವಾಗಿ ಹೇಳಿದೆ.

ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...