Homeಕರ್ನಾಟಕಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ಸಣ್ಣ ಜಾಗಕ್ಕೆ ಭಾರೀ ಮೊತ್ತದ ಟಿಡಿಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ : ಸಚಿವ ಹೆಚ್.ಕೆ ಪಾಟೀಲ್

- Advertisement -
- Advertisement -

ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣದ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶಕ್ಕಾಗಿ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ (ಜ.24) ನಡೆದ ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ ಪಾಟೀಲ್, ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ–1996ಕ್ಕೆ ಸಂಬಂಧಪಟ್ಟ ಸಿವಿಲ್‌ ಮೇಲ್ಮನವಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಹಂತದಲ್ಲಿ ಅಭಿವೃದ್ಧಿ ಹಕ್ಕುಗಳನ್ನು(ಟಿಡಿಆರ್‌) ವಿತರಿಸಿದರೆ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದಿದ್ದಾರೆ.

ಅರಮನೆ ಮೈದಾನ ಒಟ್ಟು 472 ಎಕರೆ 16 ಗುಂಟೆ ಜಾಗ ಹೊಂದಿದೆ. 1996ರ ಅಧಿನಿಯಮ ರೂಪಿಸಿದಾಗ 11 ಕೋಟಿ ರೂಪಾಯಿ ಪರಿಹಾರ ನಿಗದಿ ಮಾಡಲಾಗಿತ್ತು. ಇದರಲ್ಲಿ ಒಂದಷ್ಟು ಭಾಗವನ್ನು ರಾಜವಂಶಸ್ಥರು ಪರಿಹಾರವಾಗಿ ಪಡೆದಿದ್ದಾರೆ. ಅಲ್ಲದೇ, ಈ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ. ಇದಕ್ಕೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಇಲ್ಲ ಎಂದು ತಿಳಿಸಿದ್ದಾರೆ.

ಆದರೆ, 2024ರ ಡಿಸೆಂಬರ್‌ 10ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಮತ್ತು ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಆ ಆದೇಶದ ಪ್ರಕಾರ ಕರ್ನಾಟಕ ಸ್ಟ್ಯಾಂಪ್‌ ಕಾಯ್ದೆಯ ಸೆಕ್ಷನ್‌ 45 ಬಿಗೆ ಅನುಗುಣವಾಗಿ ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿ ಅರಮನೆ ಜಾಗವನ್ನು ಮೌಲ್ಯೀಕರಿಸಿ, ವರ್ಗಾವಣೆ ಮಾಡಬಹುದಾದ ಟಿಡಿಆರ್‌ ನೀಡುವಂತೆ ನಿರ್ದೇಶನ ನೀಡಿದೆ ಎಂದು ಹೇಳಿದ್ದಾರೆ.

ಕೇವಲ ಎರಡು ಕಿ.ಮೀ ರಸ್ತೆ ಅಭಿವೃದ್ಧಿಗೆ 3,014 ಕೋಟಿ ರೂಪಾಯಿ ಎಂದರೆ, ಪ್ರತಿ ಎಕರೆಗೆ 200 ಕೋಟಿ ರೂಪಾಯಿ ಆಗುತ್ತದೆ. ಇದರಿಂದ ರಾಜ್ಯದಲ್ಲಿ ಆರ್ಥಿಕವಾಗಿ ಗಂಡಾಂತರ ಪರಿಸ್ಥಿತಿ ಉದ್ಭವವಾಗುತ್ತದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗದ ಸ್ಥಿತಿಯೂ ಉದ್ಭವಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುಗ್ರೀವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಹಿಂದೆ ಕೈಗೊಂಡ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶಃ ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಸುಗ್ರೀವಾಜ್ಞೆ ಅವಕಾಶ ನೀಡುತ್ತದೆ ಎಂದು ವಿವರಿಸಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್‌ ಸಿವಿಲ್ ಮೇಲ್ಮನವಿ ವಿಚಾರದಲ್ಲಿ ಸರ್ಕಾರದ ಪರವಾಗಿ ಆದೇಶ ನೀಡಿದರೆ, ಮಾರಾಟ ಅಥವಾ ಬೇರೆ ಯಾವುದೇ ರೀತಿಯಲ್ಲಿ ಬಳಕೆಯಾದ ಜಾಗದ ಟಿಡಿಆರ್‌ ಮೊತ್ತವನ್ನು ಹಿಂಪಡೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸುಗ್ರೀವಾಜ್ಞೆಯ ಮೂಲಕ ಅಧಿಕಾರ ಪಡೆಯುವುದೇ ಸೂಕ್ತ ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದು ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...