ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ವಿಶ್ವವಿದ್ಯಾಲಯ (CEU) ನೀಡುವ ಓಪನ್ ಸೊಸೈಟಿ ಪ್ರಶಸ್ತಿ ದೊರೆತಿದೆ. ವಿಯೆನ್ನಾದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

“ಭಾರತದ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇರಳದ ಆರೋಗ್ಯದ ಸಚಿವರಾಗಿದ್ದ ಕೆ.ಕೆ.ಶೈಲಜಾ ಮತ್ತು ಅವರ ಆರೋಗ್ಯ ಸಿಬ್ಬಂದಿ, ನಾಯಕತ್ವ, ಸಮುದಾಯ ಆಧಾರಿತ ಸಾರ್ವಜನಿಕ ಆರೋಗ್ಯ ಮತ್ತು ಪರಿಣಾಮಕಾರಿ ಸಂವಹನವು ಜೀವಗಳನ್ನು ಉಳಿಸುತ್ತದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ” ಎಂದು ಸಿಇಯು ಅಧ್ಯಕ್ಷ ಮೈಕೆಲ್ ಇಗ್ನಾಟಿಫ್ ಹೇಳಿದ್ದಾರೆ

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಾಜಿ ಆರೋಗ್ಯ ಸಚಿವರು, ”ನಾನು ಇಲ್ಲಿ ಪ್ರಶಸ್ತಿ ಪಡೆಯುತ್ತಿರುವಾಗ, ಜಗತ್ತು  ಸಾಂಕ್ರಾಮಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಕೇರಳದಲ್ಲಿ ಸಾಂಕ್ರಾಮಿಕ ರೋಗವನ್ನು ಎದುರಿಸಲು ನಾವು ಒಂದು ಕಾರ್ಯತಂತ್ರವನ್ನು ರೂಪಿಸಿದಾಗ, ಅದು ಜನರಿಗೆ ಸರ್ಕಾರದ ಹೊಣೆಗಾರಿಕೆಯನ್ನು ಭದ್ರಪಡಿಸುವುದರ ಮೇಲೆ ಕೇಂದ್ರೀಕರಿಸಬೇಕಾಗಿತ್ತು. ನಾಗರಿಕ ಸಮಾಜದೊಂದಿಗೆ ಸಹಭಾಗಿತ್ವದಲ್ಲಿ ಕೆಲಸ ಮಾಡುವ ಮೂಲಕ ಅದನ್ನು ಜಾರಿಗೆ ತರಬೇಕು ಎಂಬುದು ತಿಳಿದಿತ್ತು” ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಸಾಂಕ್ರಾಮಿಕ ಆರೋಗ್ಯ ಬಿಕ್ಕಟ್ಟಿನ ದಿನಗಳಲ್ಲಿ ಶೈಲಜಾ ಅವರ ಕೆಲಸ, ನಾಯಕತ್ವವನ್ನು ಗುರುತಿಸಲಾಗಿದೆ. ಅವರ ಮಾದರಿ ಕೆಲಸಗಳಿಗೆ ಸಾರ್ವಜನಿಕರಿಂದ ಪ್ರಶಂಸ ವ್ಯಕ್ತವಾಗಿದೆ. ಶೈಲಜಾ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ, ವಿಶೇಷವಾಗಿ ತಳಮಟ್ಟದಲ್ಲಿ ಕೇರಳ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಯಿತು.

ಕೋವಿಡ್ ನಿರ್ವಹಣೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ಶೈಲಜಾ ಟೀಚರ್ ಅವರನ್ನು ಹೊಸ ಕ್ಯಾಬಿನೆಟ್‌ನಿಂದ ಕೈಬಿಟ್ಟಿದ್ದು ಟೀಕೆಗೆ ಕಾರಣವಾಗಿತ್ತು.


ಇದನ್ನೂ ಓದಿ: ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here