Homeಕರ್ನಾಟಕನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

- Advertisement -
- Advertisement -

ರಾಜ್ಯದಲ್ಲಿ ಉಂಟಾಗಿರುವ ಕನ್ನಡ ನಾಮಫಲಕ ಗೊಂದಲಕ್ಕೆ ಇತಿಶ್ರಿ ಹಾಡಲು ಸರ್ಕಾರ ಮುಂದಾಗಿದ್ದು, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಮಸೂದೆ’ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಈ ಮಸೂದೆ ಪ್ರಕಾರ, ಶೇ.50:50 ಅನುಪಾತದ ನಿಯಮವಿದೆ. ಅಂದರೆ, ನಾಮಫಲಕಗಳಲ್ಲಿ ಶೇ.50ರಷ್ಟು ಕನ್ನಡ ಕಡ್ಡಾಯಗೊಳಿಸಲಾಗಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ಶೇ. 60ರಷ್ಟು ಕನ್ನಡ ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಮಸೂದೆಗೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 28ರೊಳಗೆ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗೋರಿಕೋದ್ಯಮಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕನ್ನಡ ಸಂಸ್ಕೃತಿ ನಿರ್ದೇಶಕರ ಬದಲಿಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದವರನ್ನು ಸಂಚಾಲಕರನ್ನಾಗಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯವರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಈ ಅಂಶವು ತಿದ್ದುಪಡಿಯಲ್ಲಿ ಒಳಗೊಂಡಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ನಾಮಫಲಕಗಳಲ್ಲಿ ಮೇಲಿನ ಅರ್ಧಭಾಗದಲ್ಲಿ ಕನ್ನಡ ಹೆಸರು ಅಳವಡಿಸಬೇಕು ಎಂದು ಈ ಹಿಂದೆ ಕಾನೂನು ಹೇಳಿತ್ತು. ಸಿದ್ದರಾಮಯ್ಯ ಸರ್ಕಾರ ಮೇಲಿನ ಅರ್ಧ ಭಾಗದ ಬದಲು, ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಿದೆ. ನಾಮಫಲಕಗಳಲ್ಲಿ ಕನ್ನಡ ಹೆಸರು ಮೇಲಿನ ಭಾಗದಲ್ಲೇ ಇರಬೇಕೆಂದು ಸೂಚಿಸಿದೆ.

ನಾಮಫಲಕಗಳಲ್ಲಿ ಕನ್ನಡ ಬಳಸದೇ ಇರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡರ ಬಣದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ದೇವನಹಳ್ಳಿ ಸಮೀಪದ ಸಾದಹಳ್ಳಿ ಗೇಟ್‌ನಿಂದ ಹೊರಟ ಮೆರವಣಿಗೆ ಭಾರೀ ಸಂಚಲನ ಮೂಡಿಸಿತ್ತು. ಕರವೇ ಕಾರ್ಯಕರ್ತರು ಕೆಲವು ಕಡೆಗಳಲ್ಲಿ ನಾಮಫಲಕಗಳನ್ನು ಒಡೆದು ಹಾಕಿದ್ದರು. ಇದರಿಂದ ಹೋರಾಟ ಹಿಂಸೆಗೆ ತಿರುಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.

ನಾರಾಯಣಗೌಡ ಸೇರಿದಂತೆ 40ಕ್ಕೂ ಹೆಚ್ಚು ಜನರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ರಕ್ಷಣಾ ವೇದಿಕೆಯು, ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಶುಕ್ರವಾರದಿಂದ ಆರಂಭಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರ ಹೋರಾಟವನ್ನು ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಬೆಂಬಲಿಸಿದ್ದವು.

2023ರ ಮಾರ್ಚ್‌ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌ 17(6) ರಲ್ಲಿ ನಾಮಫಲಕಗಳಲ್ಲಿನ ಅರ್ಧ ಭಾಗವು (ಶೇ.50) ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿನ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...