Homeಮುಖಪುಟಬಡ್ಡಿದರ ಕಡಿತಗೊಳಿಸಿ 'ನಿನ್ನೆ' ಆದೇಶ: 'ಇಂದು' ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

- Advertisement -
- Advertisement -

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಬುಧವಾರ ಭಾರೀ ಕಡಿತವನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಆ ಆದೇಶವನ್ನು ಇಂದು ಬೆಳಿಗ್ಗೆಯೇ ಹಿಂಪಡೆದುಕೊಂಡಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‌ಎಸ್‌ಸಿ ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳ ಕಡಿತವನ್ನು ಸರ್ಕಾರ ನಿನ್ನೆ ಘೋಷಿಸಿತ್ತು.

ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-2021ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ದರಗಳಲ್ಲಿಯೇ ಮುಂದುವರಿಯುತ್ತವೆ (ಅಂದರೆ ಮಾರ್ಚ್ 2021 ರ ಹೊತ್ತಿಗೆ ಇದ್ದ ದರಗಳು). ಈ ಸಂಬಂಧಿ ಹೊರಡಿಸಲಾದ ಆದೇಶಗಳನ್ನು ಹಿಂಪಡೆಯಲಾಗುತ್ತದೆ” ಎಂದು ಹೇಳಿದ್ದಾರೆ.

ನಿನ್ನೆ ಸಂಜೆ, ಆರ್ಥಿಕ ವರ್ಷದ ಕೊನೆಯ ದಿನದಂದು, ಮಧ್ಯಮ ವರ್ಗದ ಠೇವಣಿದಾರರಿಗೆ ಭಾರಿ ಹೊಡೆತ ಬೀಳುವಂತೆ ಸರ್ಕಾರವು 2021-22ರ ಮೊದಲ ತ್ರೈಮಾಸಿಕದಲ್ಲಿ ಶೇ 1.1 ರಷ್ಟು ಬಡ್ಡಿದರಗಳಲ್ಲಿ ಭಾರಿ ಕಡಿತವನ್ನು ಘೋಷಿಸಿತ್ತು. ಆದರೆ ಎರಡನೇ ಸುತ್ತಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಿನ್ನೆ ಹೊರಡಿಸಿದ್ದ ಆದೇಶ ಏನು?

 

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ಉಳಿತಾಯ ಖಾತೆಯ ಮೇಲಿನ ವಾರ್ಷಿಕ ಬಡ್ಡಿದರವನ್ನು ಶೇ.4ರಿಂದ ಶೇ.3.5ಕ್ಕೆ ಇಳಿಸಲಾಗಿತ್ತು. ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಬಡ್ಡಿದರವನ್ನು ಶೇ.7.1ರಿಂದ ಶೇ.6.4ಕ್ಕೆ ಇಳಿಸಲಾಗಿತ್ತು. ಎಪ್ರಿಲ್ 1ರಿಂದ ಪರಿಷ್ಕೃತ ಬಡ್ಡಿದರಗಳು ಜಾರಿಗೆ ಬರಲಿವೆ ಎಂದು ಸರ್ಕಾರ ಹೇಳಿತ್ತು.

ರಾಷ್ಟ್ರೀಯ ಉಳಿತಾಯ ಸರ್ಟಿಫಿಕೇಟ್ (ಎನ್‌ಎಸ್‌ಸಿ)ನ ಬಡ್ಡಿದರ ಶೇ.5.9 ಹಾಗೂ ಶೇ.7.6ರಷ್ಟಿದ್ದ ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿದರವನ್ನು ಶೇ.6.9ಕ್ಕೆ ನಿಗದಿಪಡಿಸಲಾಗಿತ್ತು.

ಐದು ವರ್ಷಗಳ ಅವಧಿಯ ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಬಡ್ಡಿದರವನ್ನು ಶೇ.7.4ರಿಂದ ಶೇ.6.5ಕ್ಕೆ ಇಳಿಸಲಾಗಿತ್ತು. ಕಿಸಾನ್ ವಿಕಾಸ್ ಪತ್ರದ (ಕೆವಿಪಿ) ಬಡ್ಡಿದರವನ್ನು ಶೇ.6.2ಕ್ಕೆ ಕಡಿತಗೊಳಿಸಲಾಗಿದೆ. 2020-21ರ ಸಾಲಿನಲ್ಲಿ ಕೆವಿಪಿ ಬಡ್ಡಿದರ ಶೇ.6.9ರಷ್ಟಿತ್ತು.

ಅಂಚೆ ಕಚೇರಿ ಉಳಿತಾಯ ಠೇವಣಿ ಮೇಲಿನ ಬಡ್ಡಿದರವನ್ನು ಶೇ.3.5 ಶೇಕಡಕ್ಕೆ ಇಳಿಸಲಾಗಿದ್ದರೆ, ಒಂದರಿಂದ ಐದು ವರ್ಷಗಳ ಅವಧಿಯ ಠೇವಣಿಗೆ (ಟರ್ಮ್ ಡೆಪಾಸಿಟ್) ಶೇ.4.4ರಿಂದ 4.1ರರೆಗೆ ಬಡ್ಡಿದರ ದೊರೆಯಲಿದೆ. ಐದು ವರ್ಷಗಳ ಅವಧಿಯ ರಿಕರಿಂಗ್ ಡೆಪಾಸಿಟ್ ಮೇಲಿನ ಬಡ್ಡಿದರವನ್ನು ಶೇ.5.8ಕ್ಕೆ ಇಳಿಸಲಾಗಿತ್ತು.

ಕಳೆದ ಒಂದು ವರ್ಷದಲ್ಲಿ ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿರುವುದು ಇದು ಎರಡನೇ ಬಾರಿಯಾಗಿತ್ತು. 2020-21ರ ಸಾಲಿನ ಹಣಕಾಸು ವರ್ಷದಲ್ಲಿ ಕೇಂದ್ರ ಸರಕಾವು ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಶೇ.1ರಷ್ಟು ಕಡಿತಗೊಳಿಸಿತ್ತು.

ಆದರೆ ಈಗ ಈ ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ.


ಇದನ್ನೂ ಓದಿ: ಇಂದು ಎರಡನೇ ಹಂತದ ಚುನಾವಣೆ: ಎಲ್ಲರ ಚಿತ್ತ ಪಶ್ಚಿಮ ಬಂಗಾಳದ ನಂದಿಗ್ರಾಮದತ್ತ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...