HomeಮುಖಪುಟAir India Express Crash | ನಾಗರೀಕ ವಿಮಾನಯಾನ ಸಚಿವಾಲಯದಿಂದ ತನಿಖೆಗೆ ಆದೇಶ

Air India Express Crash | ನಾಗರೀಕ ವಿಮಾನಯಾನ ಸಚಿವಾಲಯದಿಂದ ತನಿಖೆಗೆ ಆದೇಶ

ಪೈಲಟ್ ಸೇರಿದಂತೆ ಮೃತಪಟ್ಟವರ ಸಂಖ್ಯೆ 18 ಕ್ಕೆ ಏರಿದೆ.

- Advertisement -
- Advertisement -

ದುಬಾಯಿಯಿಂದ ಹೊರಟಿದ್ದ ಏರ್‌ ಇಂಡಿಯಾ ವಿಮಾನವೊಂದು ಕೊಯಿಕೋಡ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತಕ್ಕೆ ಈಡಾಗಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿಂದತೆ ಇಟ್ಟು 191 ಮಂದಿ ಇದ್ದರು ಎನ್ನಲಾಗಿದೆ. ಇದುವರೆಗೆ ಪೈಲಟ್ ಸೇರಿದಂತೆ 18 ಜನರು ಮೃತಪಟ್ಟಿದ್ದು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ನಾಗರೀಕ ವಿಮಾನಯಾನ ಸಚಿವಾಲಯ ಆದೇಶಿಸಿದೆ.

ದುಬೈ- ಕೊಯಿಕೋಡ್ ವಿಮಾನ X1344 ಬೋಯಿಂಗ್ 737 ವಿಮಾನವು ಇಂದು ಸಂಜೆ 7;41ರಲ್ಲಿ ಲ್ಯಾಂಡ್ ಆಗಿದ್ದು, ರನ್‌ವೆಯಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ವಿಮಾನಯಾನ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ “ಕೇರಳದ ಕೋಯಿಕೋಡ್‌ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ದುರಂತ ಅಪಘಾತದ ಬಗ್ಗೆ ತಿಳಿದು ಬೇಸರವಾಗಿದೆ. ಸ್ಥಳಕ್ಕೆ ಶೀಘ್ರವಾಗಿ ತಲುಪಿ ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಎನ್‌ಡಿಆರ್‌ಎಫ್‌ಗೆ ಸೂಚನೆ ನೀಡಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...